ರಾಜಸ್ಥಾನದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಯಾಗಲಿ- ಮಾಯಾವತಿ ಒತ್ತಾಯ
ಜೈಪುರ, ಜುಲೈ 18: ರಾಜಸ್ಥಾನದಲ್ಲಿ ಉಂಟಾಗಿರುವ ರಾಜಕೀಯ ಬಿಕ್ಕಟ್ಟಿನ ಕುರಿತು ಪ್ರತಿಕ್ರಿಯೆ ನೀಡಿರುವ ಬಿಎಸ್‌ಪಿ ಪಕ್ಷದ ನಾಯಕಿ ಮಾಯಾವತಿ 'ರಾಜಸ್ಥಾನದಲ್ಲಿ ರಾಷ್ಟ್ರಪತಿ ಆಡಳಿತ ಜಾರಿ ಮಾಡಬೇಕು'' ಎಂದು ಆಗ್ರಹಿಸಿದ್ದಾರೆ.
Recommended Video
ರಾಜಸ್ಥಾನ ಸರ್ಕಾರ ಉರುಳಿಸಲು ಬಿಜೆಪಿ ಪಕ್ಷವೂ ಕುದುರೆ ವ್ಯಾಪಾರ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಆರೋಪಿಸಿದ್ದರು. ಈ ಹಿನ್ನೆಲೆ ಪ್ರತಿಕ್ರಿಯಿಸಿರುವ ಮಾಯಾವತಿ ಬಿಎಸ್‌ಪಿ ಶಾಸಕರನ್ನು ಕಾಂಗ್ರೆಸ್‌ಗೆ ಸೇರಿಸಿಕೊಂಡ ಘಟನೆಯನ್ನು ನೆನಪಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಮಾಯಾವತಿ 'ರಾಜಸ್ಥಾನ ಮುಖ್ಯಮಂತ್ರಿ ಮೊದಲು ಪಕ್ಷಾಂತರ ವಿರೋಧಿ ಕಾನೂನನ್ನು ಉಲ್ಲಂಘಿಸಿದರು. ಮೊದಲು ಬಿಎಸ್ಪಿ ಶಾಸಕರನ್ನು ಕಾಂಗ್ರೆಸ್‌ಗೆ ಸೇರಿಸಿಕೊಳ್ಳುವ ಮೂಲಕ ದ್ರೋಹ ಮಾಡಿದರು. ಮತ್ತು ಈಗ ಫೋನ್‌ಗಳನ್ನು ಟ್ಯಾಪ್ ಮಾಡುವ ಕಾನೂನು ಉಲ್ಲಂಘಿಸಿದ್ದಾರೆ' ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮತ್ತೊಂದು ಟ್ವೀಟ್‌ನಲ್ಲಿ 'ರಾಜ್ಯಪಾಲರು ಸರ್ಕಾರದಲ್ಲಿ ಉಂಟಾಗಿರುವ ಗೊಂದಲ, ಪರಸ್ಪರ ಭಿನ್ನಮತ ಮತ್ತು ಅಸ್ಥಿರತೆಯ ಬಗ್ಗೆ ಸೂಕ್ಷ್ಮವಾಗಿ ಗಮನ ಹರಿಸಬೇಕು ಮತ್ತು ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತವನ್ನು ಹೇರಲು ಶಿಫಾರಸು ಮಾಡುವ ಮೂಲಕ ಪ್ರಜಾಪ್ರಭುತ್ವವನ್ನು ಉಳಿಸಿ' ಎಂದು ಒತ್ತಾಯಿಸಿದ್ದಾರೆ.
2. इस प्रकार, राजस्थान में लगातार जारी राजनीतिक गतिरोध, आपसी उठा-पठक व सरकारी अस्थिरता के हालात का वहाँ के राज्यपाल को प्रभावी संज्ञान लेकर वहाँ राज्य में राष्ट्रपति शासन लगाने की सिफारिश करनी चाहिए, ताकि राज्य में लोकतंत्र की और ज्यादा दुर्दशा न हो। 2/2
— Mayawati (@Mayawati) July 18, 2020
ಅಂದ್ಹಾಗೆ, ರಾಜಸ್ಥಾನ ಉಪಮುಖ್ಯಂತ್ರಿ ಸಚಿನ್ ಪೈಲೆಟ್ ಮತ್ತು ಬೆಂಬಲಿಗರು ಅಶೋಕ್ ಗೆಹ್ಲೋಟ್ ಸರ್ಕಾರದ ವಿರುದ್ಧ ತಿರುಗಿ ಬಿದ್ದಿದ್ದಾರೆ. ಈ ಹಿನ್ನೆಲೆ ಸಚಿನ್ ಪೈಲೆಟ್ ಸೇರಿದಂತೆ ಬಂಡಾಯ ಶಾಸಕರನ್ನು ಪಕ್ಷದಿಂದ ವಜಾಗೊಳಿಸಲಾಗಿದೆ.












Click it and Unblock the Notifications