ಕುಲಭೂಷಣ್ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶ ಎಎ ಯೂಸುಫ್ ಯಾರು?
ದಿ ಹೇಗ್, ಜುಲೈ 17: ಜಾಗತಿಕ ಮಟ್ಟದಲ್ಲಿ ಕುತೂಹಲ ಕೆರಳಿಸಿದ್ದ ಕುಲಭೂಷಣ್ ಜಾಧವ್ ಪ್ರಕರಣಕ್ಕೆ ಸಂಬಂಧಿಸಿದಂತೆ ನೆದರ್‌ಲೆಂಡ್‌ನ ದಿ ಹೇಗ್‌ನಲ್ಲಿರುವ ಅಂತಾರಾಷ್ಟ್ರೀಯ ನ್ಯಾಯಾಲಯ ಬುಧವಾರ ತೀರ್ಪು ಪ್ರಕಟಿಸಿದೆ.
42 ಪುಟಗಳ ಈ ತೀರ್ಪನ್ನು ಸಂಪೂರ್ಣವಾಗಿ ಓದಿ ಪ್ರಕಟಿಸಿದ್ದು, ಅಂತಾರಾಷ್ಟ್ರೀಯ ನ್ಯಾಯಾಲಯದ (ಐಸಿಜೆ) ಅಧ್ಯಕ್ಷ, ನ್ಯಾಯಾಧೀಶ ಅಬ್ದುಲ್‌ಖವಿ ಅಹ್ಮದ್ ಯೂಸುಫ್. ಈ ಮಹತ್ವದ ತೀರ್ಪು ಪ್ರಕಟಿಸಿದ ಯೂಸುಫ್ ಅವರು ಕೇವಲ ನ್ಯಾಯಾಧೀಶರಾಗಿ ಕೆಲಸ ಮಾಡಿದವರಲ್ಲ. ಇದಕ್ಕೂ ಮೊದಲು ಪ್ರೊಫೆಸರ್, ಲೇಖಕ ಮತ್ತು ಸಂಪಾದಕ ಹೀಗೆ ಹಲವು ವೃತ್ತಿಗಳಲ್ಲಿ ಅವರು ತೊಡಗಿಸಿಕೊಂಡಿದ್ದರು.
ಎಎ ಯೂಸುಫ್ ಅವರು ಮೂಲತಃ ಸೊಮಾಲಿಯಾದವರು. 2009ರ ಫೆಬ್ರವರಿ 6ರಿಂದ ಅವರು ಐಸಿಜೆಯ ಸದಸ್ಯರಾಗಿದ್ದಾರೆ. 2018ರ ಫೆಬ್ರವರಿ 6ರಂದು ಐಸಿಜೆಯ ಅಧ್ಯಕ್ಷರಾಗಿ ಅವರು ನೇಮಕವಾದರು. 2015ರ ಫೆಬ್ರವರಿ 6ರಿಂದ ಮೂರು ವರ್ಷ ನ್ಯಾಯಾಲಯದ ಉಪಾಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು. ಅವರು ತಮ್ಮ ನಿಖರ ಹಾಗೂ ಪರಿಣಾಮಕಾರಿ ತೀರ್ಪುಗಳಿಗೆ ಹೆಸರಾದವರು.

ಯೂಸುಫ್ ಅವರು ಈ ಹಿಂದೆ ಯುನೆಸ್ಕೋಗೆ ಕಾನೂನು ಸಲಹೆಗಾರ, ಅಂತಾರಾಷ್ಟ್ರೀಯ ಗುಣಮಟ್ಟದ ಕಚೇರಿಯ ನಿರ್ದೇಶಕರಾಗಿ ಮತ್ತು ಅಂತಾರಾಷ್ಟ್ರೀಯ ಕೈಗಾರಿಕಾ ಅಭಿವೃದ್ಧಿ ಸಂಸ್ಥೆಯ (ಯುನಿಡೊ) ಆಫ್ರಿಕಾ ವ್ಯವಹಾರಗಳ ಕಾನೂನು ಸಲಹೆಗಾರ ಮತ್ತು ಸಹಾಯಕ ಪ್ರಧಾನ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿದ್ದರು.
ಸ್ವಿಟ್ಜರ್ಲೆಂಡ್, ಇಟಲಿ, ಗ್ರೀಸ್ ಮತ್ತು ಫ್ರಾನ್ಸ್‌ಗಳಲ್ಲಿನ ಅನೇಕ ವಿಶ್ವವಿದ್ಯಾಲಯಗಳು ಹಾಗೂ ಸಂಸ್ಥೆಗಳಲ್ಲಿ ಉಪನ್ಯಾಸಕರಾಗಿ ಮತ್ತು ಅತಿಥಿ ಪ್ರೊಫೆಸರ್ ಆಗಿ ಕಾರ್ಯ ನಿರ್ವಹಿಸಿದ್ದರು.
'ಆಫ್ರಿಕನ್ ಇಯರ್ ಬುಕ್ ಆಫ್ ಇಂಟರ್‌ನ್ಯಾಷನಲ್ ಲಾ'ದ ಸಂಸ್ಥಾಪಕ ಮತ್ತು ಪ್ರಧಾನ ಸಂಪಾದಕರಾಗಿದ್ದ ಅವರು, ಜಿನೀವಾದಲ್ಲಿನ ಇನ್‌ಸ್ಟಿಟ್ಯೂಟ್ ಡಿ ಡ್ರಿಯೊಟ್ ಇಂಟರ್‌ನ್ಯಾಷನಲ್‌ನ ಸದಸ್ಯರಾಗಿದ್ದಾರೆ. ಅಲ್ಲದೆ, 'ಆಫ್ರಿಕನ್ ಫೌಂಡೇಷನ್ ಫಾರ್ ಇಂಟರ್‌ನ್ಯಾಷನಲ್ ಲಾ'ದ ಸಂಸ್ಥಾಪಕರಲ್ಲಿ ಒಬ್ಬರು. ಜತೆಗೆ ಅದರ ಕಾರ್ಯಕಾರಿ ಸಮಿತಿಯ ಅಧ್ಯಕ್ಷರು ಕೂಡ.
ಅಂತಾರಾಷ್ಟ್ರೀಯ ಕಾನೂನಿಗೆ ಸಂಬಂಧಿಸಿದಂತೆ ವಿವಿಧ ಆಯಾಮಗಳ ಕುರಿತು ಅನೇಕ ಕೃತಿಗಳು ಹಾಗೂ ಲೇಖನಗಳನ್ನು ಅವರು ಬರೆದಿದ್ದಾರೆ.
-
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ












Click it and Unblock the Notifications