ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೋವಿಡ್ 19; ವಿಶ್ವ ಆರೋಗ್ಯ ಸಂಸ್ಥೆ ಮಹತ್ವದ ಘೋಷಣೆ

|
Google Oneindia Kannada News

ನ್ಯೂಯಾರ್ಕ್, ಮಾರ್ಚ್ 11: ಜಾಗತಿಕವಾಗಿ ತೀವ್ರ ತಲ್ಲಣ ಸೃಷ್ಟಿಸಿರುವ ಕೊರೊನಾ ವೈರಸ್ (ಕೋವಿಡ್ 19) ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ಬುಧವಾರ ಮಹತ್ವದ ನಿರ್ಧಾರ ತೆಗೆದುಕೊಂಡಿದೆ.

Recommended Video

ರಾಜ್ಯದಲ್ಲಿ ಕಠಿಣ ಕಾನೂನು ಜಾರಿ ಮಾಡಿದ ಸರ್ಕಾರ | Health | Celebrity With Corona | Oneindia Kannada

ಕೋವಿಡ್ 19 ಒಂದು ಸಾಂಕ್ರಾಮಿಕ ರೋಗ ಎಂದು ಘೋಷಣೆ ವಿಶ್ವ ಆರೋಗ್ಯ ಸಂಸ್ಥೆ ಘೋಷಣೆ ಹೊರಡಿಸಿದೆ. ಚೀನಾದಲ್ಲಿ ಹುಟ್ಟಿ ಇಡೀ ಜಗತ್ತನ್ನು ಆವರಿಸಿಕೊಳ್ಳುತ್ತಿರುವ ಮಾರಕ ಕೊರೊನಾ ಒಂದು ಸಾಂಕ್ರಾಮಿಕ ರೋಗ. ಇದನ್ನು ತಡೆಗಟ್ಟಲು ಎಲ್ಲ ರಾಷ್ಟ್ರಗಳು ಜಾಗೃತರಾಗಬೇಕು ಎಂದು ವಿಶ್ವ ಆರೋಗ್ಯ ಸಂಸ್ಥೆ ಮನವಿ ಮಾಡಿದೆ.

ಕೊರೊನಾ ಕಂಟಕ: ಬೆಂಗಳೂರಿನ ಮಾಲ್, ಥಿಯೇಟರ್ ಗಳು ಖಾಲಿ ಖಾಲಿಕೊರೊನಾ ಕಂಟಕ: ಬೆಂಗಳೂರಿನ ಮಾಲ್, ಥಿಯೇಟರ್ ಗಳು ಖಾಲಿ ಖಾಲಿ

ಜಗತ್ತಿನ 114 ರಾಷ್ಟ್ರಗಳಲ್ಲಿ ಕೋವಿಡ್ 19 ಕಾಣಿಸಿಕೊಂಡಿದೆ. 1.14 ಲಕ್ಷ ಜನರಿಗೆ ಸೋಂಕು ತಗುಲಿದೆ. 4083 ಜನ ಮೃತಪಟ್ಟಿದ್ದಾರೆ ಎಂದು ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿದೆ. ಶೇ 85 ರಷ್ಟು ಸೋಂಕಿನ ಮೂಲಕವೇ ರೋಗ ಹರಡುತ್ತಿದೆ ಎಂದು ಉಲ್ಲೇಖಿಸಲಾಗಿದೆ.

WHO Declares The Coronavirus Is A Pandemic

ಜಾಗತಿಕ ಆರೋಗ್ಯ ಕ್ಷೇತ್ರದಲ್ಲಿ ಕೊರೊನಾ ಒಂದು ಗಂಭೀರ ಪಿಡುಗಾಗಿದ್ದು, ಎಲ್ಲ ರಾಷ್ಟ್ರಗಳು ಅಗತ್ಯ ಮುಂಜಾಗ್ರತೆ ಕ್ರಮ ಕೈಗೊಂಡು ವೈರಸ್ ಸೋಂಕು ಹರಡುವುದನ್ನು ತಡೆಗಟ್ಟಬೇಕು ಎಂದು ತಿಳಿಸಿದೆ.

English summary
WHO Declares The Coronavirus Is A Pandemic. WHO Declares it On Wednesday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X