ಕೊರೊನಾ ವೈರಸ್ ಚೀನಾ ಲ್ಯಾಬ್ನಿಂದ ಬಂದಿದ್ದಲ್ಲ: WHO ವರದಿ
ಬೀಜಿಂಗ್, ಮಾರ್ಚ್ 29: ಕೊರೊನಾ ವೈರಸ್ ಮನುಷ್ಯರಿಗೆ ಹರಡಿದ್ದು ಹೇಗೆ ಎಂಬ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ-ಚೀನಾ ಜಂಟಿ ಅಧ್ಯಯನ ವರದಿ ಬಹಿರಂಗವಾಗಿದೆ. ಈ ವರದಿ ಪ್ರಕಾರ ಚೀನಾದ ಲ್ಯಾಬ್ನಿಂದ ವೈರಸ್ ಸೋರಿಕೆ ಆಗಿದೆ ಎಂಬ ಅಭಿಪ್ರಾಯಗಳು ಕಪೋಲಕಲ್ಪಿತ. ಕೋವಿಡ್-19 ವೈರಸ್ ಬಾವಲಿಗಳಿಂದ ಬೇರೊಂದು ಪ್ರಾಣಿಯಿಂದ ಮನುಷ್ಯರಿಗೆ ಹರಡಿರುವ ಸಾಧ್ಯತೆಯೇ ಹೆಚ್ಚು ಎಂದು ಅದು ತಿಳಿಸಿದೆ.
ಡಬ್ಲ್ಯೂಎಚ್ಒ ಮತ್ತು ಚೀನಾದ ಈ ಜಂಟಿ ಅಧ್ಯಯನವು, ಪ್ರಯೋಗಾಲಯದಿಂದ ವೈರಸ್ ಸೋರಿಕೆಯಾಗಿದೆ ಎಂಬ ಆರೋಪಗಳು ಕಲ್ಪಿತವಷ್ಟೇ ಎಂದು ವರದಿಗಳನ್ನು ತಳ್ಳಿಹಾಕಿವೆ. ಈ ಅಧ್ಯಯನವು ಬಹುತೇಕ ನಿರೀಕ್ಷೆಯಂತೆಯೇ ಇದ್ದು, ಅನೇಕ ಪ್ರಶ್ನೆಗಳಿಗೆ ಉತ್ತರವನ್ನೇ ಒದಗಿಸಿಲ್ಲ.
ವಿಶ್ವ ಅರೋಗ್ಯ ಸಂಸ್ಥೆಯ ತಂಡವು ಕಳೆದ ಜನವರಿಯಲ್ಲಿಯೇ ಚೀನಾಕ್ಕೆ ಭೇಟಿ ನೀಡಿದ್ದರೂ ಅದರ ವರದಿ ಬಿಡುಗಡೆಯಾಗುವುದು ವಿಳಂಬವಾಗುತ್ತಲೇ ಇತ್ತು. ಕೊರೊನಾ ವೈರಸ್ ಸಾಂಕ್ರಾಮಿಕಕ್ಕೆ ತಾನು ಕಾರಣ ಎಂಬ ಅಪವಾದದಿಂದ ತಪ್ಪಿಸಿಕೊಳ್ಳಲು ಈ ವರದಿಯಲ್ಲಿ ಚೀನಾ ಹಸ್ತಕ್ಷೇಪ ಮಾಡುತ್ತಿರಬಹುದು ಎಂಬ ಅನುಮಾನಗಳು ವ್ಯಕ್ತವಾಗಿದ್ದವು.

ಜಿನೇವಾ ಮೂಲದ ವಿಶ್ವ ಆರೋಗ್ಯ ಸಂಸ್ಥೆಯ ಸದಸ್ಯ ದೇಶವೊಂದರ ರಾಜತಾಂತ್ರಿಕರಿಂದ ಈ ವರದಿಯಿಂದ ಸಂಪೂರ್ಣ ಆವೃತ್ತಿಯನ್ನು ಪಡೆದುಕೊಂಡಿರುವ ಅಸೋಸಿಯೇಟೆಡ್ ಪ್ರೆಸ್ ಸುದ್ದಿ ಸಂಸ್ಥೆ, ಅದರ ವಿವರಗಳನ್ನು ಬಹಿರಂಗಪಡಿಸಿದೆ. ಆದರೆ ವರದಿ ಇನ್ನೂ ಅಧಿಕೃತವಾಗಿ ಬಿಡುಗಡೆಯಾಗಬೇಕಿದ್ದು, ಅದರಲ್ಲಿನ ಅಂಶಗಳನ್ನು ಬಿಡುಗಡೆ ಮಾಡಲಾಗುತ್ತದೆಯೇ ಎನ್ನುವುದು ಸ್ಪಷ್ಟವಾಗಿಲ್ಲ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications