• search
  • Live TV
ಜೈಪುರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕೇಂದ್ರ ನೋಟು ಅಮಾನ್ಯೀಕರಣ, ಜಿಎಸ್‌ಟಿ ಬಗ್ಗೆ ಶ್ವೇತಪತ್ರ ಹೊರಡಿಸಲಿ: ಅಶೋಕ್ ಗೆಹ್ಲೋಟ್

|

ಜೈಪುರ, ನವೆಂಬರ್ 09: ಕೇಂದ್ರ ಸರ್ಕಾರವು ನೋಟು ಅಮಾನ್ಯೀಕರಣ, ಜಿಎಸ್‌ಟಿಯಿಂದ ಭಾರತ ಆರ್ಥಿಕತೆಯ ಮೇಲಾದ ಪರಿಣಾಮದ ಕುರಿತು ಶ್ವೇತಪತ್ರ ಹೊರಡಿಸಬೇಕು ಎಂದು ರಾಜಸ್ಥಾನದ ಮುಖ್ಯಂಂತ್ರಿ ಅಶೋಕ್ ಗೆಹ್ಲೋಟ್ ಒತ್ತಾಯಿಸಿದ್ದಾರೆ.

ನೋಟು ರದ್ದತಿಯ ನಾಲ್ಕನೇ ವರ್ಷಾಚರಣೆಯನ್ನು ಕಾಂಗ್ರೆಸ್ ವಿಶ್ವಾಸಘಾತ ದಿವಸ ಎಂದು ಆಚರಿಸುತ್ತಿದೆ. ಈ ಹಿನ್ನೆಲೆಯಲ್ಲಿ ಆನ್ ಲೈನ್ ಮೂಲಕ ಮಾತನಾಡಿದ ಗೆಹ್ಲೋಟ್ ನೋಟು ರದ್ದತಿಯ ಬಳಿಕ ದೇಶದಲ್ಲಿ ಕಪ್ಪು ಹಣದ ಸಮಸ್ಯೆ, ಭಯೋತ್ಪಾದನೆ ಸಮಸ್ಯೆ ಅಥವಾ ನಕ್ಸಲಿಸಂ ಕಡಿಮೆಯಾಗಿದೆಯೇ ಎಂದು ಪ್ರಶ್ನಿಸಿದರು.

ಇನ್ನು ಕೊರೊನಾ ಸೋಂಕಿನಿಂದ ದೇಶದ ಅರ್ಥವ್ಯವಸ್ಥೆಯ ಮೇಲೆ ಆಗಿರುವ ಪರಿಣಾಮದ ಬಗ್ಗೆ ಕೇಂದ್ರ ಸರ್ಕಾರ ಮಾಹಿತಿ ನೀಡಬೇಕು ಎಂದು ಗೆಹ್ಲೋಟ್ ಹೇಳಿದ್ದಾರೆ.

ನೋಟು ರದ್ಧತಿಯ ನಿರ್ಧಾರದ ನಂತರ ದೇಶದ ರೈತರು, ಕಾರ್ಮಿಕರು ಮತ್ತು ಸಣ್ಣ ವ್ಯಾಪಾರಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ಜಿಎಸ್ ಟಿ ಜಾರಿಗೆ ಬಂದಿದ್ದರೂ ರಾಜ್ಯಗಳ ಪಾಲು ದೊರಕುತ್ತಿಲ್ಲ.

ಅಪನಗದೀಕರಣ ಅಸಂಘಟಿತ ವಲಯದ ಮೇಲಿನ ದಾಳಿ: ರಾಹುಲ್ ಗಾಂಧಿ ವಾಗ್ದಾಳಿ

ಇದು ಒಕ್ಕೂಟದ ವ್ಯವಸ್ಥೆಯಲ್ಲಿ ಕೇಂದ್ರ ಸರ್ಕಾರ ಮಾಡುತ್ತಿರುವ ಅನ್ಯಾಯವಾಗಿದೆ ಎಂದರು.

English summary
Rajasthan Chief Minister Ashok Gehlot on Sunday demanded that the Centre should come up with a white paper to inform people about the impact of demonetisation, GST and the coronavirus pandemic on the country's economy.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X