ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜಸ್ಥಾನ ಬಿಕ್ಕಟ್ಟು; ಸಿಎಲ್‌ಪಿ ಸಭೆ ಕರೆದ ಅಶೋಕ್ ಗೆಹ್ಲೋಟ್

|
Google Oneindia Kannada News

ಜೈಪುರ, ಜುಲೈ 21 : ರಾಜಸ್ಥಾನ ಕಾಂಗ್ರೆಸ್ ಪಕ್ಷದಲ್ಲಿನ ಬಿಕ್ಕಟ್ಟು ಇನ್ನೂ ಅಂತ್ಯಗೊಂಡಿಲ್ಲ. ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮಂಗಳವಾರ ಮತ್ತೊಂದು ಬಾರಿ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ. ಬಂಡಾಯ ಶಾಸಕರ ಅನರ್ಹತೆ ಬಗ್ಗೆಯೂ ಹೈಕೋರ್ಟ್‌ನಲ್ಲಿ ವಿಚಾರಣೆ ನಡೆಯಲಿದೆ.

ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಬೆಂಬಲಿತ ಶಾಸಕರು ಇರುವ ಹೋಟೆಲ್‌ನಲ್ಲಿಯೇ ಶಾಸಕಾಂಗ ಪಕ್ಷದ ಸಭೆ ನಡೆಯುತ್ತಿದೆ. ರಾಜಸ್ಥಾನದ ಕಾಂಗ್ರೆಸ್ ಸರ್ಕಾರಕ್ಕೆ ಬೆಂಬಲ ನೀಡುವ ಎಲ್ಲಾ ಶಾಸಕರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಗೆಹ್ಲೋಟ್ ಜೇಬಲ್ಲಿ ಮ್ಯಾಜಿಕ್ ನಂಬರ್; ಕಾಂಗ್ರೆಸ್ ಸರ್ಕಾರ ಸುಭದ್ರ! ಗೆಹ್ಲೋಟ್ ಜೇಬಲ್ಲಿ ಮ್ಯಾಜಿಕ್ ನಂಬರ್; ಕಾಂಗ್ರೆಸ್ ಸರ್ಕಾರ ಸುಭದ್ರ!

Ashok Gehlot Calls Congress Legislative Party Meeting

ಅಶೋಕ್ ಗೆಹ್ಲೋಟ್ ತಮ್ಮ ಬಳಿ 104 ಶಾಸಕರು ಇದ್ದಾರೆ ಎಂದು ಹೇಳುತ್ತಿದ್ದಾರೆ. ಮತ್ತೊಂದು ಕಡೆ ಸಚಿನ್ ಪೈಲೆಟ್ ಬಣದಲ್ಲಿ ಎಷ್ಟು ಶಾಸಕರಿದ್ದಾರೆ? ಎಂಬ ಚಿತ್ರಣ ಇನ್ನೂ ಸಿಕ್ಕಿಲ್ಲ. ಕಳೆದ ವಾರ 2 ಬಾರಿ ಸಿಎಲ್‌ಪಿ ಸಭೆಯನ್ನು ನಡೆಸಲಾಗಿತ್ತು.

ಬಿಜೆಪಿ ಲೆಕ್ಕಾಚಾರ ಉಲ್ಟಾ; ಪ್ರಿಯಾಂಕಾ ಜೊತೆ ಸಚಿನ್ ಮಾತುಕತೆ! ಬಿಜೆಪಿ ಲೆಕ್ಕಾಚಾರ ಉಲ್ಟಾ; ಪ್ರಿಯಾಂಕಾ ಜೊತೆ ಸಚಿನ್ ಮಾತುಕತೆ!

ಕಾಂಗ್ರೆಸ್‌ನ ಯಾವುದಾದರೂ ಶಾಸಕರು ಇಂದಿನ ಸಭೆಗೆ ಗೈರಾಗಿ ಸಚಿನ್ ಪೈಲೆಟ್ ಬಣ ಸೇರಲಿದ್ದಾರೆಯೇ? ಎಂಬುದು ಕುತೂಹಲಕ್ಕೆ ಕಾರಣವಾಗಿದೆ. ಸಚಿನ್ ಪೈಲೆಟ್ ಮತ್ತು ಅವರ ಬೆಂಬಲಿತ 18 ಶಾಸಕರು ಕಳೆದ 2 ಸಿಎಲ್‌ಪಿ ಸಭೆಗೂ ಗೈರಾಗಿದ್ದರು.

''ನಾನು ಬಿಜೆಪಿ ಸೇರಲ್ಲ'' ಎಂದ ಸಚಿನ್ ಪೈಲಟ್, ಮುಂದೇನು? ''ನಾನು ಬಿಜೆಪಿ ಸೇರಲ್ಲ'' ಎಂದ ಸಚಿನ್ ಪೈಲಟ್, ಮುಂದೇನು?

ಸಚಿನ್ ಪೈಲೆಟ್ ಮತ್ತು ಉಳಿದ 18 ಶಾಸಕರ ಅನರ್ಹತೆ ಸ್ಪೀಕರ್ ನೋಟಿಸ್ ನೀಡಿದ್ದಾರೆ. ಮಂಗಳವಾರ ಸಂಜೆ ತನಕ ಯಾವುದೇ ಕ್ರಮ ಕೈಗೊಳ್ಳಬಾರದು ಎಂದು ರಾಜಸ್ಥಾನ ಹೈಕೋರ್ಟ್ ಸೂಚನೆ ನೀಡಿದೆ. ಇಂದು ಸಹ ಅರ್ಜಿಯ ವಿಚಾರಣೆ ಹೈಕೋರ್ಟ್‌ನಲ್ಲಿ ನಡೆಯಲಿದೆ.

ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಈ ವಾರ ವಿಶೇಷ ವಿಧಾನಸಭೆ ಅಧಿವೇಶನ ಕರೆದು ಬಹುಮತ ಸಾಬೀತು ಮಾಡಲು ತೀರ್ಮಾನಿಸಿದ್ದಾರೆ. ಆದ್ದರಿಂದ, ಇಂದು ನಡೆಯಲಿರುವ ಸಭೆ ಕುತೂಹಲಕ್ಕೆ ಕಾರಣವಾಗಿದೆ.

English summary
Crisis continue in Rajasthan Congress. Chief Minister Ashok Gehlot called Congress Legislative Party (CLP) meeting. MLAs supporting Ashok Gehlot will take part in the meeting on July 21.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X