• search
  • Live TV
ಜೈಪುರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

"2014 ರ ಚುನಾವಣೆಗಿಂತ ಈ ಬಾರಿ ಹೆಚ್ಚು ಸ್ಥಾನ ಗೆಲ್ಲಲಿದೆ ಬಿಜೆಪಿ"

|

ಜೈಪುರ, ಮಾರ್ಚ್ 02: ಬಿಜೆಪಿಯು 2014 ರಲ್ಲಿ ಗೆದ್ದ ಸ್ಥಾನಗಳಿಗಿಂತಲೂ ಹೆಚ್ಚು ಸ್ಥಾನಗಳಲ್ಲಿ 2019 ರ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಲಿದೆ ಎಂದು ಬಿಜೆಪಿ ಮುಖಂಡ ಪ್ರಕಾಶ್ ಜಾವ್ಡೇಕರ್ ಹೇಳಿದ್ದಾರೆ.

ರಾಜಸ್ಥಾನದ ಜೈಪುರದಲ್ಲಿ ನಡೆದ ಸಮಾವೇಶವೊಂದರಲ್ಲಿ ಮಾತನಾಡುತ್ತಿದ್ದ ಕೇಂದ್ರ ಮಾನವ ಸಂಪನ್ಮೂಲ ಸಚಿವ ಜಾವ್ಡೇಕರ್, 'ಭಯೋತ್ಪಾದನೆಯ ವಿರುದ್ಧ ಮೋದಿ ತೆಗೆದುಕೊಳ್ಳುತ್ತಿರುವ ಕಠಿಣ ಕ್ರಮ ಅವರ ಕುರಿತು ದೇಶದ ಜನರಲ್ಲಿ ಮತ್ತಷ್ಟು ಅಭಿಮಾನ ಮೂಡಿಸಿದೆ' ಎಂದರು.

2014ರಲ್ಲಿ ಬಿಜೆಪಿ ಗೆದ್ದ ಹೈಪ್ರೊಫೈಲ್ ಲೋಕಸಭಾ ಸೀಟುಗಳು

"2014 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಒಟ್ತು 282 ಸ್ಥಾನಗಳನ್ನು ಗೆದ್ದಿತ್ತು. ಆದರೆ ಈ ಬಾರಿ ನಾವು ಅದಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲುವ ನಂಬಿಕೆ ಇದೆ" ಎಂದು ಅವರು ಹೇಳಿದರು.

2019 ರ ಲೋಕಸಭಾ ಚುನಾವಣೆ ಏಪ್ರಿಲ್ -ಮೇ ತಿಂಗಳಿನಲ್ಲಿ ನಡೆಯಲಿದ್ದು, ಚುನಾವಣೆಯ ದಿನಾಂಕ ಮುಂದಿನ ವಾರದಲ್ಲಿ ಘೋಷಣೆಯಾಗುವ ಸಾಧ್ಯತೆ ಇದೆ.

English summary
Union HRD minister Prakash Javadekar on Saturday exuded confidence that the BJP will win more seats in this general elections than it had won in 2014.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X