ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking: ಕನ್ಹಯ್ಯಾ ಲಾಲ್ ಹತ್ಯೆ ಬೆನ್ನಲ್ಲೇ ಉದಯಪುರದಲ್ಲಿ ಕರ್ಫ್ಯೂ ಜಾರಿ

|
Google Oneindia Kannada News

ಜೈಪುರ್, ಜೂನ್ 28: ರಾಜಸ್ಥಾನದಲ್ಲಿ ತಾಲಿಬಾನ್ ಮಾದರಿಯಲ್ಲಿ ಟೈಲರ್ ಕನ್ಹಯ್ಯಾ ಲಾಲ್ ಹತ್ಯೆ ನಡೆದ ಬೆನ್ನಲ್ಲೇ ಉದಯಪುರ ಜಿಲ್ಲೆಯಲ್ಲಿ 144 ಸೆಕ್ಷನ್ ಅಡಿ ಕರ್ಫ್ಯೂ ಜಾರಿಗೊಳಿಸಲಾಗಿದೆ.

ಬಿಜೆಪಿ ಮಾಜಿ ವಕ್ತಾರೆ ನೂಪುರ್ ಶರ್ಮಾ ಬೆಂಬಲಿಸಿ ಪೋಸ್ಟ್ ಹಾಕಿದ ಎಂಬ ಕಾರಣಕ್ಕೆ ಟೈಲರ್ ಅನ್ನು ಹತ್ಯೆ ಮಾಡಿದ ಇಬ್ಬರು ಆರೋಪಿಗಳಾದ ಮೊಹಮ್ಮದ್ ರಿಯಾಜ್ ಅನ್ಸಾರಿ ಮತ್ತು ಗೌಸ್ ಮೊಹಮ್ಮದ್ ಅನ್ಸಾರಿ ಈಗಾಗಲೇ ಪೊಲೀಸರು ಬಂಧಿಸಿದ್ದಾರೆ.

Breaking: ರಾಜಸ್ಥಾನದಲ್ಲಿ ನೂಪುರ್ ಶರ್ಮಾ ಬೆಂಬಲಿಸಿ ಪೋಸ್ಟ್ ಹಾಕಿದ್ದಕ್ಕೆ ಟೈಲರ್ ಶಿರಚ್ಛೇದ Breaking: ರಾಜಸ್ಥಾನದಲ್ಲಿ ನೂಪುರ್ ಶರ್ಮಾ ಬೆಂಬಲಿಸಿ ಪೋಸ್ಟ್ ಹಾಕಿದ್ದಕ್ಕೆ ಟೈಲರ್ ಶಿರಚ್ಛೇದ

ಉದಯಪುರದ ಧನ್ ಮಂಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆಯನ್ನು ಗಮನದಲ್ಲಿಟ್ಟುಕೊಂಡು, ಉದಯಪುರ ಜಿಲ್ಲೆಯ ಧನ್ಮಂಡಿ, ಘಂಟಾಘರ್, ಹಾಥಿಪೋಲ್, ಅಂಬಾಮಾತಾ, ಸೂರಜ್‌ಪೋಲ್, ಭೂಪಾಲಪುರ ಮತ್ತು ಸವಿನಾ ಪಿಎಸ್ ಪ್ರದೇಶಗಳಲ್ಲಿ ಸೆಕ್ಷನ್ 144 ಮತ್ತು ಕರ್ಫ್ಯೂ ವಿಧಿಸಲಾಗಿದೆ. ಈ ಜಿಲ್ಲೆಯಲ್ಲಿ ಮುಂದಿನ ಆದೇಶದವರೆಗೆ ಕರ್ಫ್ಯೂ ಜಾರಿಯಲ್ಲಿ ಇರುತ್ತದೆ.

Curfew Imposed in Udaipur District After Tailor Kanhaiya Lal Murder

ಉದಯಪುರದಲ್ಲಿ ಇಂಟರ್ ನೆಟ್ ಸ್ಥಗಿತ: ಟೈಲರ್ ಕನ್ಹಯ್ಯಾ ಲಾಲ್ ಹತ್ಯೆಯ ಬೆನ್ನಲ್ಲೇ ಉದಯಪುರದಲ್ಲಿ ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ. ಈ ಹತ್ಯೆಯನ್ನು ಖಂಡಿಸಿ ಜನರು ಪ್ರತಿಭಟನೆ ನಡೆಸುತ್ತಿದ್ದು, ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಸರ್ಕಾರದ ವಿರುದ್ಧ ಧಿಕ್ಕಾರ ಕೂಗುತ್ತಿದ್ದಾರೆ. ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಮುಂದಿನ 24 ಗಂಟೆಗಳವರೆಗೆ ಇಂಟರ್ ಸೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ.

ಉದಯಪುರದಲ್ಲಿ ಹೆಚ್ಚುವರಿ ಭದ್ರತಾ ಸಿಬ್ಬಂದಿ ನಿಯೋಜನೆ: ಜೈಪುರದಿಂದ ಇಬ್ಬರು ಎಡಿಜಿಪಿಗಳು, ಇನ್ನೂ ಒಬ್ಬರು ಎಸ್ಪಿ ಮತ್ತು 600 ಹೆಚ್ಚುವರಿ ಪೊಲೀಸ್ ಪಡೆಯನ್ನು ಉದಯಪುರಕ್ಕೆ ಕಳುಹಿಸಲಾಗಿದೆ. ಅಪರಾಧಿಗಳನ್ನು ಬಿಡುವುದಿಲ್ಲ. ಶೀಘ್ರದಲ್ಲಿಯೇ ಆರೋಪಿಗಳನ್ನು ಬಂಧಿಸಲಾಗುವುದು. ಕಾನೂನು ಸುವ್ಯಸ್ಥೆಯನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಎಲ್ಲ ರೀತಿಯ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಉದಯಪುರದ ಹೆಚ್ಚುವರಿ ನಿರ್ದೇಶಕ ಹವಾಸಿಂಗ್ ಗುಮ್ತಾ ತಿಳಿಸಿದ್ದಾರೆ.

English summary
Rajasthan: curfew imposed in Udaipur district after tailor Kanhaiya Lal murder.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X