ಬಲವಂತವಾಗಿ ಮಹಿಳೆಗೆ ಆ್ಯಸಿಡ್ ಕುಡಿಸಿ ಹತ್ಯೆ ಮಾಡಿದ ದುಷ್ಕರ್ಮಿಗಳು
ಜೈಪುರ, ಮಾರ್ಚ್ 21: ಜಮೀನು ವ್ಯಾಜ್ಯ ಹತ್ಯೆಯಲ್ಲಿ ಕೊನೆಗೊಂಡಿರುವ ಘಟನೆ ಜೈಪುರದಲ್ಲಿ ನಡೆದಿದೆ. ಬಲವಂತವಾಗಿ ಮಹಿಳೆಗೆ ಆ್ಯಸಿಡ್ ಕುಡಿಸಿ ಹತ್ಯೆ ಮಾಡಿದ್ದಾರೆ. ಜಮೀನು ವ್ಯಾಜ್ಯದಿಂದಾಗಿ ದ್ವೇಷ ತೀರಿಸಿಕೊಳ್ಳಲು ಆಕೆಗೆ ಬಲವಂತವಾಗಿ ಆ್ಯಸಿಡ್ ಕುಡಿಸಿ ಹತ್ಯೆ ಮಾಡಿದ್ದಾರೆ.
ರಾಜಸ್ತಾನದ ಬನ್ಸ್ವಾರಾ ಜಿಲ್ಲೆಯಲ್ಲಿ ನಡೆದಿದೆ. ನೆರೆಮನೆಯವನೇ ಆದ ಕಿಶನ್ ಹಾಗೂ ಆತನ ಜೊತೆಗೆ ಇನ್ನಿಬ್ಬರು ಮನೆಗೆ ಬಂದು ಆಕೆಗೆ ಬಲವಂತವಾಗಿ ಆ್ಯಸಿಡ್ ಕುಡಿಸಿದ್ದಾಗಿ ಕುಟುಂಬದವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅಷ್ಟೇ ಅಲ್ಲದೆ ಆಕೆಯ ಮೇಲೆ ಆ್ಯಸಿಡ್ ಎರಚಿದ್ದಾರೆ.
ತಕ್ಷಣವೇ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು ಅಷ್ಟರೊಳಗೆ ಆಕೆಯ ಚರ್ಮ ಸಂಪೂರ್ಣವಾಗಿ ಸುಟ್ಟು ಹೋಗಿದ್ದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಕಳೆದ ಆರು ತಿಂಗಳಿನಿಂದ ಮಹಿಳೆಗೆ ದುಷ್ಕರ್ಮಿಗಳು ತೊಂದರೆ ನೀಡುತ್ತಿದ್ದರು ಎಂದು ತಿಳಿದುಬಂದಿದೆ.

ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಇದುವರೆಗೂ ಯಾರನ್ನೂ ಬಂಧಿಸಿಲ್ಲ. ಇದೇ ರೀತಿ ಘಟನೆ ಭಾಗಲ್‌ಪುರ ಜಿಲ್ಲೆಯಲ್ಲಿ ಕಳೆದ ಏಪ್ರಿಲ್ ನಲ್ಲಿ ನಡೆದಿತ್ತು. ಮಹಿಳೆಯ ಮಾವ ಆಕೆಗೆ ಬಲವಂತವಾಗಿ ಆ್ಯಸಿಡ್ ಕುಡಿಸಿ ಆಕೆಯ ಹತ್ಯೆಗೆ ಕಾರಣವಾಗಿದ್ದ.












Click it and Unblock the Notifications