Video Viral: ಹಿಜಾಬ್ ವಿರೋಧಿಸಿ ಮೈಮೇಲಿದ್ದ ಬಟ್ಟೆ ತೆಗೆದ ಮಹಿಳೆ: ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್
ಹಿಜಾಬ್ ವಿರೋಧಿಸಿ ಯುವತಿಯೊಬ್ಬಳು ತನ್ನ ಬಟ್ಟೆಗಳನ್ನು ತೆಗೆದು ಎಸೆದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅನೇಕ ದೇಶಗಳಲ್ಲಿ ಹಿಜಾಬ್‌ಗೆ ವಿರೋಧ ವ್ಯಕ್ತವಾಗಿದೆ. ಈ ಪಟ್ಟಿಯಲ್ಲಿ ಇರಾನ್‌ನ ಹೆಸರೂ ಕೂಡ ಇದೆ. ಇರಾನ್‌ನಲ್ಲಿ ಮಹಿಳೆಯರು ಹಿಜಾಬ್ ಧರಿಸುವುದನ್ನು ಬಹಳ ಹಿಂದಿನಿಂದಲೂ ವಿರೋಧಿಸಿಕೊಂಡು ಬಂದಿದ್ದಾರೆ. ಆದರೂ ಇರಾನ್‌ನಲ್ಲಿ ಮಹಿಳೆಯರು ಹಿಜಾಬ್ ಧರಿಸುವುದು ಕಡ್ಡಾಯವಾಗಿದೆ.
ಇರಾನ್‌ನ ಇಸ್ಲಾಮಿಕ್ ಆಜಾದ್ ವಿಶ್ವವಿದ್ಯಾನಿಲಯದ ಕ್ಯಾಂಪಸ್‌ನಲ್ಲಿ ಹುಡುಗಿಯೊಬ್ಬಳು ಹಿಜಾಬ್ ವಿರುದ್ಧ ಪ್ರತಿಭಟಿಸಿದ್ದಾಳೆ. ತನ್ನ ಬಟ್ಟೆ ತೆಗೆದು ಅರೆ ಬೆತ್ತಲೆಯಲ್ಲಿ ಕುಳಿತಿರುವುದು ಕಂಡು ಬಂದಿದೆ. ಈ ವೀಡಿಯೋ ಇಸ್ಲಾಮಿಕ್ ದೇಶಗಳು ಸೇರಿದಂತೆ ಜಗತ್ತಿನಾದ್ಯಂತ ಸಂಚಲನ ಮೂಡಿಸಿದೆ.
When Iranian police attacked a girl at Tehran University for not following the hijab rule, she removed her clothing and sat in protest. She has since been arrested by IRGC intelligence and taken to an unknown location.
— Habib Khan (@HabibKhanT) November 2, 2024
pic.twitter.com/VT17RGIc5M

ಸಂಚಲನ ಮೂಡಿಸಿದ ವಿಡಿಯೋ
ಆನ್‌ಲೈನ್ ವರದಿಗಳ ಪ್ರಕಾರ ಈ ವೀಡಿಯೊ ಶನಿವಾರದಿಂದ ಸಾಕಷ್ಟು ವೈರಲ್ ಆಗಿದೆ. ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಕಾಡ್ಗಿಚ್ಚಿನಂತೆ ಹಬ್ಬಿದೆ. ಇದರಲ್ಲಿ ಹುಡುಗಿಯೊಬ್ಬಳು ಅರೆನಗ್ನ ಸ್ಥಿತಿಯಲ್ಲಿ ವಿಶ್ವವಿದ್ಯಾಲಯದ ಗೋಡೆಯ ಮೇಲೆ ಕುಳಿತಿರುವುದನ್ನು ಸ್ಪಷ್ಟವಾಗಿ ಕಾಣಬಹುದು. ದೇಶದಲ್ಲಿ ಕಟ್ಟುನಿಟ್ಟಾಗಿ ಅನುಸರಿಸುವ ಇಸ್ಲಾಮಿಕ್ ಡ್ರೆಸ್ ಕೋಡ್ ವಿರುದ್ಧ ಪ್ರತಿಭಟಿಸುವಲ್ಲಿ ಈ ಹುಡುಗಿ ಅರೆಬೆತ್ತಲೆಯಾಗಿ ಕುಳಿತಿದ್ದಾಳೆ. ಪ್ರತಿಭಟನೆ ನಡೆಸುತ್ತಿದ್ದ ಯುವತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ವಿಶ್ವವಿದ್ಯಾಲಯ ಸ್ಪಷ್ಟನೆ
ಈ ವೀಡಿಯೋ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ವಿಭಿನ್ನ ಹೇಳಿಕೆಗಳು ವ್ಯಕ್ತವಾಗುತ್ತಿವೆ. ಇರಾನ್‌ನ ಇಸ್ಲಾಮಿಕ್ ಆಜಾದ್ ವಿಶ್ವವಿದ್ಯಾನಿಲಯದ ವಕ್ತಾರ ಅಮೀರ್ ಮಹ್‌ಜಾಬ್, ಪೊಲೀಸರು ಹುಡುಗಿಯನ್ನು ವಿಚಾರಣೆಗೆ ಒಳಪಡಿಸಿದ್ದು, ಆಕೆ ತೀವ್ರ ಮಾನಸಿಕ ಒತ್ತಡದಿಂದ ಮತ್ತು ಮನೋರೋಗದಿಂದ ಬಳಲುತ್ತಿದ್ದಾಳೆ ಎಂದು ಬಹಿರಂಗಪಡಿಸಿದ್ದಾರೆ ಎಂದರು.
