ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಎರಡು ತಿಂಗಳ ಬಳಿಕ ವುಹಾನ್ ನಲ್ಲಿ ಬಸ್ ಸಂಚಾರ ಪುನರಾರಂಭ

|
Google Oneindia Kannada News

ಬೀಜಿಂಗ್, ಮಾರ್ಚ್ 26: ಮಾರಣಾಂತಿಕ ಕೊರೊನಾ ವೈರಸ್ ಜನ್ಮಸ್ಥಳ ವುಹಾನ್ ನಲ್ಲೀಗ ಸಾರ್ವಜನಿಕ ಸಾರಿಗೆ ಸೇವೆ ಆರಂಭಗೊಂಡಿದೆ. ಒಂಬತ್ತು ವಾರಗಳ ಲಾಕ್ ಡೌನ್ ಬಳಿಕ ಬಸ್ ಗಳು ಬೀದಿಗಿಳಿದಿವೆ.

ಮಾರ್ಚ್ 25 ರಿಂದ 117 ಬಸ್ ರೂಟ್ ಗಳು ಪುನರಾರಂಭಗೊಂಡಿವೆ. ಬಸ್ ಗಳಲ್ಲಿ ಡ್ರೈವರ್ ಜೊತೆಗೆ ಓರ್ವ ಸೇಫ್ಟಿ ಸೂಪರ್ ವೈಸರ್ ಇರಲಿದ್ದು, ಎಲ್ಲಾ ಪ್ರಯಾಣಿಕರ ಆರೋಗ್ಯ ತಪಾಸಣೆ ಮಾಡುವ ಜವಾಬ್ದಾರಿ ಆತನದ್ದಾಗಿದೆ.

ವುಹಾನ್ ನಲ್ಲಿ ಹೊಸ ಸೋಂಕಿತ ಪ್ರಕರಣಗಳು 'ಸೊನ್ನೆ': ಹಿಂದಿದೆ ಕರಾಳ ಸತ್ಯ!ವುಹಾನ್ ನಲ್ಲಿ ಹೊಸ ಸೋಂಕಿತ ಪ್ರಕರಣಗಳು 'ಸೊನ್ನೆ': ಹಿಂದಿದೆ ಕರಾಳ ಸತ್ಯ!

''ಪ್ರಯಾಣಿಕರು ಬಸ್ ಹತ್ತುವ ಮುನ್ನ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ಹೆಸರುಗಳನ್ನು ನೋಂದಾಯಿಸಿ, QR ಕೋಡ್ ಸ್ಕ್ಯಾನ್ ಮಾಡಬೇಕು. ಟೆಂಪರೇಚರ್ ಟೆಸ್ಟ್ ನಲ್ಲಿ ಪಾಸ್ ಆದವರಿಗೆ ಮಾತ್ರ ಪ್ರಯಾಣ ಮಾಡಲು ಅವಕಾಶ ನೀಡಲಾಗುತ್ತದೆ. ಸೋಂಕನ್ನು ತಡೆಗಟ್ಟಲು 65 ವರ್ಷ ಮೇಲ್ಪಟ್ಟವರಿಗೆ ಸಾರ್ವಜನಿಕ ಸಾರಿಗೆ ಸೇವೆಯನ್ನು ನಿರ್ಬಂಧಿಸಲಾಗಿದೆ'' ಎಂದು ಸಾರಿಗೆ ಇಲಾಖೆಯ ವಕ್ತಾರ ತಿಳಿಸಿದ್ದಾರೆ.

Wuhan buses hit the road after 9 weeks lockdown

''ಸ್ಮಾರ್ಟ್ ಫೋನ್ ಹೊಂದಿಲ್ಲದವರು ಆರೋಗ್ಯ ಇಲಾಖೆಯಿಂದ ಪ್ರಮಾಣ ಪತ್ರವನ್ನು ತರಬೇಕು'' ಎಂದು ಸೇಫ್ಟಿ ಸೂಪರ್ ವೈಸರ್ ಹೇಳಿದ್ದಾರೆ.

ಕೊರೊನಾ ವೈರಸ್ ಸೋಂಕು ವ್ಯಾಪಕವಾಗಿ ಹಬ್ಬಿದ ಪರಿಣಾಮ, ಜನವರಿ 23 ರಂದು ವುಹಾನ್ ನಗರವನ್ನು ಲಾಕ್ ಡೌನ್ ಮಾಡಲಾಗಿತ್ತು. ಪರಿಣಾಮ, ಎಲ್ಲಾ ಸಾರಿಗೆ ವ್ಯವಸ್ಥೆಗಳು ರದ್ದಾದವು. ಮಾರ್ಚ್ 25 ರಂದು ನಿರ್ಬಂಧಗಳನ್ನು ಸಡಿಲಗೊಳಿಸಲಾಗಿದ್ದು, ಬಸ್ ಸಂಚಾರ ಆರಂಭಗೊಂಡಿದೆ.

ನೀವೆಲ್ಲ ಕಣ್ಣರಳಿಸುವ ಸುದ್ದಿಯೊಂದು ಕೊರೊನಾ ತವರು ವುಹಾನ್ ನಿಂದ ಬಂದಿದೆ!ನೀವೆಲ್ಲ ಕಣ್ಣರಳಿಸುವ ಸುದ್ದಿಯೊಂದು ಕೊರೊನಾ ತವರು ವುಹಾನ್ ನಿಂದ ಬಂದಿದೆ!

ಚೀನಾದ ಅಂಕಿ-ಅಂಶ:

ಇಲ್ಲಿಯವರೆಗಿನ ಒಟ್ಟು ಕೊರೊನಾ ಸೋಂಕು ಪೀಡಿತರು: 81,285

ಇಲ್ಲಿಯವರೆಗೂ ಕೊರೊನಾ ವೈರಸ್ ನಿಂದ ಸಾವನ್ನಪ್ಪಿದವರು: 3,287

ಕೊರೊನಾ ವೈರಸ್ ಸೋಂಕಿನಿಂದ ಗುಣಮುಖರಾದವರು: 74,051

ಚಿಂತಾಜನಕ ಪರಿಸ್ಥಿತಿಯಲ್ಲಿ ಇರುವವರು: 1235

ವಿಶ್ವದ ಅಂಕಿ-ಅಂಶ:

ಇಲ್ಲಿಯವರೆಗಿನ ಒಟ್ಟು ಕೊರೊನಾ ಸೋಂಕು ಪೀಡಿತರು: 471,417

ಇಲ್ಲಿಯವರೆಗೂ ಕೊರೊನಾ ವೈರಸ್ ನಿಂದ ಸಾವನ್ನಪ್ಪಿದವರು: 21,295

ಕೊರೊನಾ ವೈರಸ್ ಸೋಂಕಿನಿಂದ ಗುಣಮುಖರಾದವರು: 114,642

ಚಿಂತಾಜನಕ ಪರಿಸ್ಥಿತಿಯಲ್ಲಿ ಇರುವವರು: 14,792

English summary
Wuhan buses hit the road after 9 weeks lockdown.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X