ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಆಸ್ಟ್ರಾಜೆನೆಕಾ ಲಸಿಕೆ ಬಳಕೆಗೆ ಆಕ್ಷೇಪ; ವಿಶ್ವ ಆರೋಗ್ಯ ಸಂಸ್ಥೆ ಸ್ಪಷ್ಟನೆ

|
Google Oneindia Kannada News

ಜೆನೆವಾ, ಮಾರ್ಚ್ 12: ರಕ್ತ ಹೆಪ್ಪುಗಟ್ಟುವ ಸಮಸ್ಯೆ ಉಂಟಾದ ಕಾರಣ ಆಸ್ಟ್ರಾಜೆನೆಕಾ ಕೊರೊನಾ ಲಸಿಕೆ ಬಳಕೆಯನ್ನು ಹಲವು ಯುರೋಪಿಯನ್ ರಾಷ್ಟ್ರಗಳು ನಿಲ್ಲಿಸಿದ್ದು, ಈ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ಸ್ಪಷ್ಟನೆ ನೀಡಿದೆ. ಆಸ್ಟ್ರಾಜೆನೆಕಾ ಲಸಿಕೆ ಬಳಕೆ ನಿಲ್ಲಿಸುವ ಯಾವುದೇ ಕಾರಣವಿಲ್ಲ ಎಂದು ತಿಳಿಸಿದೆ.

ಕೊರೊನಾ ಸೋಂಕಿಗೆ ನೀಡಿದ ಆಸ್ಟ್ರಾಜೆನೆಕಾ ಲಸಿಕೆಯಿಂದ ಕೆಲವರಲ್ಲಿ ರಕ್ತ ಹೆಪ್ಪುಗಟ್ಟುವಿಕೆ ಸಮಸ್ಯೆ ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಕೊವಿಡ್-19 ಲಸಿಕೆಯನ್ನು ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿದೆ ಎಂದು ಡೆನ್ಮಾರ್ಕ್ ಘೋಷಿಸಿತ್ತು. ಕೊರೊನಾ ವೈರಸ್ ಸೋಂಕಿತರಲ್ಲಿ ಲಸಿಕೆ ನೀಡಿದ ನಂತರ ರಕ್ತ ಹೆಪ್ಪುಗಟ್ಟುವುದು ಸೇರಿದಂತೆ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿರುವ ಹಿನ್ನೆಲೆ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಡೆನ್ಮಾರ್ಕ್ ಆರೋಗ್ಯ ಪ್ರಾಧಿಕಾರ ತಿಳಿಸಿತ್ತು.

ಡೆನ್ಮಾರ್ಕ್, ಇಟಲಿಯಲ್ಲಿ ಆಸ್ಟ್ರಾಜೆನಿಕಾ ಕೊರೊನಾ ಲಸಿಕೆ ವಿತರಣೆ ಸ್ಥಗಿತ!ಡೆನ್ಮಾರ್ಕ್, ಇಟಲಿಯಲ್ಲಿ ಆಸ್ಟ್ರಾಜೆನಿಕಾ ಕೊರೊನಾ ಲಸಿಕೆ ವಿತರಣೆ ಸ್ಥಗಿತ!

ಆಸ್ಟ್ರಾಜೆನಿಕಾ ಲಸಿಕೆಯನ್ನು ಯುರೋಪಿಯನ್ ಖಂಡದ 17 ರಾಷ್ಟ್ರಗಳಿಗೆ ಕಳುಹಿಸಲಾಗಿತ್ತು. ಈ ಪೈಕಿ ನಾಲ್ಕು ಯುರೋಪಿಯನ್ ರಾಷ್ಟ್ರಗಳಾದ ಎಸ್ಟೋನಿಯಾ, ಲಾಟ್ವಿಯಾ, ಲಿಥುವೇನಿಯಾ ಮತ್ತು ಲಕ್ಸೆಂಬರ್ಗ್ ನಲ್ಲಿ ಲಸಿಕೆಗಳ ವಿತರಣೆ ಸ್ಥಗಿತಗೊಳಿಸಲಾಗಿತ್ತು. ಡೆನ್ಮಾರ್ಕ್, ನಾರ್ವೆ, ಐಲೆಂಡ್, ಇಟಲಿ, ರೊಮಾನಿಯಾ ಆಸ್ಟ್ರಾಜೆನೆಕಾ ಲಸಿಕೆ ಬಳಕೆಯನ್ನು ಸ್ಥಗಿತಗೊಳಿಸಿದ್ದವು.

WHO Clarification On Using AstraZeneca Vaccine

ಕೊರೊನಾ ಲಸಿಕೆಯ ಸಲಹಾ ಸಮಿತಿ ಆಸ್ಟ್ರಾಜೆನೆಕಾ ಲಸಿಕೆಯ ಸುರಕ್ಷತಾ ಮಾನದಂಡಗಳನ್ನು ಪರಿಶೀಲಿಸಿದ್ದು, ರಕ್ತ ಹೆಪ್ಪುಗಟ್ಟುವಿಕೆಗೂ ಲಸಿಕೆಗೂ ಯಾವುದೇ ಸಂಬಂಧವಿಲ್ಲ ಎಂಬುದನ್ನು ದೃಢಪಡಿಸಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಸ್ಪಷ್ಟನೆ ನೀಡಿದೆ.

"ಆಸ್ಟ್ರಾಜೆನೆಕಾ ಅತ್ಯುತ್ತಮ ಲಸಿಕೆ. ಲಸಿಕೆಯ ವಿಶ್ಲೇಷಣೆ ನಡೆಸಿದ್ದೇವೆ. ಆದರೆ ಲಸಿಕೆಯಲ್ಲಿ ಯಾವುದೇ ದೋಷ ಕಂಡುಬಂದಿಲ್ಲ. ಆಸ್ಟ್ರಾಜೆನೆಕಾ ಲಸಿಕೆ ಬಳಕೆಯನ್ನು ಮುಂದುವರೆಸಬಹುದು" ಎಂದು ಡಬ್ಲುಎಚ್ ‌ಒ ವಕ್ತಾರರಾದ ಮಾರ್ಗರೆಟ್ ಹ್ಯಾರಿಸ್ ತಿಳಿಸಿದ್ದಾರೆ.

English summary
World Health Organization clarified that there was no reason to stop using AstraZeneca's Covid-19 vaccine
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X