ರಾಜಸ್ಥಾನ ಸಿಎಂ ಗೆಹ್ಲೋಟ್: ಅಧಿಕೃತ ಘೋಷಣೆಯೊಂದೇ ಬಾಕಿ?
ನವದೆಹಲಿ, ಡಿಸೆಂಬರ್ 13: ಬಹಳ ಕುತೂಹಲ ಕೆರಳಿಸಿದ್ದ ಮುಖ್ಯಮಂತ್ರಿ ಆಯ್ಕೆಯ ಪ್ರಕ್ರಿಯೆಗೆ ಕೊನೆಗೂ ಉತ್ತರ ಸಿಕ್ಕಿದ್ದು, ರಾಜಸ್ಥಾನದ ಮುಖ್ಯಮಂತ್ರಿಯಾಗಿ ಕಾಂಗ್ರೆಸ್ ನಾಯಕ ಅಶೋಕ್ ಗೆಹ್ಲೋಟ್ ಅವರು ಆಯ್ಕೆಯಾಗಿರುವುದು ಬಹುತೇಕ ಖಚಿತವಾಗಿದೆ.
ರಾಜಸ್ಥಾನದ ಮುಖ್ಯಮಂತ್ರಿ ಸ್ಥಾನಕ್ಕಾಗಿ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಸಚಿನ್ ಪೈಲಟ್ ಮತ್ತು ಮಾಜಿ ಮುಖ್ಯಮಂತ್ರಿ ಗೆಹ್ಲೋಟ್ ಅವರ ನಡುವೆ ಬಿರುಸಿನ ಪೈಪೋಟಿ ಇತ್ತು.
ಈ ಸಂಬಂಧ ಇಂದು ಮುಖ್ಯಮಂತ್ರಿ ಹುದ್ದೆ ಆಕಾಂಕ್ಷಿಗಳೆಲ್ಲರನ್ನೂ ದೆಹಲಿಗೆ ಕರೆಸಿ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಸಭೆ ನಡೆಸಿದ್ದರು. ಸಭೆಯ ನಂತರ ಕಾಂಗ್ರೆಸ್ ಮೂಲಗಳೇ ತಿಳಿಸಿರುವ ಪ್ರಕಾರ ಅಶೋಕ್ ಗೆಹ್ಲೋಟ್ ಅವರನ್ನು ರಾಜಸ್ಥಾನದ ಮುಖ್ಯಮಂತ್ರಿಯನ್ನಾಗಿ ರಾಹುಲ್ ಗಾಂಧಿ ಅವರು ಆಯ್ಕೆ ಮಾಡಿದ್ದಾರೆ ಎಂಬುದು ತಿಳಿದುಬಂದಿದೆ.

ಪಕ್ಷವು ಇನ್ನು ಕೆಲವೇ ಕ್ಷಣಗಳಲ್ಲಿ ಮುಖ್ಯಮಂತ್ರಿ ಹುದ್ದೆಗೆ ಗೆಹ್ಲೋಟ್ ಹೆಸರನ್ನು ಅಧಿಕೃತವಾಗಿ ಘೋಷಿಸಲಿದೆ ಎಂದು ಮೂಲಗಳು ತಿಳಿಸಿವೆ.
200 ಕ್ಷೇತ್ರಗಳ ರಾಜಸ್ಥಾನದಲ್ಲಿ 99 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿರುವ ಕಾಂಗ್ರೆಸ್ ಪಕ್ಷೇತರರೊಂದಿಗೆ ಸೇರಿ ಸರ್ಕಾರ ರಚಿಸುತ್ತಿದೆ.












Click it and Unblock the Notifications