ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜಸ್ಥಾನದಲ್ಲಿ ವಿಶ್ವಾಸಮತಯಾಚನೆ ಇಲ್ಲ?

|
Google Oneindia Kannada News

ಜೈಪುರ, ಜುಲೈ 26 : ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ವಿಧಾನಸಭೆ ಅಧಿವೇಶನ ಕರೆಯುವಂತೆ ರಾಜ್ಯಪಾಲರಿಗೆ ಮತ್ತೊಂದು ಮನವಿ ಸಲ್ಲಿಕೆ ಮಾಡಿದ್ದಾರೆ. ಈ ಮನವಿಯಲ್ಲಿ ವಿಶ್ವಾಸಮತ ಯಾಚನೆ ಮಾಡುವ ಕುರಿತು ಯಾವುದೇ ಉಲ್ಲೇಖ ಮಾಡಿಲ್ಲ.

ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಶುಕ್ರವಾರ ರಾಜ್ಯಪಾಲ ಕಲ್ರಾಜ್ ಮಿಶ್ರಾರನ್ನು ಭೇಟಿ ಮಾಡಿದ್ದರು. ರಾಜ್ಯದ ರಾಜಕೀಯ ಪರಿಸ್ಥಿತಿ, ಕೊರೊನಾ ವಿಚಾರಗಳ ಕುರಿತು ಚರ್ಚಿಸಲು ವಿಧಾನಸಭೆ ಅಧಿವೇಶನ ಕರೆಯುವಂತೆ ಮನವಿ ಮಾಡಿದ್ದರು.

ರಾಜಸ್ಥಾನ; ಕಾಂಗ್ರೆಸ್ ಶಾಸಕರ ಅನರ್ಹತೆ ಬಿಕ್ಕಟ್ಟು ಸುಪ್ರೀಂಕೋರ್ಟ್‌ಗೆ ರಾಜಸ್ಥಾನ; ಕಾಂಗ್ರೆಸ್ ಶಾಸಕರ ಅನರ್ಹತೆ ಬಿಕ್ಕಟ್ಟು ಸುಪ್ರೀಂಕೋರ್ಟ್‌ಗೆ

ಆದರೆ, ರಾಜ್ಯಪಾಲರು ಈ ಮನವಿಯನ್ನು ತಳ್ಳಿ ಹಾಕಿದ್ದರು. ಆದ್ದರಿಂದ ಅಶೋಕ್ ಗೆಹ್ಲೋಟ್ ಜುಲೈ 31ರಿಂದ ವಿಧಾನಸಭೆ ಅಧಿವೇಶನ ಕರೆಯಬೇಕು ಎಂದು ಮತ್ತೊಂದು ಪತ್ರವನ್ನು ರಾಜ್ಯಪಾಲರಿಗೆ ಬರೆದಿದ್ದಾರೆ.

ರಾಜಸ್ಥಾನ ಬಿಕ್ಕಟ್ಟು; ವಿಶ್ವಾಸಮತ ಯಾಚನೆಗೆ ಗೆಹ್ಲೋಟ್ ಒಪ್ಪಿಗೆ!ರಾಜಸ್ಥಾನ ಬಿಕ್ಕಟ್ಟು; ವಿಶ್ವಾಸಮತ ಯಾಚನೆಗೆ ಗೆಹ್ಲೋಟ್ ಒಪ್ಪಿಗೆ!

Ashok Gehlot Letter TO Governor No Floor Test

ಕೊರೊನಾ ಪರಿಸ್ಥಿತಿ ಕುರಿತು ಚರ್ಚೆ ನಡೆಸಲು ಅಧಿವೇಶನ ಕರೆಯಬೇಕು ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಆದರೆ, ವಿಶ್ವಾಸಮತ ಯಾಚನೆ ಮಾಡುವ ಬಗ್ಗೆ ಪತ್ರದಲ್ಲಿ ಯಾವುದೇ ಉಲ್ಲೇಖವಿಲ್ಲ. ಮುಖ್ಯಮಂತ್ರಿಗಳ ಈ ಪತ್ರ ಕುತೂಹಲಕ್ಕೆ ಕಾರಣವಾಗಿದೆ.

ಸಚಿನ್ ಪೈಲೆಟ್ ಅನರ್ಹತೆ ಪ್ರಕರಣ; ಹೈಕೋರ್ಟ್ ತೀರ್ಪು ಪ್ರಕಟ ಸಚಿನ್ ಪೈಲೆಟ್ ಅನರ್ಹತೆ ಪ್ರಕರಣ; ಹೈಕೋರ್ಟ್ ತೀರ್ಪು ಪ್ರಕಟ

ಕಾಂಗ್ರೆಸ್ ಬಂಡಾಯ ಶಾಸಕ ಸಚಿನ್ ಪೈಲೆಟ್ ಸೇರಿದಂತೆ 19 ಶಾಸಕರ ಅನರ್ಹತೆ ವಿಚಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ. ಅರ್ಜಿಯ ವಿಚಾರಣೆಯನ್ನು ಕೋರ್ಟ್ ಪೂರ್ಣಗೊಳಿಸಿದ್ದು, ಸೋಮವಾರ ತೀರ್ಪು ನೀಡಲಿದೆ.

ಸಚಿನ್ ಪೈಲೆಟ್ ಸೇರಿದಂತೆ 19 ಕಾಂಗ್ರೆಸ್ ಶಾಸಕರನ್ನು ಅನರ್ಹಗೊಳಿಸಲು ಸ್ಪೀಕರ್ ನೀಡಿರುವ ನೋಟಿಸ್‌ ಅನ್ನು ಹೈ ಶಾಸಕರು ಕೋರ್ಟ್‌ನಲ್ಲಿ ಪ್ರಶ್ನೆ ಮಾಡಿದ್ದರು. ಶುಕ್ರವಾರ ರಾಜಸ್ಥಾನ ಹೈಕೋರ್ಟ್ ತೀರ್ಪನ್ನು ಪ್ರಕಟಿಸಿದ್ದು, ಯಥಾಸ್ಥಿತಿ ಕಾಪಾಡಿಕೊಳ್ಳುವಂತೆ ಸೂಚನೆ ನೀಡಿದೆ.

ಅಶೋಕ್ ಪೈಲೆಟ್ ಬಣದಲ್ಲಿ ಎಷ್ಟು ಶಾಸಕರಿದ್ದಾರೆ?, ಸಚಿನ್ ಪೈಲೆಟ್ ಬಣದಲ್ಲಿ ಎಷ್ಟು ಶಾಸಕರು ಇದ್ದಾರೆ? ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

English summary
Rajasthan CM Ashok Gehlot write a letter to governor Kalraj Mishra to start the assembly session from July 31. The agenda is Coronavirus and there is no word of a floor test.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X