ವಿಶ್ವ ಆರೋಗ್ಯ ಸಂಸ್ಥೆಯ ಇಬ್ಬರು ಸಿಬ್ಬಂದಿಗೆ ಕೊರೊನಾ ಸೋಂಕು
ದೆಹಲಿ, ಮಾರ್ಚ್ 17: ಕೊರೊನಾ ವೈರಸ್ ಸಾಂಕ್ರಮಿಕ ರೋಗ ಎಂದು ಘೋಷಿಸಿ, ಜಾಗತಿಕ ಮಟ್ಟದಲ್ಲಿ ಈ ರೋಗದ ವಿರುದ್ಧ ಹೋರಾಡುತ್ತಿರುವ ವಿಶ್ವ ಸಂಸ್ಥೆಯ ಸಿಬ್ಬಂದಿಗೆ ಈಗ ಕೊರೊನಾ ಸೋಂಕು ಪತ್ತೆಯಾಗಿದೆ.
ಈ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆಯ ಅಧಿಕಾರಿಯೊಬ್ಬರ ಮಂಗಳವಾರ ಮಾಹಿತಿ ನೀಡಿದ್ದು, ಜಿನೇವಾದ ಕಚೇರಿಯಲ್ಲಿ ಮೊದಲ ಕೇಸ್ ಪತ್ತೆಯಾಗಿದ್ದು, ಇನ್ನೊಂದು ಕೇಸ್ ವಿಶ್ವ ವಾಣಿಜ್ಯ ಮಂಡಳಿಯಲ್ಲಿ ದಾಖಲಾಗಿದೆ ಎಂದು ತಿಳಿಸಿದ್ದಾರೆ.
ಸಿಬ್ಬಂದಿ ಕಚೇರಿಯಿಂದ ಮನೆಗೆ ಹೋದ ಬಳಿಕ, ಮನೆಯಲ್ಲಿ ರೋಗಲಕ್ಷಣಗಳು ಕಾಣಿಸಿಕೊಂಡಿದೆ. ನಂತರ ಅವರಿಗೆ ಕೊರೊನಾ ಪರೀಕ್ಷೆ ಮಾಡಲಾಯಿತು. ಪರೀಕ್ಷೆ ನಂತರ ಸೋಂಕು ತಗುಲಿರುವುದು ಖಚಿತವಾಗಿದೆ ಎಂದು WHO ವಕ್ತಾರ ಕ್ರಿಶ್ಚಿಯನ್ ಲಿಂಡ್ಮಿಯರ್ ಪತ್ರಕರ್ತರಿಗೆ ತಿಳಿಸಿದ್ದಾರೆ. ಇದುವರೆಗೂ ಇಬ್ಬರು ಸಿಬ್ಬಂದಿಯಲ್ಲಿ ಕೊರೊನಾ ಕಾಣಿಸಿಕೊಂಡಿದೆ ಎಂದು ಅಧಿಕೃತವಾಗಿ ಮಾಹಿತಿ ನೀಡಿದ್ದಾರೆ.

ಜಗತ್ತಿನಲ್ಲಿ 1,88,383 ಕೊರೊನಾ ಕೇಸ್‌ಗಳು ದಾಖಲಾಗಿದೆ. ಅದರಲ್ಲಿ 7,499 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಚೀನಾದಲ್ಲಿ 3226 ಜನರು, ಇಟಲಿಯಲ್ಲಿ 2158 ಜನರು ಹಾಗೂ ಇರಾನ್‌ನಲ್ಲಿ 988ಜನರು ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ.












Click it and Unblock the Notifications