ಹಿಂಸಾಚಾರದ ನಂತರ ರಾಜಸ್ಥಾನದ ಕರೌಲಿಯಲ್ಲಿ ಏ.7 ರವರೆಗೆ ಕರ್ಫ್ಯೂ ವಿಸ್ತರಣೆ
ಜೈಪುರ ಏಪ್ರಿಲ್ 5: ಹಿಂಸಾಚಾರ ಪೀಡಿತ ರಾಜಸ್ಥಾನದ ಕರೌಲಿಯಲ್ಲಿ ಕಾನೂನು ಸುವ್ಯವಸ್ಥೆಯನ್ನು ಪರಿಗಣಿಸಿ ಸೋಮವಾರ ಏಪ್ರಿಲ್ 7 ರವರೆಗೆ ಕರ್ಫ್ಯೂ ವಿಸ್ತರಿಸಲಾಗಿದೆ. ಜೊತೆಗೆ ಜಿಲ್ಲಾಡಳಿತ 10 ಮತ್ತು 12ನೇ ತರಗತಿ ಪರೀಕ್ಷೆಗಳಿಗೆ ವಿದ್ಯಾರ್ಥಿಗಳು ಸುರಕ್ಷಿತವಾಗಿ ತೆರಳು ವ್ಯವಸ್ಥೆ ಮಾಡಲಾಗಿದೆ. ವಿದ್ಯಾರ್ಥಿಗಳು ತಮ್ಮ ಪ್ರವೇಶ ಪತ್ರಗಳನ್ನು ತೋರಿಸಿದ ನಂತರ ತಮ್ಮ ಪರೀಕ್ಷಾ ಕೇಂದ್ರಗಳಿಗೆ ತಲುಪಲು ಅವಕಾಶ ಮಾಡಿಕೊಡುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಕರೌಲಿಯಲ್ಲಿ ಕೋಮು ಘರ್ಷಣೆ ನಡೆದ ಎರಡು ದಿನಗಳ ಬಳಿಕ ಪರಿಸ್ಥಿತಿ ಬೂದಿಮುಚ್ಚಿದ ಕೆಂಡದಂತಿದೆ. ಹೀಗಾಗಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಕರೌಲಿಯಲ್ಲಿ ಕರ್ಫ್ಯೂ ವಿಸ್ತರಿಸಲಾಗಿದೆ.
ಈ ಬಗ್ಗೆ ಮಾತನಾಡಿದ ಕರೌಲಿ ಜಿಲ್ಲಾಧಿಕಾರಿ ರಾಜೇಂದ್ರ ಶೇಖಾವತ್, "ಈಗಿನ ಪರಿಸ್ಥಿತಿಗಳು ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಮಟ್ಟಕ್ಕೆ ಇಲ್ಲವಾದ್ದರಿಂದ ಕರ್ಫ್ಯೂವನ್ನು ಏಪ್ರಿಲ್ 7ರ ಮಧ್ಯರಾತ್ರಿಯವರೆಗೆ ವಿಸ್ತರಿಸಲಾಗಿದೆ" ಎಂದು ಹೇಳಿದ್ದಾರೆ. ಜನರಿಗೆ ಅಗತ್ಯ ವಸ್ತುಗಳನ್ನು ಖರೀದಿ ಮಾಡಲು ಎರಡು ಗಂಟೆಗಳ ವಿಶ್ರಾಂತಿ ನೀಡಲಾಗುವುದು ಮತ್ತು ಕಾನೂನು ಮತ್ತು ಸುವ್ಯವಸ್ಥೆಯನ್ನು ಪರಿಗಣಿಸಿ ಯಾವುದೇ ಹೆಚ್ಚಿನ ವಿಶ್ರಾಂತಿ ನೀಡಲಾಗುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬಂಧಿತ 13 ಜನರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಅಲ್ಲಿಂದ ಅವರನ್ನು ಎರಡು ದಿನಗಳ ಪೊಲೀಸ್ ಕಸ್ಟಡಿಗೆ ಕಳುಹಿಸಲಾಗಿದೆ ಎಂದು ಎಎಸ್ಪಿ ಕಿಶೋರ್ ಬುಟೋಲಿಯಾ ತಿಳಿಸಿದ್ದಾರೆ. "ಅಗತ್ಯ ವಸ್ತುಗಳ ಖರೀದಿಗೆ ಸೋಮವಾರ ಎರಡು ಗಂಟೆಗಳ ಕಾಲ ಕರ್ಫ್ಯೂನಲ್ಲಿ ವಿಶ್ರಾಂತಿ ನೀಡಲಾಗಿದೆ. ಕೇಂದ್ರ ಮತ್ತು ರಾಜಸ್ಥಾನದ ಸರ್ಕಾರಿ ಕಚೇರಿಗಳು ಮತ್ತು ನ್ಯಾಯಾಲಯಗಳು ತೆರೆದಿವೆ ಮತ್ತು ನೌಕರರು ಗುರುತಿನ ಚೀಟಿಗಳನ್ನು ತೋರಿಸಿದ ನಂತರ ತಮ್ಮ ಕಚೇರಿಗಳನ್ನು ತಲುಪಬಹುದು" ಎಂದು ಶೇಖಾವತ್ ಹೇಳಿದ್ದಾರೆ.

