ರಾಜಸ್ಥಾನದಲ್ಲಿ 2,000ರ ಗಡಿ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ

ಜೈಪುರ್, ಏಪ್ರಿಲ್.24: ಜಾಗತಿಕ ಮಟ್ಟದಲ್ಲಿ ಮರಣ ಮೃದಂಗ ಬಾರಿಸುತ್ತಿರುವ ಕೊರೊನಾ ವೈರಸ್ ಸೋಂಕಿತರ ಸಾವಿನ ಸರಣಿ ಮುಂದುವರಿದಿದೆ. ರಾಜಸ್ಥಾನದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯು 2,000 ಗಡಿ ದಾಟಿದೆ.

ಶುಕ್ರವಾರ ಒಂದೇ ದಿನ ಕೊರೊನಾ ವೈರಸ್ ನಿಂದ ಮೂವರು ಪ್ರಾಣ ಬಿಟ್ಟಿದ್ದು, 44ಕ್ಕೂ ಅಧಿಕ ಮಂದಿಗೆ ಸೋಂಕು ಇರುವುದು ವೈದ್ಯಕೀಯ ತಪಾಸಣೆ ವೇಳೆ ದೃಢಪಟ್ಟಿದೆ. ಇದರಿಂದ ರಾಜ್ಯದಲ್ಲಿ ಕೊರೊನಾ ವೈರಸ್ ನಿಂದ ಮೃತಪಟ್ಟವರ ಸಂಖ್ಯೆ 31ಕ್ಕೆ ಏರಿಕೆಯಾಗಿದೆ.

ರಾಜಸ್ಥಾನದಲ್ಲಿ ಸೋಂಕಿತರ ಸಂಖ್ಯೆಯು ದಿನೇ ದಿನೆ ಏರಿಕೆಯಾಗುತ್ತಿದ್ದು ಜನರಲ್ಲಿ ಆತಂಕವನ್ನು ಹೆಚ್ಚಿಸಿದೆ. ಅತಿಹೆಚ್ಚು ಸೋಂಕಿತರು ಪತ್ತೆಯಾಗಿರುವ ಪ್ರದೇಶಗಳನ್ನು ಕಂಟೋನ್ಮೆಂಟ್ ಝೋನ್ ಎಂದು ಗುರುತಿಸಲಾಗಿದ್ದು ತೀವ್ರ ಕಟ್ಟೆಚ್ಚರ ವಹಿಸಲಾಗಿದೆ.

Three More Person Death, 44 Coronavirus Cases Found In Rajasthan

ಭಾರತದಲ್ಲಿ ಸಾವು ಮತ್ತು ಸೋಂಕಿತರ ಸಂಖ್ಯೆ:

ದೇಶವನ್ನು ಕಾಡುತ್ತಿರುವ ಕೊರೊನಾ ವೈರಸ್ ಸಮುದಾಯದ ಹಂತಕ್ಕೂ ತಲುಪಿರುವ ಅನುಮಾನವು ನಿಜವಾದಂತೆ ತೋರುತ್ತಿದೆ. ಶುಕ್ರವಾರ ಒಂದೇ ದಿನ 32 ಕೊರೊನಾ ವೈರಸ್ ನಿಂದ ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆ 718ಕ್ಕೆ ಏಕಿರೆಯಾಗಿದೆ. ಇನ್ನು, 1,377 ಜನರಿಗೆ ಕೊರೊನಾ ವೈರಸ್ ಸೋಂಕು ಪತ್ತೆಯಾಗಿದ್ದು, ದೇಶದಲ್ಲಿ ಸೋಂಕಿತರ ಸಂಖ್ಯೆಯು 23,077ಕ್ಕೆ ಏರಿಕೆಯಾಗಿದೆ. ಇವತ್ತು 424 ಮಂದಿ ಕೊರೊನಾ ವೈರಸ್ ಸೋಂಕಿತರು ಗುಣಮುಖರಾಗಿದ್ದು, ಈವರೆಗೂ 4,749 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+