ಕೊರೊನಾ ಮಾರ್ಗಸೂಚಿ ಗಾಳಿಗೆ ತೂರಿ ವ್ಯಕ್ತಿಯ ಅಂತ್ಯ ಸಂಸ್ಕಾರ, ಬಳಿಕ ನಡೆದಿದ್ದೇ ಬೇರೆ

ಜೈಪುರ, ಮೇ 08: ಕೊರೊನಾ ಸೋಂಕಿನಿಂದ ಮೃತಪಟ್ಟವರೊಬ್ಬರ ಶವವನ್ನು ಕೊರೊನಾ ಮಾರ್ಗಸೂಚಿಗಳನ್ನು ಅನುಸರಿಸದೆ ಅಂತ್ಯಕ್ರಿಯೆ ನಡೆಸಿದ ಕೆಲ ದಿನಗಳಲ್ಲಿ ಈ ಹಳ್ಳಿಯಲ್ಲಿ 21 ಮಂದಿ ಮೃತಪಟ್ಟಿದ್ದಾರೆ.

ಕೋವಿಡ್ ಸೋಂಕಿತನ ಶವವನ್ನು ಕೊರೊನಾ ಮಾರ್ಗಸೂಚಿ ಅನುಸರಿಸದೆ ಸಮಾಧಿ ಮಾಡಿದ ನಂತರ ಕಳೆದ ಕೆಲ ದಿನಗಳಲ್ಲೇ ರಾಜಸ್ಥಾನದ ಸಿಕಾರ್ ಜಿಲ್ಲೆಯ ಹಳ್ಳಿಯಲ್ಲಿ ಇಪ್ಪತ್ತೊಂದು ಜನರು ಸಾವನ್ನಪ್ಪಿದ್ದಾರೆ.

21 ಸಾವುಗಳಲ್ಲಿ ಕೋವಿಡ್ ಕಾರಣದಿಂದಾಗಿ ಕೇವಲ 3-4 ಸಾವುಗಳು ಸಂಭವಿಸಿವೆ. ಹೆಚ್ಚಿನ ಸಾವುಗಳು ವೃದ್ಧಾಪ್ಯದಿಂದ ಆಗಿವೆ. ನಾವು ಕೋವಿಡ್ -19 ಸಮುದಾಯ ಪ್ರಸರಣವಾಗಿದೆಯೇ ಎಂದು ಪರೀಕ್ಷಿಸಲು ಸಾವು ಸಂಭವಿಸಿದ 147 ಕುಟುಂಬಗಳ ಮಾದರಿಯನ್ನು ನಾವು ತೆಗೆದುಕೊಂಡಿದ್ದೇವೆ ಎಂದು ಲಕ್ಷ್ಮನ್‌ಗಢದ ಉಪ ವಿಭಾಗೀಯ ಅಧಿಕಾರಿ ಕುಲ್ರಾಜ್ ಮೀನಾ ತಿಳಿಸಿದ್ದಾರೆ.

21 Die In Rajasthan Allegedly After Burial Of Covid Infected Man Without Following Protocol

ಗ್ರಾಮದಲ್ಲಿ ಸ್ಯಾನಿಟೈಸೇಶನ್ ಡ್ರೈವ್ ನಡೆಸಲಾಗಿದೆ. ಸಮಸ್ಯೆಯ ತೀವ್ರತೆಯ ಬಗ್ಗೆ ಗ್ರಾಮಸ್ಥರಿಗೆ ವಿವರಿಸಲಾಗಿದ್ದು, ಈಗ ಅವರು ಸಹಕರಿಸುತ್ತಿದ್ದಾರೆ ಎಂದರು.

ಏಪ್ರಿಲ್ 15ರಿಂದ ಮೇ 5ರ ನಡುವೆ ವೈರಸ್‌ನಿಂದ ಕೇವಲ ನಾಲ್ಕು ಸಾವುಗಳು ಸಂಭವಿಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಧಿಕಾರಿಗಳ ಪ್ರಕಾರ, ಏಪ್ರಿಲ್ 21ರಂದು ಕೋವಿಡ್ ಸೋಂಕಿತನ ದೇಹವನ್ನು ಖೀರ್ವಾ ಗ್ರಾಮಕ್ಕೆ ತರಲಾಯಿತು. ಅಂತ್ಯಕ್ರಿಯೆಯಲ್ಲಿ ಸುಮಾರು 150 ಜನರು ಭಾಗಿಯಾಗಿದ್ದರು.

ಆದರೆ ಈ ವೇಳೆ ಕೊರೊನಾ ಮಾರ್ಗಸೂಚಿ ಅನ್ನು ಅನುಸರಿಸದೆ ಸಮಾಧಿ ಮಾಡಲಾಯಿತು. ಶವವನ್ನು ಪ್ಲಾಸ್ಟಿಕ್ ಚೀಲದಿಂದ ಹೊರತೆಗೆದು ಸಮಾಧಿ ಸಮಯದಲ್ಲಿ ಹಲವಾರು ಜನರು ಅದನ್ನು ಮುಟ್ಟಿದ್ದಾರೆ ಎಂದು ಅಧಿಕಾರಿಗಳು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+