ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಾಶ್ಮೀರ ಸ್ಥಿತಿಯ ಮೇಲೆ ಗಮನ ಇಟ್ಟಿದ್ದೇವೆ: ಚೀನಾ ಅಧ್ಯಕ್ಷ ಜಿನ್‌ಪಿಂಗ್

|
Google Oneindia Kannada News

ಬೀಜಿಂಗ್, ಅಕ್ಟೋಬರ್ 9: ಕಾಶ್ಮೀರದ ಸನ್ನಿವೇಶವನ್ನು ಗಮನಿಸುತ್ತಿದ್ದು, ಪಾಕಿಸ್ತಾನದ ಮೂಲ ಹಿತಾಸಕ್ತಿಯ ವಿಚಾರಗಳಿಗೆ ಸಂಬಂಧಿಸಿದಂತೆ ಅದನ್ನು ಬೆಂಬಲಿಸುವುದಾಗಿ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಹೇಳಿದ್ದಾರೆ.

ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಅವರೊಂದಿಗೆ ಬೀಜಿಂಗ್‌ನಲ್ಲಿ ನಡೆದ ಸಭೆಯ ಬಳಿಕ ಕಾಶ್ಮೀರ ವಿಚಾರಕ್ಕೆ ಸಂಬಂಧಿಸಿದಂತೆ ಸರಿ ಮತ್ತು ತಪ್ಪುಗಳು ಸ್ಪಷ್ಟವಾಗಿವೆ ಎಂದು ಕ್ಸಿ ಹೇಳಿರುವುದಾಗಿ ಚೀನಾದ ಸರ್ಕಾರಿ ಸ್ವಾಮ್ಯದ ಸುದ್ದಿ ಸಂಸ್ಥೆ ಕ್ಸಿನುವಾ ನ್ಯೂಸ್ ವರದಿ ಮಾಡಿದೆ.

'ಚೀನಾದಲ್ಲಿನ ಮುಸ್ಲಿಮರ ಸ್ಥಿತಿ ಬಗ್ಗೆ ಇಮ್ರಾನ್ ಏಕೆ ತುಟಿ ಬಿಚ್ಚುವುದಿಲ್ಲ?' 'ಚೀನಾದಲ್ಲಿನ ಮುಸ್ಲಿಮರ ಸ್ಥಿತಿ ಬಗ್ಗೆ ಇಮ್ರಾನ್ ಏಕೆ ತುಟಿ ಬಿಚ್ಚುವುದಿಲ್ಲ?'

ಈ ವಿವಾದವನ್ನು ಎರಡೂ ದೇಶಗಳು ಶಾಂತಿಯುತ ಮಾತುಕತೆಯ ಮೂಲಕವೇ ಬಗೆಹರಿಸಿಕೊಳ್ಳಬೇಕು ಎಂದು ಕ್ಸಿ ಅಭಿಪ್ರಾಯಪಟ್ಟಿದ್ದಾರೆ. ಚೀನಾ ಮತ್ತು ಪಾಕಿಸ್ತಾನ ನಡುವಣ ಗೆಳೆತನವು ಅಂತಾರಾಷ್ಟ್ರೀಯ ಹಾಗೂ ಪ್ರಾದೇಶಿಕ ಸ್ಥಿತಿಗತಿಗಳ ಬದಲಾವಣೆಗಳ ನಡುವೆಯೂ ಮುರಿಯಲಾಗದ್ದು ಮತ್ತು ಕಲ್ಲಿನಂತೆ ದೃಢವಾಗಿರಲಿದೆ ಎಂದು ಇಮ್ರಾನ್ ಖಾನ್ ಅವರಿಗೆ ಭರವಸೆ ನೀಡಿದ್ದಾರೆ.

 Watching Kashmir Situation China President Xi Jinping

ಕಳೆದ ವರ್ಷ ಆಗಸ್ಟ್‌ನಲ್ಲಿ ಪ್ರಧಾನಿಯಾಗಿ ಅಧಿಕಾರಿ ಸ್ವೀಕರಿಸಿದ ಬಳಿಕ ಇಮ್ರಾನ್ ಖಾನ್ ಚೀನಾಕ್ಕೆ ಭೇಟಿ ನೀಡುತ್ತಿರುವುದು ಇದು ಮೂರನೇ ಬಾರಿ. ಇದೇ 11 ಮತ್ತು 12ರಂದು ಚೆನ್ನೈಗೆ ಭೇಟಿ ನೀಡಲಿರುವ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್, ಅದಕ್ಕೂ ಮೊದಲು ಇಮ್ರಾನ್ ಖಾನ್ ಜತೆ ಮಾತುಕತೆ ನಡೆಸಿದ್ದಾರೆ.

ಚೀನಾ ಡ್ರೋನ್ ಮೂಲಕ ಪಾಕಿಸ್ತಾನದಿಂದ ಪಂಜಾಬಿಗೆ ಬಂದ ಶಸ್ತ್ರಾಸ್ತ್ರಗಳು! ಚೀನಾ ಡ್ರೋನ್ ಮೂಲಕ ಪಾಕಿಸ್ತಾನದಿಂದ ಪಂಜಾಬಿಗೆ ಬಂದ ಶಸ್ತ್ರಾಸ್ತ್ರಗಳು!

ಚೆನ್ನೈನ ಮಾಮಲ್ಲಪುರಂನಲ್ಲಿ ಕ್ಸಿ ಜಿನ್‌ಪಿಂಗ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಅನೌಪಚಾರಿಕ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.

English summary
China president Xi Jinping on Wednesday said that he is watching the situation of Kashmir and will support Pakistan in issues related to its core interests.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X