ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜಸ್ಥಾನದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಯಾಗಲಿ- ಮಾಯಾವತಿ ಒತ್ತಾಯ

|
Google Oneindia Kannada News

ಜೈಪುರ, ಜುಲೈ 18: ರಾಜಸ್ಥಾನದಲ್ಲಿ ಉಂಟಾಗಿರುವ ರಾಜಕೀಯ ಬಿಕ್ಕಟ್ಟಿನ ಕುರಿತು ಪ್ರತಿಕ್ರಿಯೆ ನೀಡಿರುವ ಬಿಎಸ್‌ಪಿ ಪಕ್ಷದ ನಾಯಕಿ ಮಾಯಾವತಿ 'ರಾಜಸ್ಥಾನದಲ್ಲಿ ರಾಷ್ಟ್ರಪತಿ ಆಡಳಿತ ಜಾರಿ ಮಾಡಬೇಕು'' ಎಂದು ಆಗ್ರಹಿಸಿದ್ದಾರೆ.

Recommended Video

Congress counsellor ಪ್ರಕಾರ Rum ಕೊರೊನಗೆ ಮುದ್ದು | Oneindia Kannada

ರಾಜಸ್ಥಾನ ಸರ್ಕಾರ ಉರುಳಿಸಲು ಬಿಜೆಪಿ ಪಕ್ಷವೂ ಕುದುರೆ ವ್ಯಾಪಾರ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಆರೋಪಿಸಿದ್ದರು. ಈ ಹಿನ್ನೆಲೆ ಪ್ರತಿಕ್ರಿಯಿಸಿರುವ ಮಾಯಾವತಿ ಬಿಎಸ್‌ಪಿ ಶಾಸಕರನ್ನು ಕಾಂಗ್ರೆಸ್‌ಗೆ ಸೇರಿಸಿಕೊಂಡ ಘಟನೆಯನ್ನು ನೆನಪಿಸಿದ್ದಾರೆ.

ರಾಜಸ್ಥಾನ ಆಡಿಯೋ ಕ್ಲಿಪ್‌ ಪ್ರಕರಣ: ಸಿಬಿಐ ತನಿಖೆಗೆ ಬಿಜೆಪಿ ಆಗ್ರಹರಾಜಸ್ಥಾನ ಆಡಿಯೋ ಕ್ಲಿಪ್‌ ಪ್ರಕರಣ: ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ

ಈ ಬಗ್ಗೆ ಟ್ವೀಟ್ ಮಾಡಿರುವ ಮಾಯಾವತಿ 'ರಾಜಸ್ಥಾನ ಮುಖ್ಯಮಂತ್ರಿ ಮೊದಲು ಪಕ್ಷಾಂತರ ವಿರೋಧಿ ಕಾನೂನನ್ನು ಉಲ್ಲಂಘಿಸಿದರು. ಮೊದಲು ಬಿಎಸ್ಪಿ ಶಾಸಕರನ್ನು ಕಾಂಗ್ರೆಸ್‌ಗೆ ಸೇರಿಸಿಕೊಳ್ಳುವ ಮೂಲಕ ದ್ರೋಹ ಮಾಡಿದರು. ಮತ್ತು ಈಗ ಫೋನ್‌ಗಳನ್ನು ಟ್ಯಾಪ್ ಮಾಡುವ ಕಾನೂನು ಉಲ್ಲಂಘಿಸಿದ್ದಾರೆ' ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

BSP Leader Mayawati demands Presidents rule in Rajasthan

ಮತ್ತೊಂದು ಟ್ವೀಟ್‌ನಲ್ಲಿ 'ರಾಜ್ಯಪಾಲರು ಸರ್ಕಾರದಲ್ಲಿ ಉಂಟಾಗಿರುವ ಗೊಂದಲ, ಪರಸ್ಪರ ಭಿನ್ನಮತ ಮತ್ತು ಅಸ್ಥಿರತೆಯ ಬಗ್ಗೆ ಸೂಕ್ಷ್ಮವಾಗಿ ಗಮನ ಹರಿಸಬೇಕು ಮತ್ತು ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತವನ್ನು ಹೇರಲು ಶಿಫಾರಸು ಮಾಡುವ ಮೂಲಕ ಪ್ರಜಾಪ್ರಭುತ್ವವನ್ನು ಉಳಿಸಿ' ಎಂದು ಒತ್ತಾಯಿಸಿದ್ದಾರೆ.

ಅಂದ್ಹಾಗೆ, ರಾಜಸ್ಥಾನ ಉಪಮುಖ್ಯಂತ್ರಿ ಸಚಿನ್ ಪೈಲೆಟ್ ಮತ್ತು ಬೆಂಬಲಿಗರು ಅಶೋಕ್ ಗೆಹ್ಲೋಟ್ ಸರ್ಕಾರದ ವಿರುದ್ಧ ತಿರುಗಿ ಬಿದ್ದಿದ್ದಾರೆ. ಈ ಹಿನ್ನೆಲೆ ಸಚಿನ್ ಪೈಲೆಟ್ ಸೇರಿದಂತೆ ಬಂಡಾಯ ಶಾಸಕರನ್ನು ಪಕ್ಷದಿಂದ ವಜಾಗೊಳಿಸಲಾಗಿದೆ.

English summary
BSP Leader Mayawati tweets over the Rajasthan political crisis saying 'Governor of Rajasthan should recommend imposition of President's rule in the state.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X