• search
  • Live TV
ಜೈಪುರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ರಾಜಸ್ಥಾನ ಮಾಜಿ ಮುಖ್ಯಮಂತ್ರಿ ಜಗನ್ನಾಥ್ ಪಹಾಡಿಯಾ ಕೊರೊನಾಗೆ ಬಲಿ

|
Google Oneindia Kannada News

ಜೈಪುರ, ಮೇ 20: ರಾಜಸ್ಥಾನ ಮಾಜಿ ಮುಖ್ಯಮಂತ್ರಿ ಜಗನ್ನಾಥ್ ಪಹಾಡಿಯಾ ಕೊರೊನಾ ವೈರಸ್‌ಗೆ ಮೃತಪಟ್ಟಿದ್ದಾರೆ. 89 ವರ್ಷದ ಪಹಾಡಿಯಾ ಕಳೆದ ಕೆಲ ದಿನಗಳಿಂದ ಕೊರೊನಾ ವೈರಸ್‌ಗೆ ಚಿಕಿತ್ಸೆಯನ್ನು ಪಡೆಯುತ್ತಿದ್ದರು. ಆದರೆ ಫಲಕಾರಿಯಾಗದರೆ ಬುಧವಾರ ಮೃತಪಟ್ಟಿದ್ದಾರೆ.

ಮಾಜಿ ಮುಖ್ಯಮಂತ್ರಿ ಜಗನ್ನಾಥ್ ಪಹಾಡಿಯಾ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮೂಲಕ ಸಂತಾಪವನ್ನು ಸೂಚಿಸಿದ್ದಾರೆ. ಸುದೀರ್ಘ ರಾಜಕೀಯ ಮತ್ತು ಆಡಳಿತಾತ್ಮಕ ಜೀವನದಲ್ಲಿ ಸಾಮಾಜಿಕ ಸಬಲೀಕರಣಕ್ಕೆ ಗಮನಾರ್ಹ ಕೊಡುಗೆಗಳನ್ನು ನೀಡಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.

ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಕೂಡ ಮಾಜಿ ಮುಖ್ಯಮಂತ್ರಿಗಳ ಅಗಲಿಕೆಗೆ ಬೇಸರವನ್ನು ವ್ಯಕ್ತಪಡಿಸಿದ್ದಾರೆ. ರಾಜಸ್ಥಾನ ಸರ್ಕಾರ ಒಂದು ದಿನದ ಶೋಕಾಚರಣೆಯನ್ನು ಘೋಷಿಸಿದ್ದು ಎಲ್ಲಾ ಸರ್ಕಾರಿ ಕಚೇರಿಗಳು ಮುಚ್ಚಿರಲಿದ್ದು ರಾಷ್ಟ್ರಧ್ವಜವನ್ನು ಅರ್ಧಕ್ಕೆ ಹಾರಿಸಲಾಗಿದೆ.

"ಮಾಜಿ ಮುಖ್ಯಮಂತ್ರಿ ಜಗನ್ನಾಥ್ ಪಹಾಡಿಯಾ ಅವರಿಗೆ ಗೌರವ ಸಲ್ಲಿಸಿ ರಾಜಸ್ಥಾನ ಒಂದು ದಿನದ ಶೋಕಾಚರಣೆಯನ್ನು ಮಾಡಲಿದೆ. ರಾಷ್ಟ್ರಧ್ವಜವನ್ನು ಅರ್ಧಕ್ಕೆ ಇಳಿಸಲಿದ್ದು ಇಂದು ಎಲ್ಲಾ ಸರ್ಕಾರಿ ಕಚೇರಿಗಳು ಮುಚ್ಚಿರಲಿದೆ. ಸಕಲ ಸರ್ಕಾರಿ ಗೌರವಗಳೊಂದಿಗೆ ಅವರ ಅಂತ್ಯಕ್ರಿಯೆಗಳನ್ನು ನಡೆಸಲಾಗುತ್ತದೆ" ಎಂದು ಅಶೋಕ್ ಗೆಹ್ಲೋಟ್ ಟ್ವೀಟ್ ಮಾಡಿದ್ದಾರೆ

English summary
Former chief minister of Rajasthan Jagannath Pahadia dies due to COVID-19 on Wednesday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X