ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Video: ವಿಧಾನಸಭೆಗೆ ಟ್ರ್ಯಾಕ್ಟರ್ ತೆಗೆದುಕೊಂಡು ಹೋದ ಶಾಸಕಿ

|
Google Oneindia Kannada News

ಜೈಪುರ್, ಫೆಬ್ರವರಿ.10: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ವಿವಾದಿತ ಮೂರು ಕೃಷಿ ಕಾಯ್ದೆಗಳ ವಿರುದ್ಧ ರೈತರ ಪ್ರತಿಭಟನೆಗೆ ರಾಜಸ್ಥಾನದ ಶಾಸಕಿ ಇಂದಿರಾ ಮೀನಾ ಅವರು ವಿನೂತನ ರೀತಿಯಲ್ಲಿ ಬೆಂಬಲ ವ್ಯಕ್ತಪಡಿಸಿದ್ದಾರೆ.

ರಾಜಸ್ಥಾನ ವಿಧಾನಸಭಾ ಬಜೆಟ್ ಅಧಿವೇಶನಕ್ಕೆ ಶಾಸಕಿ ಇಂದಿರಾ ಮೀನಾ ಅವರು ಟ್ರ್ಯಾಕ್ಟರ್ ಚಾಲನೆ ಮಾಡಿಕೊಂಡು ಹೋಗುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ದೆಹಲಿಯಲ್ಲಿ ರೈತರ ಹೋರಾಟಕ್ಕೆ ಬೆಂಬಲಿಸುವ ಉದ್ದೇಶದಿಂದ ಟ್ರ್ಯಾಕ್ಟರ್ ನಲ್ಲಿ ಕಲಾಪಕ್ಕೆ ಆಗಮಿಸಿದ್ದೇನೆ ಎಂದು ಸ್ವತಃ ಶಾಸಕಿ ಹೇಳಿಕೊಂಡಿದ್ದಾರೆ.

Congress MLA Indira Meena reaches Rajasthan Assembly On A Tractor To Show Support For Farmers

ದೇಶಾದ್ಯಂತ 40 ಲಕ್ಷ ಟ್ರ್ಯಾಕ್ಟರ್ ಮೆರವಣಿಗೆ ನಡೆಯಲಿದೆ: ಟಿಕಾಯತ್ದೇಶಾದ್ಯಂತ 40 ಲಕ್ಷ ಟ್ರ್ಯಾಕ್ಟರ್ ಮೆರವಣಿಗೆ ನಡೆಯಲಿದೆ: ಟಿಕಾಯತ್

ಬುಧವಾರ ಬೆಳಗ್ಗೆ 11 ಗಂಟೆಗೆ ರಾಜಸ್ಥಾನ ವಿಧಾನಸಭಾ ಬಜೆಟ್ ಅಧಿವೇಶನದ ಮೊದಲ ಕಲಾಪ ಆರಂಭವಾಗಿದ್ದು, ರಾಜ್ಯಪಾಲ ಮಿಶ್ರಾ ಅವರು ಸದನವನ್ನು ಉದ್ದೇಶಿಸಿ ಮಾತನಾಡಿದರು. ಇದಕ್ಕೂ ಮೊದಲು ಟ್ರ್ಯಾಕ್ಟರ್ ನಲ್ಲಿ ಶಾಸಕಿ ವಿಧಾನಸಭೆಗೆ ತೆರಳಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲೂ ಸಖತ್ ವೈರಲ್ ಆಗುತ್ತಿದೆ.

ಕೃಷಿ ಕಾಯ್ದೆ ವಿರುದ್ಧ ಅಕ್ಟೋಬರ್ ವರೆಗೂ ಹೋರಾಟ

ವಿವಾದಿತ ರೈತರ ಉತ್ಪಾದನೆ ವ್ಯಾಪಾರ ಮತ್ತು ವಾಣಿಜ್ಯ (ಪ್ರಚಾರ ಮತ್ತು ಸೌಲಭ್ಯ) ಕಾಯ್ದೆ, ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಕಾಯ್ದೆ (ಸಬಲೀಕರಣ ಮತ್ತು ಸಂರಕ್ಷಣೆ) ಒಪ್ಪಂದ ಹಾಗೂ ಅಗತ್ಯ ಸರಕುಗಳ (ತಿದ್ದುಪಡಿ) ಕಾಯ್ದೆಗಳ ವಿರುದ್ಧ ಕಳೆದ ನವಂಬರ್.26 ರಿಂದ ಪ್ರತಿಭಟನೆ ನಡೆಸಲಾಗುತ್ತಿದೆ. ನವದೆಹಲಿಯ ಮೂರು ಗಡಿಗಳಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಈಗಾಗಲೇ 77 ದಿನಗಳಿಂದಲೂ ರೈತರು ಹೋರಾಟ ನಡೆಸುತ್ತಿದ್ದಾರೆ.

English summary
Congress MLA Indira Meena reaches Rajasthan Assembly On A Tractor To Show Support For Farmers.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X