ರಾಜ್ಯಸಭೆ: ಪವಾಡ ಸಂಭವಿಸಿದರೆ ಮಾತ್ರ ಬಿಜೆಪಿಗೆ ಗೆಲುವು!

ಜೈಪುರ, ಜೂನ್ 10: ದೇಶದಲ್ಲಿ ರಾಜ್ಯಸಭೆ ಚುನಾವಣೆಗಾಗಿ ಮತದಾನ ಜಾರಿಯಲ್ಲಿದೆ. ಸಂಜೆ ವೇಳೆಗೆ ಮತ ಎಣಿಕೆ, ಫಲಿತಾಂಶ ಹೊರ ಬೀಳಲಿದೆ. 15 ರಾಜ್ಯಗಳ 57 ಸ್ಥಾನಗಳಿಗೆ ಚುನಾವಣೆ ನಿಗದಿಯಾಗಿತ್ತು. ಆದರೆ, ಈ ಪೈಕಿ11 ರಾಜ್ಯಗಳ ಒಟ್ಟು 41 ರಾಜ್ಯಸಭೆ ಸದಸ್ಯರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ರಾಜಸ್ಥಾನದಲ್ಲಿ ಬಿಜೆಪಿ ಗೆಲುವು ಗಳಿಸಬೇಕಾದರೆ ಪವಾಡ ಸಂಭವಿಸಬೇಕಾಗುತ್ತದೆ.

ರಾಜಸ್ಥಾನದಲ್ಲಿ ನಾಲ್ಕು ಸ್ಥಾನಗಳ ಪೈಕಿ ಮೂರು ಸ್ಥಾನಗಳನ್ನು ಕಾಂಗ್ರೆಸ್ ಸುಲಭವಾಗಿ ಗೆಲ್ಲಲಿದೆ ಎಂದು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಉದ್ಯಮಿ ಸುಭಾಷ್ ಚಂದ್ರರನ್ನು ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಸಿ ಬೆಂಬಲ ನೀಡಿರುವ ಬಿಜೆಪಿ ವಿರುದ್ಧ ಅಶೋಕ್ ಗೆಹ್ಲೋಟ್ ಕಿಡಿಕಾರಿದ್ದಾರೆ. ಬಹುಮತ ಗಳಿಸುವ ಸಾಧ್ಯತೆ ಕಡಿಮೆ ಇದ್ದರೂ ಪ್ರಾಶಸ್ತ್ಯ ಮತಗಳನ್ನು ಒಡೆಯಲು ಬಿಜೆಪಿ ವಾಮಮಾರ್ಗ ಅನುಸರಿಸುತ್ತಿದೆ ಎಂದು ಗೆಹ್ಲೋಟ್ ಹೇಳಿದ್ದಾರೆ. ಸುಭಾಷ್ ಚಂದ್ರ ಅಭ್ಯರ್ಥಿಯಾಗಿರುವುದು ಬಿಜೆಪಿಯಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ ಎಂದರು.

BJP banks on miracle, Congress on numbers in Rajasthan Rajya Sabha polls

ಬಿಜೆಪಿಯ ಅಧಿಕೃತ ಅಭ್ಯರ್ಥಿ ಘನಶ್ಯಾಮ್ ತಿವಾರಿ ಹಾಗೂ ಸ್ವತಂತ್ರ ಅಭ್ಯರ್ಥಿ ಚಂದ್ರ ಗೆಲುವಿನ ವಿಶ್ವಾಸ ವ್ಯಕ್ತವಾಗಿದೆ.

ಪ್ರತಿನಿಧಿಗಳ ಜೊತೆ ಮಾತನಾಡಿದ ಸಿಎಂ ಅಶೋಕ್

ಪ್ರತಿನಿಧಿಗಳ ಜೊತೆ ಮಾತನಾಡಿದ ಸಿಎಂ ಅಶೋಕ್

ದೆಹಲಿ ಹೆದ್ದಾರಿಯಲ್ಲಿರುವ ಲೀಲಾ ಪ್ಯಾಲೇಸ್ ಹೋಟೆಲ್ ಹೊರಗಡೆ ಎದುರಾದ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಸಿಎಂ ಅಶೋಕ್, ನಾವು ಸುಲಭವಾಗಿ ಮೂರು ಸ್ಥಾನಗಳನ್ನು ಗೆಲ್ಲುತ್ತೇವೆ, ಇದರಲ್ಲಿ ಯಾವುದೇ ಅನುಮಾನ ಬೇಡ ಅವರು(ಬಿಜೆಪಿ) ಸದನವನ್ನು ಕಾಪಾಡಬೇಕು, ಮತ್ತೊಬ್ಬ ಅಭ್ಯರ್ಥಿಯನ್ನು ನಿಲ್ಲಿಸಿ ಪಕ್ಷದಲ್ಲಿ ಬಿಕ್ಕಟ್ಟು ಉಂಟು ಮಾಡಿದ್ದಾರೆ ಎಂದಿದ್ದಾರೆ.