ಸದ್ಯ ಯಾವುದೇ ಅಹಿತಕರ ಘಟನೆ ವರದಿಯಾಗಿಲ್ಲ, ಆದರೆ ಕರೌಲಿಯಲ್ಲಿ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಅವರು ಹೇಳಿದರು.
ಘಟನೆ ಏನು?
ನವ ಸಂವತ್ಸರ ಯುಗಾದಿಯಂದು (ಹಿಂದೂ ಹೊಸ ವರ್ಷ) ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ), ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮತ್ತು ಬಜರಂಗದಳ ಸೇರಿದಂತೆ ಬಲಪಂಥೀಯ ಸಂಘಟನೆಗಳು ರ್‍ಯಾಲಿಯನ್ನು ಕೈಗೊಂಡಿದ್ದವು. ಈ ವೇಳೆ ಧ್ವಜ ಮೆರವಣಿಗೆ ಕೂಡ ನಡೆಸಲಾಯಿತು. ಈ ಬೈಕ್ ರ್‍ಯಾಲಿ ಮುಸ್ಲಿಂ ಪ್ರಾಬಲ್ಯದ ಪ್ರದೇಶದಲ್ಲಿ ಸಾಗುತ್ತಿದ್ದಾಗ ಕಲ್ಲು ತೂರಾಟ ನಡೆದಿದೆ. ಇದು ಹಿಂಚಾಸಾರಕ್ಕೆ ತಿರುಗಿ ಉದ್ರಿಕ್ತರು ಶನಿವಾರ(ಏಪ್ರಿಲ್ 3) ಅಂಗಡಿ ಮನೆಗಳಿಗೆ ಬೆಂಕಿ ಹಚ್ಚಿದ್ದಾರೆ. ವಿಧ್ವಂಸಕ ಘಟನೆಗಳ ನಂತರ ಕರ್ಫ್ಯೂ ವಿಧಿಸಲಾಗಿದೆ. ಹಿಂಸಾಚಾರದಲ್ಲಿ ಸುಮಾರು 35 ಜನರು ಗಾಯಗೊಂಡಿದ್ದಾರೆ.

ಕೋಮು ಹಿಂಸಾಚಾರದ ನಂತರ ಪೊಲೀಸರು 46 ಜನರನ್ನು ಬಂಧಿಸಿ ವಿಚಾರಣೆಗಾಗಿ ಏಳು ಮಂದಿಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ಭರತ್‌ಪುರ ಶ್ರೇಣಿಯ ಪೊಲೀಸ್ ಮಹಾನಿರೀಕ್ಷಕ ಪ್ರಶಾನ್ ಕುಮಾರ್ ಖಮೇಸ್ರಾ ತಿಳಿಸಿದ್ದಾರೆ. ಕರ್ಫ್ಯೂ ಆದೇಶ ಉಲ್ಲಂಘಿಸಿದ್ದಕ್ಕಾಗಿ 13 ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದ್ದು, 33 ಮಂದಿಯನ್ನು ಬಂಧಿಸಲಾಗಿದೆ. ಜೊತೆಗೆ 21 ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಹೇಳಿದರು. ಪೊಲೀಸ್ ಗಸ್ತು ತಂಡಗಳಿಂದ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ. ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದ್ದು ಮುನ್ನೆಚ್ಚರಿಕೆ ಕ್ರಮವಾಗಿ ಕರ್ಫ್ಯೂ ಮುಂದುವರಿಸಲಾಗಿದೆ.