ಹಿಜಾಬ್ ವಿರುದ್ಧ ಪ್ರತಿಭಟನೆಗಾಗಿ ಯುವತಿ ತನ್ನ ಬಟ್ಟೆಗಳನ್ನು ತೆಗೆದಿದ್ದಾಳೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ಹೆಚ್ಚಿನ ಜನರು ಹೇಳಿಕೊಳ್ಳುತ್ತಿದ್ದಾರೆ. ಆದರೆ ಮಹಿಳೆ ಉದ್ದೇಶಪೂರ್ವಕವಾಗಿ ತನ್ನ ಬಟ್ಟೆಗಳನ್ನು ತೆಗೆದಿದ್ದಾಳೆ ಎಂದು ಅಮೀರ್ ಮಹ್‌ಜಾಬ್ ಅವರು ಹೇಳುತ್ತಾರೆ. ಆಕೆ ಮಾನಸಿಕ ಕಾಯಿಲೆಯಿಂದ ಬಲಳುತ್ತಿದ್ದಾಳೆ. ಹೀಗಾಗಿ ಆಕೆಯನ್ನು ಮಾನಸಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.
ಯುವತಿ ಆಸ್ಪತ್ರೆಗೆ ದಾಖಲು
ಆದರೆ ಇರಾನಿನ ಮಾಧ್ಯಮಗಳ ಪ್ರಕಾರ, ಇರಾನ್‌ನಲ್ಲಿ ಮಹಿಳೆಯರು ಹಿಜಾಬ್ ಧರಿಸುವುದು ಕಡ್ಡಾಯವಾಗಿದೆ. ಈ ಕಾನೂನನ್ನು ವಿರೋಧಿಸಿ ಈ ಹುಡುಗಿ ಅರೆಬೆತ್ತಲೆಯಾಗಿ ಕುಳಿತು ಪ್ರತಿಭಟಿಸಿದ್ದಾಳೆ ಎಂದು ವರದಿಯಾಗಿದೆ. ಇದರಿಂದಾಗಿ ಯುವತಿಗೆ ಕಠಿಣ ಶಿಕ್ಷೆ ನೀಡಲಾಗಿದ್ದು ಆಕೆಯನ್ನು ಮಾನಸಿಕ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ವರದಿ ಮಾಡಿವೆ.
2022ರಿಂದ ಪ್ರತಿಭಟನೆಗಳು ಪ್ರಾರಂಭ
ಕಳೆದ 2 ವರ್ಷಗಳಿಂದ ಇರಾನ್‌ನಲ್ಲಿ ಹಿಜಾಬ್ ಅನ್ನು ವಿರೋಧಿಸಲಾಗುತ್ತಿದೆ. ಸೆಪ್ಟೆಂಬರ್ 2022 ರಲ್ಲಿ ಅನೇಕ ಮಹಿಳೆಯರು ಹಿಜಾಬ್ ಅನ್ನು ಬಹಿಷ್ಕರಿಸಿದರು. ಈ ವೇಳೆ ಪೊಲೀಸರು ಮಹಿಳೆಯರನ್ನು ವಶಕ್ಕೆ ಪಡೆದಿದ್ದರು. ಈ ಪರಿಸ್ಥಿತಿಯಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದು ಹಿಜಾಬ್ ಪ್ರತಿಭಟನೆ ಗಂಭೀರ ಸ್ವರೂಪ ಪಡೆದುಕೊಂಡಿತ್ತು. ಈ ಪ್ರತಿಭಟನೆಯನ್ನು ಹತ್ತಿಕ್ಕಲು ಪೊಲೀಸರು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದರು. ಇದರಲ್ಲಿ ಅನೇಕ ಜನರ ಸಾವಿನ ಸುದ್ದಿ ಬೆಳಕಿಗೆ ಬಂದಿತ್ತು.












Click it and Unblock the Notifications