2020ರ ರಾಜ್ಯಸಭೆ ಚುನಾವಣೆಯಲ್ಲೂ ಇದೇ ರೀತಿ ತಂತ್ರ ಅನುಸರಿಸಿದರೂ ಬಿಜೆಪಿಗೆ ಗೆಲುವು ಲಭಿಸಿರಲಿಲ್ಲ ಎಂದು ಅಶೋಕ್ ಹೇಳಿದರು.

ಪವಾಡ ಸಂಭವಿಸಲಿದೆ

ಪವಾಡ ಸಂಭವಿಸಲಿದೆ

ಆದರೆ, ಗೆಲುವಿನ ಬಗ್ಗೆ ವಿಶ್ವಾಸ ಹೊಂದಿರುವ ಬಿಜೆಪಿ ಶಾಸಕ ವಾಸುದೇವ್ ದೇವ್ನಾನಿ, ಸಂಜೆ ಫಲಿತಾಂಶ ಹೊರಬರುತ್ತಿದ್ದಂತೆ ಪವಾಡ ಸಂಭವಿಸಲಿದ್ದು, ಗೆಲುವು ನಮ್ಮದಾಗಲಿದೆ ಎಂದಿದ್ದಾರೆ.

ರಾಜಸ್ಥಾನದಲ್ಲಿ ಅಭ್ಯರ್ಥಿ ಗೆಲ್ಲಲು 41 ಮತಗಳ ಅಗತ್ಯವಿದೆ.

ಕಾಂಗ್ರೆಸ್ 108 ಶಾಸಕರನ್ನು ಹೊಂದಿದ್ದು, 26 ಅಧಿಕ ಮತ ಮೌಲ್ಯದೊಂದಿಗೆ ಎರಡು ಸ್ಥಾನವನ್ನು ಸುಲಭವಾಗಿ ಗೆಲ್ಲಲಿದೆ. ಮೂರನೇ ಸ್ಥಾನ ಗೆಲ್ಲಲು ಇನ್ನೂ 15 ಸ್ಥಾನ ಬೇಕಾಗುತ್ತದೆ. ಕಾಂಗ್ರೆಸ್ ಪಕ್ಷದಿಂದ ರಣದೀಪ್ ಸುರ್ಜೇವಾಲ, ಮುಕುಲ್ ವಾಸ್ನಿಕ್ ಹಾಗೂ ಪ್ರಮೋದ್ ತಿವಾರಿಗೆ 126 ಶಾಸಕರ ಬಲ ಸಿಗುವ ನಿರೀಕ್ಷೆಯಿದೆ

ಬಿಜೆಪಿ 71 ಶಾಸಕ ಬಲ ಹೊಂದಿದ್ದು, ಒಂದು ಸ್ಥಾನ ಗೆಲ್ಲುವ ನಿರೀಕ್ಷೆ ಹೊಂದಿದ್ದು, 30 ಹೆಚ್ಚುವರಿ ಮತ ಮೌಲ್ಯ ಹೊಂದಿದೆ.