ಜೀವದ ಹಂಗು ತೊರೆದು ಮಗುವನ್ನು ರಕ್ಷಿಸಿದ ಕಾನ್‌ಸ್ಟೆಬಲ್
ಶನಿವಾರ ನಡೆದ ಈ ಹಿಂಸಾಚಾರದಲ್ಲಿ ಪೊಲೀಸ್ ಕಾನ್‌ಸ್ಟೆಬಲ್ ಮನವೀಯತೆ ಮೆರದಿದ್ದಾರೆ. ಶನಿವಾರ ಕರೌಲಿಯಲ್ಲಿ ನಡೆದ ಗಲಭೆಯಲ್ಲಿ ಮನೆಗಳು ಮತ್ತು ಅಂಗಡಿಗಳಿಗೆ ಬೆಂಕಿ ಹಚ್ಚಲಾಯಿತು. ಮನೆಯೊಂದರಲ್ಲಿ ಮೂವರು ಮಹಿಳೆಯರು ಮತ್ತು ಒಂದು ಮಗು ಸಿಕ್ಕಿಬಿದ್ದಿತ್ತು. ಅವರು ಬೆಂಕಿಯಿಂದ ಬದುಕುಳಿಯುವ ಭರವಸೆಯನ್ನು ಕಳೆದುಕೊಂಡಿದ್ದರು. ಆದರೆ ಶರ್ಮಾ ಅವರು ಸುರಕ್ಷಿತವಾಗಿ ಹೊರಬರಲು ಸಹಾಯ ಮಾಡಿದರು.
ಬೆಂಕಿ ಹೊತ್ತಿಕೊಂಡ ಮನೆಯಿಂದ ಪುಟ್ಟ ಮಗು ಸೇರಿ ನಾಲ್ವರನ್ನು ರಕ್ಷಿಸಿದ ಕರೌಲಿ ಕೊಟ್ವಾಲಿ ಪೊಲೀಸ್ ಠಾಣೆಯ ಕಾನ್‌ಸ್ಟೆಬಲ್ ನೇತ್ರೇಶ್ ಶರ್ಮಾ (31) ಅವರನ್ನು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅಭಿನಂದಿಸಿದ್ದಾರೆ. ಗೆಹ್ಲೋಟ್ ಅವರು ಶರ್ಮಾ ಅವರ ಕೆಲಸವನ್ನು ಶ್ಲಾಘಿಸಿದ್ದಾರೆ ಮತ್ತು ಅವರು ಹೆಡ್ ಕಾನ್‌ಸ್ಟೆಬಲ್ ಆಗಿ ಬಡ್ತಿ ನೀಡುವುದಾಗಿ ಘೋಷಿಸಿದ್ದಾರೆ.

ಶರ್ಮಾ ಅವರೊಂದಿಗಿನ ದೂರವಾಣಿ ಸಂಭಾಷಣೆಯಲ್ಲಿ ಮುಖ್ಯಮಂತ್ರಿಗಳು ಮಾತನಾಡಿ, "ನಿಮ್ಮ ಪ್ರಾಣವನ್ನು ಪಣಕ್ಕಿಟ್ಟು ನೀವು ಕೆಲಸ ಮಾಡಿದ ರೀತಿ ಶ್ಲಾಘನೀಯವಾಗಿದೆ. ಮತ್ತು ಸಾಕಷ್ಟು ಧೈರ್ಯವನ್ನು ತೋರಿಸಿದ್ದಕ್ಕಾಗಿ ನೀವು ಅಭಿನಂದನೆಗೆ ಅರ್ಹರು" ಎಂದು ಹೇಳಿದರು. ನೇತ್ರೇಶ್ ಅವರನ್ನು ಹೆಡ್ ಕಾನ್ ಸ್ಟೇಬಲ್ ಹುದ್ದೆಗೆ ಬಡ್ತಿ ನೀಡಲು ನಿರ್ಧರಿಸಲಾಗಿದೆ ಎಂದರು.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications