ಟ್ಯಾಂಕರ್‌ಗೆ ಡಿಕ್ಕಿ ಹೊಡೆದು ಬಸ್‌ಗೆ ಬೆಂಕಿ: 12 ಮಂದಿ ಸಜೀವ ದಹನ
ಜೈಪುರ(ರಾಜಸ್ಥಾನ) ನವೆಂಬರ್ 10: ರಾಜಸ್ಥಾನದ ಬಾರ್ಮರ್-ಜೋಧ್‌ಪುರ ಹೆದ್ದಾರಿಯಲ್ಲಿ ಬುಧವಾರದಂದು ಟ್ಯಾಂಕರ್ ಡಿಕ್ಕಿ ಹೊಡೆದು ಪ್ರಯಾಣಿಕರಿದ್ದ ಖಾಸಗಿ ಬಸ್‌ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಕನಿಷ್ಠ 12 ಜನರು ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದೆ. ಅಪಘಾತ ಸಂಭವಿಸುವ ಮುನ್ನ ಬಸ್‌ನಲ್ಲಿ 25 ಮಂದಿ ಪ್ರಯಾಣಿಸುತ್ತಿದ್ದರು. ಅಪಘಾತದ ಸ್ಥಳದಿಂದ ಇದುವರೆಗೆ 10 ಜನರನ್ನು ಜೀವಂತವಾಗಿ ರಕ್ಷಿಸಲಾಗಿದೆ.
ಅಪಘಾತದ ನಂತರ ಜಿಲ್ಲಾಡಳಿತ ಮತ್ತು ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ. ಪಚ್ಪದ್ರಾ ಶಾಸಕ ಮದನ್ ಪ್ರಜಾಪತ್, ಉಸ್ತುವಾರಿ ಸಚಿವ ಸುಖರಾಮ್ ವಿಷ್ಣೋಯ್, ವಿಭಾಗೀಯ ಆಯುಕ್ತರು ಸೇರಿದಂತೆ ಹಲವು ಅಧಿಕಾರಿಗಳು ಅಪಘಾತ ಸ್ಥಳಕ್ಕೆ ಭೇಟಿ ನಿಡಿದ್ದಾರೆ. ಅಪಘಾತದಿಂದಾಗಿ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದೆ.
ಪ್ರಯಾಣಿಕರೊಬ್ಬರ ಪ್ರಕಾರ, ಬಸ್ ಬಲೋತ್ರಾದಿಂದ ಬೆಳಿಗ್ಗೆ 9:55 ಕ್ಕೆ ಹೊರಟಿತ್ತು, ಈ ಸಮಯದಲ್ಲಿ ಎದುರುಗಡೆಯಿಂದ ಬಂದ ಟ್ಯಾಂಕರ್ ಬಸ್‌ಗೆ ಡಿಕ್ಕಿ ಹೊಡೆದಿದೆ, ನಂತರ ಬಸ್‌ಗೆ ಬೆಂಕಿ ಹೊತ್ತಿಕೊಂಡಿತು. 10 ಜನರನ್ನು ಹೊರತೆಗೆಯಲಾಗಿದ್ದು, ಉಳಿದ ಪ್ರಯಾಣಿಕರ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
Five people dead, several injured in collision between a passenger bus and a truck near Pachpadra in Rajasthan's Barmer district, say police
— ANI (@ANI) November 10, 2021
CM Ashok Gehlot directs District Collector regarding relief and rescue operations, asks him to ensure medical treatment for the injured pic.twitter.com/wLyd9ra0xt