ರಾಜಸ್ಥಾನದಲ್ಲಿ ಬಿಜೆಪಿಗೆ ಬಿಗ್ ಶಾಕ್, ಕಾಂಗ್ರೆಸ್ ಸೇರಿದ ಬಿಜೆಪಿ ಸಂಸದ!

ಜೈಪುರ, ನವೆಂಬರ್ 14: ರಾಜಸ್ಥಾನದ ಭಾರತೀಯ ಜನತಾ ಪಕ್ಷ(ಬಿಜೆಪಿ)ದ ಮುಖಂಡ, ಸಂಸದ ಹರೀಶ್ ಮೀನಾ ಅವರು ಕಾಂಗ್ರೆಸ್ ಸೇರುವ ಮೂಲಕ ಬಿಜೆಪಿಗೆ ಬಿಗ್ ಶಾಕ್ ನೀಡಿದ್ದಾರೆ.

ಇಲ್ಲಿನ ದೌಸಾ ಕ್ಷೇತ್ರದ ಲೋಕಸಭಾ ಸದಸ್ಯರಾಗಿರುವ ಮೀನಾ ಅವರು ದೆಹಲಿಯಲ್ಲಿ ಬುಧವಾರ ಕಾಂಗ್ರೆಸ್ ಮುಖಂಡರಾದ ಅಶೋಕ್ ಗೆಹ್ಲೋಟ್ ಮತ್ತು ಸಚಿನ್ ಪೈಲೆಟ್ ಅವರ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಿದರು.

BJP MP from Rajasthans Dausa Harish Meena joins Congress

ರಾಜಸ್ಥಾನದಲ್ಲಿ ಇದೇ ಡಿಸೆಂಬರ್ 7 ರಂದು ವಿಧಾನಸಭೆ ಚುನಾವಣೆ ನಡೆಯಲಿದ್ದು, ಈ ಸಮಯದಲ್ಲಿ ಬಿಜೆಪಿಯ ಪ್ರಮುಖ ನಾಯಕರೊಬ್ಬರು ಕಾಂಗ್ರೆಸ್ಸಿಗೆ ಸೇರಿರುವುದು ಬಿಜೆಪಿಗೆ ದೊಡ್ಡ ಹಿನ್ನಡೆ ಎನ್ನಿಸಿದೆ.

64 ವರ್ಷ ವಯಸ್ಸಿನ ಹರೀಶ್ ಮೀನಾ, ಮಾಜಿ ಡಿಜಿಪಿಯೂ ಹೌದು. 2014 ರಲ್ಲಿ ಬಿಜೆಪಿ ಸೇರಿದ್ದ ಅವರಿಗೆ ಬಿಜೆಪಿ ದೌಸಾ ಕ್ಷೇತ್ರದಿಂದ ಟಿಕೆಟ್ ನೀಡಿತ್ತು.

2009-2013 ರವರೆಗೆ ರಾಜಸ್ಥಾನದ ಪೊಲೀಸ್ ಇಲಾಖೆಯ ಆಯಕಟ್ಟಿನ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದವರು ಮೀನಾ. ಹರೀಶ್ ಮೀನಾ ಅವರ ಸಹೋದರ ನಾರಾಯಣ ಮೀನಾ ಅವರು ಕಾಂಗ್ರೆಸ್ಸಿನಲ್ಲಿದ್ದಾರೆ. ರಾಜಸ್ಥಾನದಲ್ಲಿ 'ಮೀನಾ' ಸಮುದಾಯ ಅತ್ಯಂತ ಪ್ರಭಾವಶಾಲಿ ಸಮುದಾಯವಾಗಿದ್ದು, ಹರೀಶ್ ಕಾಂಗ್ರೆಸ್ ಸೇರ್ಪಡೆ ಬಿಜೆಪಿಗೆ ಬಹುದೊಡ್ಡ ಆಘಾತವಂತೂ ಹೌದು.

{document1}

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+