Yemen Stampede: ರಂಜಾನ್ ಕಾರ್ಯಕ್ರಮದ ವೇಳೆ ಕಾಲ್ತುಳಿತಕ್ಕೆ 78 ಜನ ಸಾವು: ವಿಡಿಯೊ
ಸನಾ ಏಪ್ರಿಲ್ 20: ಯೆಮೆನ್‌ನಲ್ಲಿ ರಂಜಾನ್‌ನ ಚಾರಿಟಿ ಕಾರ್ಯಕ್ರಮದ ವೇಳೆ ಕಾಲ್ತುಳಿತದಲ್ಲಿ 78 ಜನರು ಸಾವನ್ನಪ್ಪಿದ್ದಾರೆ. ಈ ಘಟನೆಯ ಭಯಾನಕ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಯೆಮೆನ್‌ನ ರಾಜಧಾನಿಯಲ್ಲಿ ಬುಧವಾರ ತಡರಾತ್ರಿ ಹಣಕಾಸು ನೆರವು ವಿತರಿಸುವ ಕಾರ್ಯಕ್ರಮವೊಂದರಲ್ಲಿ ಹೆಚ್ಚಿನ ಜನಸಂಖ್ಯೆ ಸೇರಿತ್ತು. ಈ ವೇಳೆ ಗುಂಡಿನ ದಾಳಿ ಮತ್ತು ವಿದ್ಯುತ್ ಸ್ಪೋಟಗಳು ಸಂಭವಿಸಿದ್ದು 78 ಮಂದಿ ಸಾವನ್ನಪ್ಪಿ 73 ಮಂದಿ ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಸುದ್ದಿ ಸಂಸ್ಥೆಗಳು ವರದಿ ಮಾಡಿವೆ.

ಸಶಸ್ತ್ರ ಹೌತಿಗಳು ಜನಸಂದಣಿಯನ್ನು ನಿಯಂತ್ರಿಸುವ ಪ್ರಯತ್ನದಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಈ ಗುಂಡು ವಿದ್ಯುತ್ ತಂತಿಗೆ ಬಡಿದು ಅದು ಸ್ಫೋಟಗೊಂಡಿದೆ. ಇದು ನೆರೆದವರಲ್ಲಿ ಭಯವನ್ನು ಹುಟ್ಟಿಸಿದೆ. ಹೀಗಾಗಿ ಅನೇಕ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಜನರು ಏಕಾಏಕಿ ಸ್ಥಳದಿಂದ ನಿರ್ಗಮಿಸಲು ಪ್ರಯತ್ನಿಸಿದ್ದಾರೆ. ಈ ವೇಳೆ ಕಾಲ್ತುಳಿತ ಸಂಭವಿಸಿದೆ.
Breaking: 79 people killed and 110 injured after a stampede in a school in Sanaa, Yemen where poor people gathered to receive charities during Ramadan.
— World Times (@WorldTimesWT) April 20, 2023
📽️@SaadAbedine#Yemen pic.twitter.com/f0ti65IUQB
ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಲಾದ ವಿಡಿಯೊದಲ್ಲಿ ನೆಲದ ಮೇಲೆ ಹಲವಾರು ಮೃತ ದೇಹಗಳು ಬಿದ್ದಿರುವುದನ್ನು ಕಾಣಬಹುದು. ಈ ದೃಶ್ಯದಲ್ಲಿ ಇತರರು ಜನರಿಗೆ ಸಹಾಯ ಮಾಡಲು ಪ್ರಯತ್ನಿಸುತ್ತಿರುವುದು ಕಿರುಚಾಡುತ್ತಿರುವುದು ಕೇಳಿಸುತ್ತದೆ. ಹೌತಿ ನಡೆಸುತ್ತಿರುವ ಆಂತರಿಕ ಸಚಿವಾಲಯದ ಪ್ರಕಾರ, ಸನಾ ಮಧ್ಯಭಾಗದಲ್ಲಿರುವ ಓಲ್ಡ್ ಸಿಟಿಯಲ್ಲಿ ನೂರಾರು ಬಡವರು ವ್ಯಾಪಾರಿಗಳು ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಜಮಾಯಿಸಿದ್ದರು. ರಾತ್ರಿ 8.20 ರ ಸುಮಾರಿಗೆ ಈ ದುರಂತ ಸಂಭವಿಸಿದೆ. ಈ ವಾರದ ಕೊನೆಯಲ್ಲಿ ಇಸ್ಲಾಮಿಕ್ ಪವಿತ್ರ ತಿಂಗಳ ರಂಜಾನ್ ಆಚರಣೆ ಮಾಡಲಾಗುತ್ತದೆ. ಈ ದುರಂತ ಮುಸ್ಲಿಮರ ಈದ್ ಅಲ್-ಫಿತರ್‌ನ ಸಮಯದಲ್ಲಿ ಸಂಭವಿಸಿದೆ.