16 ಸದಸ್ಯರ ಆಯ್ಕೆ ಕುತೂಹಲ

16 ಸದಸ್ಯರ ಆಯ್ಕೆ ಕುತೂಹಲ

ಮಹಾರಾಷ್ಟ್ರ, ರಾಜಸ್ಥಾನ, ಕರ್ನಾಟಕ ಮತ್ತು ಹರ್ಯಾಣ ರಾಜ್ಯಗಳಲ್ಲಿನ 16 ಸದಸ್ಯರ ಆಯ್ಕೆ ಕುತೂಹಲ ಕೆರಳಿಸಿದೆ. ಈ ನಾಲ್ಕು ರಾಜ್ಯಗಳಲ್ಲಿ ಯಾರಿಗೆ ಜಯ ಲಭಿಸಲಿದೆ ಎಂಬುದನ್ನು ಕಾದು ನೋಡಬೇಕಿದೆ. ಕಳೆದ ಜೂನ್ ಮತ್ತು ಆಗಸ್ಟ್ ನಡುವೆ ವಿವಿಧ ದಿನಾಂಕಗಳಲ್ಲಿ ಸದಸ್ಯರ ನಿವೃತ್ತಿಯಿಂದಾಗಿ ಖಾಲಿಯಾಗುವ ಸ್ಥಾನಗಳಿಗೆ ಚುನಾವಣೆ ನಡೆಸಲಾಗುತ್ತಿದೆ. ಕೇಂದ್ರ ಸಚಿವ ಪಿಯೂಷ್ ಗೋಯಲ್ ಮತ್ತು ಮುಖ್ತಾರ್ ಅಬ್ಬಾಸ್ ನಖ್ವಿ, ಕಾಂಗ್ರೆಸ್ ನಾಯಕ ಅಂಬಿಕಾ ಸೋನಿ, ಜೈರಾಮ್ ರಮೇಶ್ ಮತ್ತು ಕಪಿಲ್ ಸಿಬಲ್ ಮತ್ತು ಬಿಎಸ್‌ಪಿಯ ಸತೀಶ್ ಚಂದ್ರ ಮಿಶ್ರಾ ನಿವೃತ್ತಿ ಆಗಲಿದ್ದಾರೆ.

ರಾಜ್ಯಸಭಾ ಸದಸ್ಯರನ್ನು ಆಯ್ಕೆ ಹೇಗೆ?

ರಾಜ್ಯಸಭಾ ಸದಸ್ಯರನ್ನು ಆಯ್ಕೆ ಹೇಗೆ?

ತಮಿಳುನಾಡು ಮತ್ತು ಮಹಾರಾಷ್ಟ್ರದಿಂದ ತಲಾ ಆರು ಸದಸ್ಯರು ನಿವೃತ್ತಿ ಹೊಂದಲಿದ್ದಾರೆ. ಬಿಹಾರದಿಂದ ಐದು ಮತ್ತು ಆಂಧ್ರಪ್ರದೇಶ, ರಾಜಸ್ಥಾನ ಮತ್ತು ಕರ್ನಾಟಕದಿಂದ ತಲಾ ನಾಲ್ವರು ಸದಸ್ಯರು ರಾಜ್ಯಸಭೆಯಿಂದ ನಿವೃತ್ತಿ ಆಗುತ್ತಿದ್ದಾರೆ. ಅದೇ ರೀತಿ ಮಧ್ಯಪ್ರದೇಶ ಮತ್ತು ಒಡಿಶಾದಿಂದ ತಲಾ ಮೂವರು, ತೆಲಂಗಾಣ, ಛತ್ತೀಸ್‌ಗಢ, ಪಂಜಾಬ್ ಜಾರ್ಖಂಡ್ ಮತ್ತು ಹರ್ಯಾಣದಿಂದ ತಲಾ ಇಬ್ಬರು ಮತ್ತು ಉತ್ತರಾಖಂಡದಿಂದ ಒಬ್ಬ ಸದಸ್ಯರು ನಿವೃತ್ತರಾಗಿದ್ದಾರೆ.

ರಾಜ್ಯಸಭಾ ಸದಸ್ಯರನ್ನು ಆಯ್ಕೆ ಹೇಗೆ?:
ಸಾರ್ವಜನಿಕರು ನೇರವಾಗಿ ರಾಜ್ಯಸಭಾ ಸದಸ್ಯರನ್ನು ಆಯ್ಕೆ ಮಾಡುವ ಅವಕಾಶವಿಲ್ಲ. ಆದರೆ, ಪರೋಕ್ಷವಾಗಿ ಆಯ್ಕೆ ಪ್ರಕ್ರಿಯೆ ಭಾಗವಾಗುತ್ತಾರೆ. ಜನರು ಆಯ್ಕೆ ಮಾಡಿದ ಶಾಸಕರು ಮತದಾನದ ಮೂಲಕ ಆಯ್ಕೆ ಮಾಡಬಹುದು. ಇದಲ್ಲದೆ, ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರನ್ನು ರಾಷ್ಟ್ರಪತಿಗಳು ರಾಜ್ಯಸಭೆಗೆ ನಾಮ ನಿರ್ದೇಶನ ಮಾಡುತ್ತಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+