ಡೊನಾಲ್ಡ್ ಟ್ರಂಪ್ ಬಗ್ಗೆ ಹೊಗಳಿಕೆ ಮಾತುಗಳನ್ನಾಡಿದ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್!
ರಷ್ಯಾ
ಅಧ್ಯಕ್ಷ ವ್ಲಾದಿಮಿರ್ ಪುಟಿನ್ & ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಡುವೆ ಇತ್ತೀಚಿಗೆ ಭಾರಿ ದೊಡ್ಡ ತಿಕ್ಕಾಟ ಶುರುವಾಗಿದೆ ಎನ್ನುವಾಗಲೇ ದಿಢೀರ್ ಪುಟಿನ್ ಒಂದು ಹೇಳಿಕೆ ನೀಡಿದ್ದಾರೆ. ಉಕ್ರೇನ್ ಯುದ್ಧದ ವಿಚಾರದಲ್ಲಿ ಪುಟಿನ್ ವಿರುದ್ಧ ಕೋಪಗೊಂಡಿದ್ದ ಡೊನಾಲ್ಡ್ ಟ್ರಂಪ್, ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ್ದರು. ಇದಕ್ಕೆ ರಷ್ಯಾ ಕೂಡ ಸರಿಯಾದ ರೀತಿಯಲ್ಲಿ ತಿರುಗೇಟು ನೀಡಿತ್ತು, ಹೀಗಾಗಿ ಎರಡೂ ದೇಶಗಳ ನಡುವೆ ಭಾರಿ ದೊಡ್ಡ ಕಾದಾಟ ಶುರುವಾಗಿತ್ತು. ಇಷ್ಟೆಲ್ಲದರ ನಡುವೆ ಡೊನಾಲ್ಡ್ ಟ್ರಂಪ್ ಬಗ್ಗೆ ಹೊಗಳಿಕೆ ಮಾತುಗಳನ್ನಾಡಿದ್ದಾರೆ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್! id="toptextpromo"> id='are-slot-1' class='oiad oi-axt oiadv'> id='top-searched-articles'>ಅಂದಹಾಗೆ
ಇದೀಗ ಡೊನಾಲ್ಡ್ ಟ್ರಂಪ್ ಬಗ್ಗೆ ಮಾತನಾಡಿರುವ ವ್ಲಾದಿಮಿರ್ ಪುಟಿನ್, ಅಮೆರಿಕ ಅಧ್ಯಕ್ಷ ಟ್ರಂಪ್‌ಗೆ ನೊಬೆಲ್ ಶಾಂತಿ ಪ್ರಶಸ್ತಿ ಸಿಗದಿದ್ದರೂ ಈಗ ವಿಶ್ವದಲ್ಲಿ ಶಾಂತಿ ಸ್ಥಾಪನೆಗೆ ಅವರು ನಿರಂತರವಾಗಿ ಪ್ರಯತ್ನಿಸುತ್ತಿದ್ದಾರೆ ಅಂತಾ ಹೊಗಳಿಕೆಯ ಮಾತುಗಳನ್ನ ಆಡಿದ್ದಾರೆ. ಅಲ್ಲದೆ, ಅಮೆರಿಕ ಅಧ್ಯಕ್ಷರಾದ ಟ್ರಂಪ್, ಹಲವು ದೊಡ್ಡ ದೊಡ್ಡ ಸಮಸ್ಯೆಗಳನ್ನ ಬಗೆಹರಿಸಲು ಪ್ರಯತ್ನ ಮಾಡುತ್ತಿದ್ದಾರೆ. ಗಾಜಾದಲ್ಲಿ ಶಾಂತಿ ಒಪ್ಪಂದ ಅಂದುಕೊಂಡಂತೆ ಜಾರಿ ಮಾಡಲು ಸಾಧ್ಯವೇ ಆದಲ್ಲಿ ಅದೊಂದು ಐತಿಹಾಸಿಕವಾದ ಸಾಧನೆಯೇ ಸರಿ ಎಂದಿದ್ದಾರೆ ಪುಟಿನ್ ಅವರು. id='are-slot-2' class='oiad oi-axt oiadv'>












Click it and Unblock the Notifications