ಅಲ್-ಮಸಿರಾ ಉಪಗ್ರಹ ಟಿವಿ ಚಾನೆಲ್ ಪ್ರಕಾರ, ಸನಾದಲ್ಲಿರುವ ಸಚಿವಾಲಯದ ವಕ್ತಾರ ಬ್ರಿಗ್ ಅಬ್ದೆಲ್-ಖಾಲೆಕ್ ಅಲ್-ಅಘ್ರಿ ಘಟನೆಯ ಬಗ್ಗೆ ಸಂಪಾತ ಸೂಚಿಸಿದ್ದಾರೆ. ಘಟನೆ ಬಳಿಕ ಸ್ಥಳದಲ್ಲಿ ತ್ವರಿತವಾಗಿ ಕ್ರಮಗಳನ್ನು ಕೈಗೊಳ್ಳಲಾಯಿತು. ಪತ್ರಕರ್ತರು ಸೇರಿದಂತೆ ಜನರನ್ನು ಸಮೀಪಿಸದಂತೆ ನಿರ್ಬಂಧಿಸಲಾಗಿದೆ. ಜೊತೆಗೆ ಕಾರ್ಯಕ್ರಮದ ಇಬ್ಬರು ಸಂಘಟಕರನ್ನು ವಶಕ್ಕೆ ಪಡೆದಿದ್ದು, ತನಿಖೆ ನಡೆಯುತ್ತಿದೆ ಎಂದು ಆಂತರಿಕ ಸಚಿವಾಲಯ ತಿಳಿಸಿದೆ.
ಯೆಮೆನ್‌ನ ರಾಜಧಾನಿಯು ಇರಾನ್ ಬೆಂಬಲಿತ ಹೌತಿಗಳ ನಿಯಂತ್ರಣದಲ್ಲಿದೆ. ಹೌತಿಗಳು 2014 ರಲ್ಲಿ ಇದನ್ನು ವಶಪಡಿಸಿಕೊಂಡರು. ಇದು ಸಂಘರ್ಷಕ್ಕೆ ಕಾರಣವಾಗಿದೆ. ಇಲ್ಲಿ ಸರ್ಕಾರವನ್ನು ಪುನಃಸ್ಥಾಪಿಸಲು ಸೌದಿ ನೇತೃತ್ವದ ಒಕ್ಕೂಟ 2015ರಿಂದ ಪ್ರಯತ್ನಿಸುತ್ತಿದೆ.
ಈ ಸಂಘರ್ಷ ಇತ್ತೀಚಿನ ವರ್ಷಗಳಲ್ಲಿ ಸೌದಿ ಅರೇಬಿಯಾ ಮತ್ತು ಇರಾನ್ ನಡುವಿನ ಪ್ರಾಕ್ಸಿ ಯುದ್ಧವಾಗಿ ಮಾರ್ಪಟ್ಟಿದೆ. ಈ ಯುದ್ಧದಲ್ಲಿ ಹೋರಾಟಗಾರರು ಮತ್ತು ನಾಗರಿಕರು ಸೇರಿದಂತೆ 150,000 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಯುಎನ್ ಕಚೇರಿಯ ಪ್ರಕಾರ, ಯೆಮೆನ್‌ನಲ್ಲಿ 21 ಮಿಲಿಯನ್‌ಗಿಂತಲೂ ಹೆಚ್ಚು ಜನರಿಗೆ ಅಥವಾ ದೇಶದ ಜನಸಂಖ್ಯೆಯ ಮೂರನೇ ಎರಡರಷ್ಟು ಜನರಿಗೆ ಸಹಾಯ ಮತ್ತು ರಕ್ಷಣೆಯ ಅಗತ್ಯವಿದೆ. ಅಗತ್ಯವಿರುವವರಲ್ಲಿ, 17 ಮಿಲಿಯನ್‌ಗಿಂತಲೂ ಹೆಚ್ಚು ಜನರನ್ನು ವಿಶೇಷವಾಗಿ ದುರ್ಬಲ ಎಂದು ಪರಿಗಣಿಸಲಾಗುತ್ತದೆ.
-
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral












Click it and Unblock the Notifications