ಜೂನ್ 1ರಿಂದ ಕಚೇರಿಗಳಲ್ಲಿ ಪೂರ್ಣ ಪ್ರಮಾಣದ ಹಾಜರಾತಿಗೆ ರಾಜಸ್ಥಾನ ಅನುಮತಿ

ಜೈಪುರ, ಮೇ 31: ಕೊರೊನಾ ವೈರಸ್ ಭೀತಿಯ ನಡುವೆಯೂ ರಾಜಸ್ಥಾನದಲ್ಲಿ ಸರ್ಕಾರಿ ಮತ್ತು ಖಾಸಗಿ ಕಚೇರಿಗಳಲ್ಲಿ ಪೂರ್ಣ ಪ್ರಮಾಣದ ಹಾಜರಾತಿಯೊಂದಿಗೆ ಕೆಲಸ ಮಾಡಲು ಸರ್ಕಾರ ಅನುಮತಿ ನೀಡಿದೆ.

ಜೂನ್ 1ರಿಂದ ಪೂರ್ಣ ಪ್ರಮಾಣದ ಸಿಬ್ಬಂದಿಗಳು ಕಚೇರಿಯಲ್ಲಿ ಕೆಲಸ ಮಾಡಬಹುದು ಎಂದು ರಾಜಸ್ಥಾನ ಸರ್ಕಾರ ಭಾನುವಾರ ಮಾರ್ಗಸೂಚಿ ಹೊರಡಿಸಿದೆ.

ಆದರೆ, ಜೂನ್ 30ರವರೆಗೂ ರಾಜ್ಯದಲ್ಲಿ ಧಾರ್ಮಿಕ ಸ್ಥಳಗಳು, ಹೋಟೆಲ್‌ಗಳು, ಮಾಲ್‌ಗಳ ಮೇಲಿನ ನಿಷೇಧವನ್ನು ಮುಂದುವರಿಯಲಿದೆ ಎಂದು ಸೂಚಿಸಿದೆ. ಖಾಸಗಿ ಮತ್ತು ವಾಣಿಜ್ಯ ಸಾರಿಗೆ ವಾಹನಗಳು ಸಹ ಪ್ರಯಾಣಿಕರನ್ನು ಸಂಪೂರ್ಣ ಸಾಮರ್ಥ್ಯದೊಂದಿಗೆ ಸಂಚಾರ ನಡೆಸಬಹುದು ಎಂದು ಸರ್ಕಾರ ಹೊಸ ಮಾರ್ಗಸೂಚಿಯಲ್ಲಿ ತಿಳಿಸಿದೆ.

All govt and private offices to start with full strength from June 1 at Rajasthan

ಇನ್ನು ಅಂತರರಾಜ್ಯ ಮತ್ತು ಅಂತರ ಕಾರ್ಯಾಚರಣೆಗೆ ಅವಕಾಶ ಮಾಡಿಕೊಡಲಾಗಿದೆ. ಆದರೆ ಕಂಟೈನ್‌ಮೆಂಟ್‌ ವಲಯಗಳಲ್ಲಿ ಬಸ್ ಸಂಚರಿಸುತ್ತಿಲ್ಲ. ನಗರದಲ್ಲಿ ಸಿಟಿ ಬಸ್ಸುಗಳು ಸಂಚರಿಸಲು ಅಶೋಕ್ ಗೆಹ್ಲೋಟ್ ಸರ್ಕಾರದಿಂದ ಅನುಮತಿ ಸಿಕ್ಕಿಲ್ಲ.

ಅಂತರರಾಜ್ಯ ಪ್ರಯಾಣಕ್ಕೆ ಯಾವುದೇ ನಿರ್ಬಂಧವಿರುವುದಿಲ್ಲ ಮತ್ತು ಅದಕ್ಕಾಗಿ ಪ್ರತ್ಯೇಕ ಪಾಸ್, ಅನುಮತಿ, ಅನುಮೋದನೆ ಅಥವಾ ಪರವಾನಗಿ ಅಗತ್ಯವಿಲ್ಲ ಎಂದು ಮಾರ್ಗಸೂಚಿಗಳು ತಿಳಿಸಿವೆ. ಮತ್ತೊಂದಡೆ ರಾಜಸ್ಥಾನದಲ್ಲಿ ಹೊಸದಾಗಿ 214 ಕೇಸ್‌ಗಳು ವರದಿಯಾಗಿದೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 8831ಕ್ಕೆ ಏರಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+