ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೋವಿಡ್; ವಿಶ್ವ ಆರೋಗ್ಯ ಸಂಸ್ಥೆ ಮುಖ್ಯಸ್ಥರು ಕ್ವಾರಂಟೈನ್!

|
Google Oneindia Kannada News

ಜಿನೀವಾ, ನವೆಂಬರ್ 02 : ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯಸ್ಥರು ಕೋವಿಡ್ ಸೋಂಕಿತರ ಸಂಪರ್ಕಕ್ಕೆ ಬಂದಿದ್ದು ಕ್ವಾರಂಟೈನ್ ಆಗಿದ್ದಾರೆ. ಈ ಕುರಿತು ಅವರು ಟ್ವೀಟ್ ಮಾಡಿದ್ದು, ಸೋಂಕಿನ ಯಾವುದೇ ಲಕ್ಷಣಗಳು ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ವಿಶ್ವ ಆರೋಗ್ಯ ಸಂಸ್ಥೆ ಡೈರೆಕ್ಟರ್ ಜನರಲ್ ಡಾ. ಟೆಡ್ರೋಸ್ ಅಧನೋಮ್ ಭಾನುವಾರ ಕ್ವಾರಂಟೈನ್ ಆಗಿದ್ದಾರೆ. "ಕೋವಿಡ್ ಸೋಂಕಿತ ವ್ಯಕ್ತಿಯ ಸಂಪರ್ಕಕ್ಕೆ ಬಂದ ಕಾರಣ ನಾನು ಸ್ವಯಂ ಕ್ವಾರಂಟೈನ್‌ಗೆ ಒಳಗಾಗಿದ್ದೇನೆ" ಎಂದು ಟೆಡ್ರೋಸ್ ಟ್ವೀಟ್ ಮಾಡಿದ್ದಾರೆ.

ಕೋವಿಡ್ ಸೋಂಕಿತರ ಸಂಖ್ಯೆ; ಕರ್ನಾಟಕಕ್ಕೆ 2ನೇ ಸ್ಥಾನ ಕೋವಿಡ್ ಸೋಂಕಿತರ ಸಂಖ್ಯೆ; ಕರ್ನಾಟಕಕ್ಕೆ 2ನೇ ಸ್ಥಾನ

WHO Director General Tedros Adhanom Ghebreyesus In Self Quarantine

"ನಾನು ಆರೋಗ್ಯವಾಗಿದ್ದೇನೆ. ಸೋಂಕಿನ ಯಾವುದೇ ಲಕ್ಷಣಗಳು ಇಲ್ಲ. ಮುಂದಿನ ಕೆಲವು ದಿನ ನಾನು ಕ್ವಾರಂಟೈನ್‌ನಲ್ಲಿ ಇರಲಿದ್ದು, ವಿಶ್ವ ಆರೋಗ್ಯ ಸಂಸ್ಥೆಯ ಮಾರ್ಗಸೂಚಿಗಳ ಪ್ರಕಾರ ಮನೆಯಿಂದಲೇ ಕೆಲಸ ಮಾಡುತ್ತೇನೆ" ಎಂದು ಟೆಡ್ರೋಸ್ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ವಿಶ್ವದಲ್ಲಿ ಕೋವಿಡ್ ಸೋಂಕಿತರ ಒಟ್ಟು ಸಂಖ್ಯೆ 46,809,252. ಇದುವರೆಗೂ 33,749,374 ಜನರು ಕೋವಿಡ್ ಸೋಂಕಿನಿಂದ ಗುಣಮುಖರಾಗಿದ್ದಾರೆ. 1,205,194 ಜನರು ಮೃತಪಟ್ಟಿದ್ದಾರೆ.

ಹೊಸ ಕೋವಿಡ್ ಕೇಸ್‌ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ಕಳವಳ ಹೊಸ ಕೋವಿಡ್ ಕೇಸ್‌ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ಕಳವಳ

ವಿಶ್ವ ಆರೋಗ್ಯ ಸಂಸ್ಥೆ ಪ್ರತಿ ವಾರ ವಿಶ್ವದ ವಿವಿಧ ರಾಷ್ಟ್ರಗಳಲ್ಲಿನ ಕೋವಿಡ್ ಪರಿಸ್ಥಿತಿಯ ಬಗ್ಗೆ ಅವಲೋಕನ ನಡೆಸುತ್ತದೆ. ಕಳೆದ ಒಂದು ವಾರದ ಕೋವಿಡ್ ವರದಿಯ ಅಧ್ಯಯನ ನಡೆಸಿ ಡಾ. ಟೆಡ್ರೋಸ್ ಅಧನೋಮ್ ಪತ್ರಿಕಾಗೋಷ್ಠಿ ನಡೆಸಿದ್ದರು.

ಆರ್. ಆರ್. ನಗರ ಚುನಾವಣೆ; ಕೋವಿಡ್ ಸೋಂಕಿತರು ಮತ ಹಾಕಬಹುದು ಆರ್. ಆರ್. ನಗರ ಚುನಾವಣೆ; ಕೋವಿಡ್ ಸೋಂಕಿತರು ಮತ ಹಾಕಬಹುದು

Recommended Video

RRNagar Congress Candidate Kusuma Exclusive Interview | ನಾನು ಯಾರನ್ನೂ ನಂಬೋಲ್ಲ !! | Oneindia Kannada

ಯುರೋಪಿಯನ್ ದೇಶಗಳಲ್ಲಿ ಹೊಸ ಕೋವಿಡ್ ಪ್ರಕರಣಗಳು ಹೆಚ್ಚುತ್ತಿವೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿತ್ತು. ಯುರೋಪಿನ್ ಒಕ್ಕೂಟದ 21 ದೇಶಗಳಲ್ಲಿ ಆಸ್ಪತ್ರೆ, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ಸಂಖ್ಯೆಯೂ ಹೆಚ್ಚುತ್ತಿದೆ. ಶೇ 18ರಷ್ಟು ಜನರು ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ. ಶೇ 7ರಷ್ಟು ಜನರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹೇಳಿದ್ದರು.

English summary
In a tweet World Health Organization Director-General Tedros Adhanom Ghebreyesus said that he will be in self-quarantine over the coming days after identified as a contact of someone who tested positive for COVID-19.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X