• search
  • Live TV
ಜೈಪುರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕೃಷಿ ಭಾರತ ಮಾತೆಗಾಗಿಯೇ ಹೊರತೂ ಉದ್ಯಮಿಗಳಿಗಾಗಿ ಅಲ್ಲ: ರಾಹುಲ್ ಗಾಂಧಿ

|

ಜೈಪುರ್, ಫೆಬ್ರವರಿ.13: ಭಾರತದಲ್ಲಿ ಕೇಂದ್ರ ಸರ್ಕಾರವು ಜಾರಿಗೊಳಿಸಿರುವ ವಿವಾದಿತ ಕೃಷಿ ಸಂಬಂಧಿತ ಕಾಯ್ದೆಗಳು ನಿರುದ್ಯೋಗ ಸೃಷ್ಟಿಗೆ ಕಾರಣವಾಗುತ್ತವೆ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ರಾಜಸ್ಥಾನದ ಅಜ್ಮೀರ್ ನಲ್ಲಿ ಮಾತನಾಡಿರುವ ರಾಹುಲ್ ಗಾಂಧಿ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನೀವು ರೈತರಿಗೆ ಆಯ್ಕೆಗಳನ್ನು ನೀಡುತ್ತಿದ್ದೀರಿ ನಿಜ. ಆದರೆ ಅವು ಹಸಿವು, ನಿರುದ್ಯೋಗ ಮತ್ತು ಆತ್ಮಹತ್ಯೆ ಎಂಬ ಆಯ್ಕೆಗಳಾಗಿವೆ ಎಂದು ರಾಹುಲ್ ಗಾಂಧಿ ದೂಷಿಸಿದ್ದಾರೆ.

ರೈತರ ಪ್ರತಿಭಟನೆ ವೇಳೆ ಹಿಂಸಾಚಾರ ಪ್ರಕರಣ: ಮತ್ತೆ ಮೂವರ ಬಂಧನ ರೈತರ ಪ್ರತಿಭಟನೆ ವೇಳೆ ಹಿಂಸಾಚಾರ ಪ್ರಕರಣ: ಮತ್ತೆ ಮೂವರ ಬಂಧನ

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರೈತರೊಂದಿಗೆ ಮಾತನಾಡುವುದಕ್ಕೆ ಬಯಸುತ್ತಾರೆ. ಆದರೆ ವಿವಾದಿತ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವವರೆಗೂ ರೈತರೊಂದಿಗೆ ಚರ್ಚಿಸಿ ಏನು ಪ್ರಯೋಜನ ಎಂದು ರಾಹುಲ್ ಗಾಂಧಿ ಪ್ರಶ್ನೆ ಮಾಡಿದ್ದಾರೆ. ದೇಶದ ರೈತರು ಕೃಷಿಯನ್ನು ಮಾಡುವುದು ಭಾರತ ಮಾತೆಗಾಗಿಯೇ ಹೊರತು ಉದ್ಯಮಿಗಳಿಗೋಸ್ಕರವಲ್ಲ ಎಂದು ಕಿಡಿ ಕಾರಿದ್ದಾರೆ.


ಕೃಷಿ ಕಾಯ್ದೆ ವಿರುದ್ಧದ ಹೋರಾಟ:

ಕೇಂದ್ರ ಸರ್ಕಾರ ಜಾರಿಗೊಳಿಸಿರುವ ವಿವಾದಿತ ರೈತರ ಉತ್ಪಾದನೆ ವ್ಯಾಪಾರ ಮತ್ತು ವಾಣಿಜ್ಯ (ಪ್ರಚಾರ ಮತ್ತು ಸೌಲಭ್ಯ) ಕಾಯ್ದೆ, ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಕಾಯ್ದೆ (ಸಬಲೀಕರಣ ಮತ್ತು ಸಂರಕ್ಷಣೆ) ಒಪ್ಪಂದ ಹಾಗೂ ಅಗತ್ಯ ಸರಕುಗಳ (ತಿದ್ದುಪಡಿ) ಕಾಯ್ದೆಗಳ ವಿರುದ್ಧ ನವಂಬರ್.26 ರಿಂದ ಪ್ರತಿಭಟನೆ ನಡೆಸಲಾಗುತ್ತಿದೆ. ಕಳೆದ 80 ದಿನಗಳಿಂದ ನವದೆಹಲಿಯ ಸಿಂಘು ಗಡಿ, ಟಿಕ್ರಿ ಗಡಿ ಮತ್ತು ಘಾಜಿಪುರ್ ಗಡಿಯಲ್ಲಿ ಸಾವಿರಾರು ರೈತರು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ.

English summary
Agriculture Belongs To 'Bharat Mata', Not To Industrialist, Says Rahul Gandhi In Rajasthan.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X