ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶ್ರೀಲಂಕಾ ಸ್ಫೋಟ: 9 ದಾಳಿಕೋರರಲ್ಲಿ ಮಹಿಳೆ ಇರುವ ಕುರಿತು ಮಾಹಿತಿ

|
Google Oneindia Kannada News

ಕೊಲಂಬೋ, ಏ.24: ಶ್ರೀಲಂಕಾದ ಚರ್ಚ್‌ಗಳು ಮತ್ತು ಐಷಾರಾಮಿ ಹೋಟೆಲ್‌ಗಳ ಮೇಲೆ ಆತ್ಮಾಹುತಿ ಬಾಂಬ್ ದಾಳಿ ನಡೆಸಿದ್ದು ಐಎಸ್‌ಐಎಸ್ ಉಗ್ರ ಸಂಘಟನೆ ಹಾಗೂ ಒಟ್ಟು 9 ಮಂದಿ ಉಗ್ರರ ಪೈಕಿ ಓರ್ವ ಮಹಿಳೆಯೂ ಇದ್ದಳು ಎನ್ನುವ ಮಾಹಿತಿ ಲಭ್ಯವಾಗಿದೆ.

ಈಸ್ಟರ್ ದಿನದಂದು ಶ್ರೀಲಂಕಾದ ಕೊಲಂಬೋದಲ್ಲಿ ಒಟ್ಟು 8 ಕಡೆ ಆತ್ಮಾಹುತಿ ಬಾಂಬ್ ಸ್ಫೋಟಗೊಂಡಿದ್ದು 359ಕ್ಕೂ ಹೆಚ್ಚು ಮಂದಿ ಮೃತಪಟ್ಟಿರುವ ಕುರಿತು ಮಾಹಿತಿ ಲಭ್ಯವಾಗಿದೆ. ಆ ದಾಳಿಕೋರರಲ್ಲಿ ಮಹಿಳೆಯೂ ಕೂಡ ಇದ್ದಳು ಎನ್ನುವುದನ್ನು ಶ್ರೀಲಂಕಾ ಪೊಲೀಸರು ಸ್ಪಷ್ಟಪಡಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಮಂಗಳವಾರ 18 ಮಂದಿ ಶಂಕಿತರನ್ನು ಬಂಧಿಸಲಾಗಿದೆ.

ಶ್ರೀಲಂಕಾ ಸ್ಫೋಟ: ಸುತ್ತಾಡುತ್ತಿದ್ದ ಶಂಕಿತ ಉಗ್ರನ ವಿಡಿಯೋ ವೈರಲ್ಶ್ರೀಲಂಕಾ ಸ್ಫೋಟ: ಸುತ್ತಾಡುತ್ತಿದ್ದ ಶಂಕಿತ ಉಗ್ರನ ವಿಡಿಯೋ ವೈರಲ್

ಸ್ಫೋಟಕ ಶಸ್ತ್ರಾಸ್ತ್ರಗಳನ್ನು ಹೊಂದಿರುವ ಇನ್ನೂ ಅನೇಕ ಶಂಕಿತ ಉಗ್ರರು ಬಹಿರಂಗವಾಗಿ ಓಡಾಡಿಕೊಂಡಿದ್ದಾರೆ, ಆದ್ದರಿಂದ ಎಲ್ಲರೂ ಎಚ್ಚರಿಕೆಯಿಂದರಬೇಕು ಎಂದು ಶ್ರೀಲಂಕಾ ಪ್ರಧಾನಿ ತಿಳಿಸಿದ್ದಾರೆ. ಶ್ರೀಲಂಕಾದ ಮೂಲೆ ಮೂಲೆಗಳಲ್ಲೂ ಸ್ಫೋಟಕಗಳು ಪತ್ತೆಯಾಗುತ್ತಿವೆ.

Woman among 9 bombers says Sri Lanka minister

ಬಾಂಬ್ ದಾಳಿಯ ಬಗ್ಗೆ ಶ್ರೀಲಂಕಾ ಕ್ಕೆ ಎಚ್ಚರಿಕೆ ನೀಡಿತ್ತು ಭಾರತ ಬಾಂಬ್ ದಾಳಿಯ ಬಗ್ಗೆ ಶ್ರೀಲಂಕಾ ಕ್ಕೆ ಎಚ್ಚರಿಕೆ ನೀಡಿತ್ತು ಭಾರತ

ಸೋಮವಾರವಷ್ಟೇ ಮತ್ತೊಂದು ಬಾಂಬ್ ಪತ್ತೆಯಾಗಿತ್ತು, ಅದನ್ನು ನಿಷ್ಕ್ರಿಯಗೊಳಿಸಲು ತೆರಳಿದ್ದ ವೇಳೆಯಲ್ಲಿ ಅದು ಸ್ಫೋಟಗೊಂಡಿತ್ತು.

English summary
One of the nine bombers that detonated explosives in Sri Lanka on Easter Sunday was a woman, deputy defence minister Ruwan Wijewardene told reporters on Wednesday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X