ಒಂದೇ ಕುಟುಂಬದ 26 ಸದಸ್ಯರಿಗೆ ಕೊರೊನಾ ವೈರಸ್ ಸೋಂಕು!

ಜೈಪುರ, ಜೂನ್ 09 : ರಾಜಸ್ಥಾನದ ಆರೋಗ್ಯ ಇಲಾಖೆ ಅಧಿಕಾರಿಗಳು ಬೆಚ್ಚಿ ಬಿದ್ದಿದ್ದಾರೆ. ಒಬ್ಬ ವ್ಯಕ್ತಿಯಿಂದಾಗಿ ಆತನ ಕುಟುಂಬ 26 ಸದಸ್ಯರಿಗೆ ಕೊರೊನಾ ವೈರಸ್ ಸೋಂಕು ಹಬ್ಬಿದೆ. ಎಲ್ಲರನ್ನೂ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ರಾಜಸ್ಥಾನದ ಜೈಪುರದಲ್ಲಿ ಈ ರೀತಿ ಒಂದೇ ಕುಟುಂಬದ 26 ಸದಸ್ಯರಿಗೆ ಕೊರೊನಾ ವೈರಸ್ ಸೋಂಕು ಹಬ್ಬಿದೆ. ಜೈಪುರ ಜಿಲ್ಲೆಯ ಮುಖ್ಯ ವೈದ್ಯಕೀಯ ಮತ್ತು ಆರೋಗ್ಯ ಅಧಿಕಾರಿ ಡಾ. ನರೋತ್ತಮ್ ಶರ್ಮಾ ಇದನ್ನು ಖಚಿತಪಡಿಸಿದ್ದಾರೆ.

ಏಳು ದಿನಗಳ ಹಿಂದೆ ಜೈಪುರದ ವ್ಯಕ್ತಿಯೊಬ್ಬನಿಗೆ ಕೊರೊನಾ ವೈರಸ್ ಸೋಂಕು ಕಾಣಿಸಿಕೊಂಡಿತ್ತು. ಆತನನ್ನು ಐಸೋಲೆಷನ್ ವಾರ್ಡ್‌ಗೆ ದಾಖಲು ಮಾಡಲಾಗಿತ್ತು. ರೋಗಿಯ ಜೊತೆ ಪ್ರಾಥಮಿಕ, ಎರಡನೇ ಹಂತದ ಸಂಪರ್ಕದಲ್ಲಿದ್ದ ಕುಟುಂಬ ಸದಸ್ಯರ ಮಾದರಿಗಳನ್ನು ಸಂಗ್ರಹ ಮಾಡಲಾಗಿತ್ತು.

COVID 19 Patient 26 Family Members Tested Positive

ಮಂಗಳವಾರ ಎಲ್ಲರ ಪರೀಕ್ಷೆಯ ವರದಿ ಬಂದಿದ್ದು 26 ಜನರಿಗೂ ಕೊರೊನಾ ವೈರಸ್ ಸೋಂಕು ತಗುಲಿರುವುದು ಖಚಿತವಾಗಿದೆ. ಎಲ್ಲರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಮುಖ್ಯ ವೈದ್ಯಕೀಯ ಮತ್ತು ಆರೋಗ್ಯ ಅಧಿಕಾರಿ ಹೇಳಿದ್ದಾರೆ.

ರಾಜಸ್ಥಾನದಲ್ಲಿ ಮಂಗಳವಾರ 144 ಹೊಸ ಕೊರೊನಾ ವೈರಸ್ ಪ್ರಕರಣ ದಾಖಲಾಗಿದ್ದು, 5 ಜನರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 11020. ಇದುವರೆಗೂ ರಾಜ್ಯದಲ್ಲಿ 251 ಸೋಂಕಿತರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ಹೇಳಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+