ಅರ್ಥ್ ಅವರ್ 2020:ಸಣ್ಣ ಕ್ರಮ, ವಿದ್ಯುತ್ ಉಳಿತಾಯದಲ್ಲಿ ದೊಡ್ಡ ಪಾತ್ರ
ನವದೆಹಲಿ, ಮಾರ್ಚ್ 28: ಮಾರ್ಚ್ 28 ಬಂದೇ ಬಿಟ್ಟಿದೆ. ಇಂದು ಪ್ಯಾರಿಸ್‌ನ ಐಫೆಲ್ ಟವರ್ ಮಂಕಾಗಲಿದೆ. ಮತ್ತೊಮ್ಮೆ ಅರ್ಥ್ ಅವರ್ ಮತ್ತೆ ಬಂದಿದೆ. ಇದೇ ಶನಿವಾರ ಅಂದರೆ ಮಾರ್ಚ್ 28 ರಂದು ರಾತ್ರಿ 8.30 ರಿಂದ 9.30 ರವರೆಗೆ ಎಲ್ಲ ಮನೆಯ ವಿದ್ಯುತ್ ದೀಪಗಳು ಬಂದ್ ಆಗಲಿವೆ.
ಜಾಗತಿಕ ತಾಪಮಾನ ನಿಯಂತ್ರಣ, ಏರುತ್ತಿರುವ ಪರಿಸರ ಮಾಲಿನ್ಯ ತಡೆ ಹಿನ್ನೆಲೆಯಲ್ಲಿ ಹುಟ್ಟಿಕೊಂಡಿರುವ ಅರ್ಥ್ ಅವರ್ ಕಾರ್ಯಕ್ರಮವನ್ನು ಜಗತ್ತಿನಾದ್ಯಂತ ಆಚರಿಸಲಾಗುತ್ತಿದೆ.

170 ದೇಶಗಳ ವಿವಿಧ ನಗರಗಳಲ್ಲಿ ವಿದ್ಯುತ್ ದೀಪಗಳನ್ನು ಒಂದು ಗಂಟೆ ಕಾಲ ಬಂದ್ ಮಾಡಲಾಗುತ್ತದೆ. ಯುನೆಸ್ಕೋದ ಸದಸ್ಯ ರಾಷ್ಟ್ರಗಳು ಕಾರ್ಯಕ್ರಮಕ್ಕೆ ಕೈ ಜೋಡಿಸಿವೆ . ಅರ್ಥ್ ಅವರ್ ಕಾರ್ಯಕ್ರಮವನ್ನು ಪಾಲಿಸಲು ಅನೇಕ ಸಂಸ್ಥೆಗಳು, ಕಚೇರಿಗಳು ಸಜ್ಜಾಗಿವೆ. ಆದರೆ ಕೊರೊನಾ ವೈರಸ್ ಭೀತಿಯಿಂದಾಗಿ ಸಾಕಷ್ಟು ಕಾರ್ಯಕ್ರಮಗಳು ರದ್ದಾಗಿವೆ.
ಅರ್ಥ್ ಅವರ್ ಎಂದರೇನು?
-ಆಸ್ಟ್ರೇಲಿಯಾದ ವರ್ಲ್ಡ್ ವೈಡ್ ಫಂಡ್ ಫಾರ್ ನೇಚರ್ ಸ್ವಯಂ ಸೇವಾ ಸಂಸ್ಥೆ ಈ ಆಂದೋಲನದ ಜನಕ.
-2007ರಲ್ಲಿ ಸಿಡ್ನಿಯಲ್ಲಿ ಜಾರಿಗೆ ಬಂದ ಇದು ಜಾಗತಿಕವಾಗಿ ಮನ್ನಣೆ ಪಡೆಯಿತು.
-ಈ ಅಭಿಯಾನದಲ್ಲಿ ಭಾರತ ಸೇರಿದಂತೆ 162 ದೇಶಗಳು ಭಾಗವಹಿಸಿವೆ. ಬೆಂಗಳೂರು ಸೇರಿ 7 ಸಾವಿರಕ್ಕೂ ಹೆಚ್ಚು ನಗರಗಳು ಪಾಲ್ಗೊಂಡಿವೆ.
