Breaking; ವಿಡಿಯೋ; ಜರ್ಮನಿಯಲ್ಲಿ ಮೋದಿಗೆ ಅದ್ದೂರಿ ಸ್ವಾಗತ

ಬರ್ಲಿನ್, ಮೇ 02; ಮೂರು ದಿನಗಳ ಕಾಲ ಯುರೋಪಿಯನ್ ದೇಶಗಳ ಪ್ರವಾಸ ಕೈಗೊಂಡಿರುವ ಭಾರತದ ಪ್ರಧಾನಿ ಜರ್ಮನಿಗೆ ಆಗಮಿಸಿದರು. ವಿಮಾನ ನಿಲ್ದಾಣದಲ್ಲಿ ಅವರನ್ನು ಅದ್ದೂರಿಯಾಗಿ ಸ್ವಾಗತಿಸಲಾಯಿತು.

ಮೇ 2, 3 ಮತ್ತು 4ರಂದು ಪ್ರಧಾನಿ ನರೇಂದ್ರ ಮೋದಿ ಯುರೋಪಿಯನ್ ರಾಷ್ಟ್ರಗಳ ಪ್ರವಾಸ ಕೈಗೊಂಡಿದ್ದಾರೆ. ಮೂರು ದಿನಗಳಲ್ಲಿ ಮೋದಿ 25 ಸಭೆಗಳಲ್ಲಿ ಪಾಲ್ಗೊಳ್ಳಲಿದ್ದು, ವಿವಿಧ ನಾಯಕರನ್ನು ಭೇಟಿ ಮಾಡಲಿದ್ದಾರೆ.

ಸೋಮವಾರ ಪ್ರಧಾನಿ ನರೇಂದ್ರ ಮೋದಿ ವಿದೇಶ ಪ್ರವಾಸಕ್ಕೆ ಚಾಲನೆ ಸಿಕ್ಕಿದೆ. ಮೋದಿ ಜರ್ಮನಿಯ ಫೆಡರಲ್ ಚಾನ್ಸೆಲರ್ ಓಲಾಫ್ ಸ್ಕೋಲ್ಜ್ ಆಹ್ವಾನದ ಮೇರೆಗೆ ಜರ್ಮನಿಯ ಬರ್ಲಿನ್‌ ತಲುಪಿದ್ದಾರೆ.

Warm Welcome For PM Narendra Modi In Germany

ಮೇ 3, 4ರಂದು ಡೆನ್ಮಾರ್ಕ್ ಪ್ರಧಾನ ಮಂತ್ರಿ ಮೆಟ್ಟೆ ಫೆಡ್ರಿಕ್ಸನ್ ಆಹ್ವಾನದಂತೆ ಮೋದಿ ಕೋಪನ್‌ ಹೇಗನ್‌ಗೆ ಭೇಟಿ ನೀಡುತ್ತಿದ್ದಾರೆ. ಪ್ರಧಾನಮಂತ್ರಿಗಳ ಜೊತೆ ಮೋದಿ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ.

ನರೇಂದ್ರ ಮೋದಿ ಎರಡನೇ ಭಾರತ-ನಾರ್ಡಿಕ್ ಶೃಂಗಸಭೆಯಲ್ಲಿ ಭಾಗವಹಿಸುತ್ತಿದ್ದಾರೆ. ಭಾರತಕ್ಕೆ ಹಿಂತಿರುಗುವಾಗ, ಫ್ರಾನ್ಸ್‌ನ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರೋನ್ ಜೊತೆ ಪ್ಯಾರೀಸ್‌ನಲ್ಲಿ ಕೆಲವು ಕಾಲ ಮೋದಿ ಮಾತುಕತೆ ನಡೆಸಲಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+