ರಾಜಸ್ಥಾನದಲ್ಲಿ ಬಸ್-ಟ್ರಕ್ ಮುಖಾಮುಖಿ ಡಿಕ್ಕಿ: 14 ಮಂದಿ ಸಾವು
ಬಿಕಾನೆರ್, ನವೆಂಬರ್ 18: ರಾಜಸ್ಥಾನದ ಬಿಕಾನೇರ್ನಲ್ಲಿ ಇಂದು ಬೆಳಗ್ಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ 14 ಮಂದಿ ಮೃತಪಟ್ಟಿದ್ದಾರೆ.
ಬಿಕಾನೆರ್ನಲ್ಲಿ ನಸುಕಿನ ಜಾವದಲ್ಲಿ ಬಸ್ ಹಾಗೂ ಟ್ರಕ್ ನಡುವೆ ಅಪಘಾತ ಸಂಭವಿಸಿದೆ.ಸ್ಥಳದಲ್ಲೇ 10 ಮಂದಿ ಮೃತಪಟ್ಟಿದ್ದು ಆಸ್ಪತ್ರೆಯಲ್ಲಿ ನಾಲ್ಕು ಮಂದಿ ಕೊನೆಯುಸಿರೆಳೆದಿದ್ದಾರೆ. 25ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಚಿಂತಾಜನಕ ಸ್ಥಿತಿಯಲ್ಲಿದ್ದಾರೆ.
ಬಿಜೆಪಿ ಸಂಸದ ಪ್ರಯಾಣಿಸುತ್ತಿದ್ದ ಕಾರು ಅಪಘಾತ
ಪ್ರಯಾಣಿಕರು ಇದ್ದ ಬಸ್ ಜೈಪುರದಿಂದ ಬಿಕಾನೇರ್ಗೆ ತೆರಳುತ್ತಿತ್ತು. ದುಂಗರ್ಹ ಪ್ರದೇಶದಲ್ಲಿ ಬಸ್ ಟ್ರಕ್ಗೆ ಡಿಕ್ಕಿ ಹೊಡೆಯಿತು. ಅಪಘಾತದಲ್ಲಿ 10 ಮಂದಿ ಸ್ಥಳದಲ್ಲೇ ಮೃತಪಟ್ಟರೆ ಐವರು ಮಂದಿ ಆಸ್ಪತ್ರೆಯಲ್ಲಿ ಕೊನೆಯಿಸಿರೆಳೆದಿದ್ದಾರೆ.
ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗಳಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ದುರ್ಘಟನೆಗೆ ಪ್ರಮುಖ ಕಾರಣಗಳು ತಿಳಿದುಬಂದಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ತನಿಖೆ ನಡೆಸುತ್ತಿದ್ದಾರೆ.