ರಾಜಸ್ಥಾನ ಸರ್ಕಾರ ಬೆಂಬಲಿಸಲು ಇಬ್ಬರು ಶಾಸಕರಿಗೆ 10 ಕೋಟಿ ಕೊಟ್ಟ ಆರೋಪ

ಜೈಪುರ, ನವೆಂಬರ್ 28: ರಾಜಸ್ಥಾನದ ಅಶೋಕ್ ಗೆಹ್ಲೋಟ್ ಸರ್ಕಾರವನ್ನು ಬೆಂಬಲಿಸಲು ಬಿಟಿಬಿ ಇಬ್ಬರು ಶಾಸಕರಿಗೆ ತಲಾ 10 ಕೋಟಿ ರೂ ಪಡೆದಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.

ಕಾಂಗ್ರೆಸ್ ಶಾಸಕ ಮಹೇಂದ್ರಜೀತ್ ಸಿಂಗ್ ಮಾಳವೀಯ ದೂರಿರುವ ವಿಡಿಯೋವನ್ನು ಬಿಜೆಪಿ ರಾಜಸ್ಥಾನ ಘಟಕದ ಅಧ್ಯಕ್ಷ ಸತೀಶ್ ಪೂನಿಯಾ ಬಿಡುಗಡೆ ಮಾಡಿದ್ದಾರೆ.

ಈ ಬಗ್ಗೆ ನಾನು ಕೇಳಿರುವ ಪ್ರಶ್ನೆಗಳಿಗೆ ಕಾಂಗ್ರೆಸ್ ಮುಖಂಡರು ದೃಢಪಡಿಸಿದ್ದಾರೆ, ಜೂನ್ ತಿಂಗಳಲ್ಲಿ ನಡೆದ ರಾಜ್ಯಸಭೆ ಚುನಾವಣೆ ಸಂದರ್ಭದಲ್ಲಿ ಸಚಿನ್ ಪೈಲಟ್ ನೇತೃತ್ವದಲ್ಲಿ ಶಾಸಕರು ಬಂಡಾಯ ಎದ್ದಿದ್ದಾಗ ಮೂಡಿದ್ದ ರಾಜಕೀಯ ಬಿಕ್ಕಟ್ಟಿನ ಸಂದರ್ಭದಲ್ಲಿ ಈ ಶಾಸಕರನ್ನು ಹೋಟೆಲ್‌ನಲ್ಲಿ ಇರಿಸಲಾಗಿತ್ತು.

2 BTP MLAs Took Money To Support Gehlot Government

ಮಾಳವೀಯ ಅವರು ಸಾರ್ವಜನಿಕ ಸಮಾರಂಭದಲ್ಲಿ ಮಾತನಾಡಿ, ಈ ಇಬ್ಬರು ಶಾಸಕರು ರಾಜ್ಯಸಭೆ ಚುನಾವಣೆಯಲ್ಲಿ ಬೆಂಬಲಿಸಲು ಐದು ಕೋಟಿ ಹಾಗೂ ರಾಜಕೀಯ ಬಿಕ್ಕಟ್ಟಿನ ಸಂದರ್ಭದಲ್ಲಿ ಸರ್ಕಾರವನ್ನು ಬೆಂಬಲಿಸಲು ತಲಾ ಐದು ಕೋಟಿ ನೀಡಿದ್ದರು ಎನ್ನುವ ಆರೋಪ ಕೇಳಿ ಬಂದಿದೆ.

ಈ ಎರಡೂ ಸಮಯದಲ್ಲಿ ಬಿಟಿಬಿ ಶಾಸಕರು ಗೆಹ್ಲೋಟ್ ಸರ್ಕಾರವನ್ನು ಬೆಂಬಲಿಸಿದ್ದರು. ಮಾಳವೀಯ ಅವರು ಬನ್ಸ್‌ವಾರಾ ಕ್ಷೇತ್ರ ಪ್ರತಿನಿಧಿಸುತ್ತಿದ್ದಾರೆ. ವಿಡಿಯೋ ಬಿಡುಡೆ ಮಾಡಿರುವ ಮಾಳವೀಯ ಅವರು ಶಾಸಕರ ಖರೀದಿಯ ಈ ಪ್ರಕರಣ ಕುರಿತು ಹೆಚ್ಚಿನ ವಿವರಣೆ ನೀಡಬೇಕು ಎಂದು ಅಶೋಕ್ ಗೆಹ್ಲೋಟ್ ಅವರಿಗೆ ಕೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+