-ಸಾಮಾನ್ಯವಾಗಿ ಮಾರ್ಚ್ 28 ಅಥವಾ 29 ಇದನ್ನು ಆಚರಸಲಾಗುತ್ತೆ.
ಅರ್ಥ್ ಅವರ್ ಆಚರಣೆಗೆ ಪ್ರಮುಖ ಕಾರಣಗಳು
-ಸಣ್ಣ ಪ್ರಯತ್ನ ದೊಡ್ಡ ಬದಲಾವಣೆ ಮನೆಯಲ್ಲಿ ಕೋಣೆಯನ್ನು ಉಪಯೋಗಿಸದೇ ಇದ್ದಾಗ ಲೈಟ್ ಆಫ್ ಮಾಡುವುದು, ಅನಗತ್ಯ ವಿದ್ಯುತ್ ಬಳಸದೇ ಇರುವುದು , ಕಡಿಮೆ ಶಾಖದಲ್ಲಿ ಬಲ್ಬ್‌ಗಳನ್ನು ಬಳಸುವುದರಿಂದ ಕೋಣೆಯ ತಾಪಮಾನ ನಿಯಂತ್ರಣದಲ್ಲಿರುತ್ತದೆ. ಹೀಗೆ ವಿದ್ಯುತ್ ಉಳಿತಾಯದಲ್ಲಿ ಸಣ್ಣ ಪುಟ್ಟ ಕ್ರಮಗಳು ಕೂಡ ತಾಪಮಾನ ನಿಯಂತ್ರಣದಲ್ಲಿ ಬಹುದೊಡ್ಡ ಪಾತ್ರವಹಿಸುತ್ತವೆ.
-ಅರಿವು ಮೂಡಿಸುವ ಸಣ್ಣ ಪ್ರಯತ್ನ ವರ್ಷಕ್ಕೆ ಒಂದು ತಾಸು ವಿದ್ಯುತ್ ಸ್ವಿಚ್‌ಗಳನ್ನು ಆಫ್ ಮಾಡುವುದರಿಂದ ಜಾಗತಿಕ ತಾಪಮಾನ ಕಡಿಮೆಯಾಗುತ್ತದೆಯೇ ಎಂಬುದು ಎಲ್ಲರ ಪ್ರಶ್ನೆಯಾಗಿದೆ. ಉತ್ತಮ ಭವಿಷ್ಯದ ದೃಷ್ಟಿಯಿಂದ ವಿದ್ಯುತ್ ಮಿತವ್ಯಯ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಅಗತ್ಯವಿದೆ. ವಿದ್ಯುತ್ ಬಳಕೆ ಹೆಚ್ಚಿದಂತೆಲ್ಲಾ ಜಾಗತಿಕ ತಾಪಮಾನ ಏರಿಕೆಗೂ ಕಾರಣವಾಗುತ್ತದೆ.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
Karnataka Rain Alert: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ, ಮಿನಿ ಕಾಶ್ಮೀರದಂತಾದ ರಸ್ತೆಗಳು; ಇನ್ನೆಷ್ಟು ದಿನ ವರುಣನ ಆರ್ಭಣ? -
Rain Alert: ಬೇಸಿಗೆ ಮಳೆಗೆ ಬೆಂಗಳೂರಿನ ಕೆಲವೆಡೆ ಸಂಚಾರ ಅಸ್ತವ್ಯಸ್ತ, ಮಾ.21ರವರೆಗೂ ಮಳೆ -
Bengaluru Airport: ಮಳೆ ಅಬ್ಬರಕ್ಕೆ 30 ವಿಮಾನಗಳ ಮಾರ್ಗ ಬದಲು, ಏರ್ಪೋರ್ಟ್ ಟರ್ಮಿನಲ್ನಲ್ಲಿ ನೀರು ಸೋರಿಕೆ -
ಆಲಿಕಲ್ಲು ಮಳೆಗೆ ನೆಲಕಚ್ಚಿದ ಮಾವು, ಹಲಸು, ಕಲ್ಲಂಗಡಿ; ಕೈಗೆ ಬಂದ ತುತ್ತು ಬಾಯಿಗಿಲ್ಲ -
Heavy Rain: ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಆಲಿಕಲ್ಲು ಸಹಿತ ಧಾರಾಕಾರ ಮಳೆ: ಐಎಂಡಿ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ












Click it and Unblock the Notifications