ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆ: ಕಾಂಗ್ರೆಸ್‌ಗೆ ಜಯ, ಬಿಜೆಪಿಗೆ ತೀವ್ರ ಮುಖಭಂಗ

|
Google Oneindia Kannada News

ಜೈಪುರ, ಡಿಸೆಂಬರ್ 14: ರಾಜಸ್ಥಾನದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಹೊರಬಿದ್ದಿದ್ದು, ಕಾಂಗ್ರೆಸ್ ಭರ್ಜರಿ ಗೆಲುವುದು ಸಾಧಿಸಿದರೆ, ಬಿಜೆಪಿ ತೀವ್ರ ಮುಖಭಂಗ ಅನುಭವಿಸಿದೆ.

ಚುನಾವಣಾ ಫಲಿತಾಂಶಕ್ಕೆ ಸಂತಸ ವ್ಯಕ್ತ ಪಡಿಸಿರುವ ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಎಲ್ಲರಿಗೂ ಹೃದಯ ಪೂರ್ವಕ ಅಭಿನಂದನೆಗಳು ಎಂದು ತಿಳಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಮೇಲೆ ನಂಬಿಕೆ ಇರಿಸಿ ಪಕ್ಷದ ಗೆಲುವಿಗೆ ಕಾರಣರಾದ ಜನತೆಗೂ ಅಭಿನಂದನೆ ಸಲ್ಲಿಸಿದ್ದಾರೆ.

ಯುವ ಕಾಂಗ್ರೆಸ್ ಪದಾಧಿಕಾರಿಗಳ ಆಯ್ಕೆಗೆ ಚುನಾವಣೆ: ಗುಂಪುಗಾರಿಕೆಗೆ ಆಹ್ವಾನ?ಯುವ ಕಾಂಗ್ರೆಸ್ ಪದಾಧಿಕಾರಿಗಳ ಆಯ್ಕೆಗೆ ಚುನಾವಣೆ: ಗುಂಪುಗಾರಿಕೆಗೆ ಆಹ್ವಾನ?

ರಾಜಸ್ಥಾನದ 50 ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಫಲಿತಾಂಶ ಭಾನುವಾರ ಪ್ರಕಟವಾಗಿದ್ದು, ಒಟ್ಟು 1,775 ವಾರ್ಡ್‌ಗಳಲ್ಲಿ ಆಡಳಿತಾರೂಢ ಕಾಂಗ್ರೆಸ್ 620 ಸ್ಥಾನಗಳಲ್ಲಿ ಜಯ ಸಾಧಿಸಿದೆ.

Congress Beats BJP In Rajasthan Urban Local Polls

ಬಿಜೆಪಿ 548 ಹಾಗೂ ಸ್ವತಂತ್ರ ಅಭ್ಯರ್ಥಿಗಳು 595 ಸ್ಥಾನಗಳನ್ನು ಬಾಚಿಕೊಂಡಿದ್ದಾರೆ ಎಂದು ರಾಜ್ಯ ಚುನಾವಣಾ ಆಯೋಗದ ಅಧಿಕಾರಿಗಳು ತಿಳಿಸಿದ್ದಾರೆ.ರಾಜಸ್ಥಾನದ 12 ಜಿಲ್ಲೆಗಳಲ್ಲಿ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆದಿತ್ತು ಎಂದು ರಾಜ್ಯ ಚುನಾವಣಾ ಆಯೋಗದ ವಕ್ತಾರರು ತಿಳಿಸಿದ್ದಾರೆ.

ಬಹುಜನ ಸಮಾಜ ಪಕ್ಷದ ಏಳು ಅಭ್ಯರ್ಥಿಗಳು, ಸಿಪಿಐ ಹಾಗೂ ಸಿಪಿಎಂನ ತಲಾ ಇಬ್ಬರು ಹಾಗೂ ರಾಷ್ಟ್ರೀಯ ಲೋಕತಾಂತ್ರಿಕ ಪಕ್ಷ(ಆರ್‌ಎಲ್‌ಪಿ)ಪಕ್ಷ ಒಂದು ಸ್ಥಾನದಲ್ಲಿ ಜಯ ಸಾಧಿಸಿದೆ.

English summary
The ruling Congress in Rajasthan has beaten the BJP in urban local body elections held days after the party suffered a setback in rural polls.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X