ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರೈತರ ಬೇಡಿಕೆಗಳು ತಕ್ಷಣದಿಂದ ಜಾರಿಯಾಗಲಿ: ಸಚಿನ್ ಪೈಲಟ್

|
Google Oneindia Kannada News

ಜೈಪುರ್, ಡಿಸೆಂಬರ್ 11: ರೈತರ ಬೇಡಿಕೆಗಳು ತಕ್ಷಣದಿಂದಲೇ ಜಾರಿಯಾಗಬೇಕು ಎಂದು ರಾಜಸ್ಥಾನದ ಮಾಜಿ ಉಪಮುಖ್ಯಮಂತ್ರಿ ಸಚಿನ್ ಪೈಲಟ್ ಕೇಂದ್ರವನ್ನು ಒತ್ತಾಯಿಸಿದ್ದಾರೆ.

ಮೂರು ಹೊಸ ಕೃಷಿ ಕಾನೂನುಗಳ ವಿರುದ್ಧ ಸಾವಿರಾರು ಸಂಖ್ಯೆಯ ರೈತರು ಕೇಂದ್ರದ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಈ ಕಾನೂನುಗಳು ಕನಿಷ್ಟ ಬೆಂಬಲ ಬೆಲೆ ವ್ಯವಸ್ಥೆಯನ್ನು ಕಿತ್ತುಹಾಕಲು ದಾರಿ ಮಾಡಿಕೊಡುತ್ತವೆ ಮತ್ತುಬೃಹತ್ ಬಂಡವಾಳಶಾಹಿ ಸಂಸ್ಥೆಗಳ ಹಿಡಿತಕ್ಕೆ ಸಿಗುತ್ತದೆ ಎಂಬ ಆತಂಕವನ್ನು ಅವರು ವ್ಯಕ್ತಪಡಿಸಿದ್ದಾರೆ.

ರೈತರು ಈಗ ಸಂಪೂರ್ಣ ಜಾಗೃತರಾಗಿದ್ದಾರೆ. ಅವರ ಭವಿಷ್ಯ, ಹಕ್ಕು ಮತ್ತು ಭೂಮಿಯನ್ನು ರಕ್ಷಿಸಲು ಸಮರ್ಥರಾಗಿದ್ದಾರೆ ಕೇಂದ್ರ ಸರ್ಕಾರವು ಅವರನ್ನು ಯಾವುದೇ ಕೆಟ್ಟ ಮತ್ತು ಪ್ರಜಾಪ್ರಭುತ್ವ ವಿರೋಧಿ ಪ್ರಯತ್ನಗಳಿಂದ ಗೊಂದಲಕ್ಕೀಡುಮಾಡಲು ಸಾಧ್ಯವಿಲ್ಲ ಎಂದು ಅವರು ಟ್ವೀಟ್ ಮಾಡಿದ್ದಾರೆ.

sachin pilot

ರೈತರ ಎಲ್ಲ ಬೇಡಿಕೆಗಳನ್ನು ಕೇಂದ್ರ ಸರ್ಕಾರ ಕೂಡಲೇ ಒಪ್ಪಿಕೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.ಪ್ರತಿಭಟನಾಕಾರರು ಮತ್ತು ಸರ್ಕಾರದ ಪ್ರತಿನಿಧಿಗಳ ನಡುವೆ ಅನೇಕ ಸುತ್ತಿನ ಮಾತುಕತೆಗಳು ನಡೆದಿವೆ ಆದರೆ ಪ್ರತಿಭಟನೆ, ಗೊಂದಲಗಳು ಮುಂದುವರಿದಿದೆ

ಹಾಗಿದ್ದರೂ, ಹೊಸ ಕಾನೂನುಗಳು ರೈತರಿಗೆ ಉತ್ತಮ ಅವಕಾಶಗಳನ್ನು ನೀಡುತ್ತದೆ. ಕೃಷಿಯಲ್ಲಿ ಹೊಸ ತಂತ್ರಜ್ಞಾನಗಳ ಅಳವಡಿಕೆಗೆ ನಾಂದಿ ಆಗುತ್ತದೆಎಂದು ಸರ್ಕಾರ ಸಮರ್ಥಿಸಿಕೊಂಡಿದೆ.

English summary
Congress leader and former Rajasthan deputy chief minister Sachin Pilot on Thursday asked the Centre to accept the demands of the agitating farmers with immediate effect.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X