• search
  • Live TV
ಜೈಪುರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

15 ಅಡಿ ಆಳದ ಬೋರ್ ವೆಲ್ ಗೆ ಬಿದ್ದ 4 ವರ್ಷದ ಪೋರಿ

|

ಜೈಪುರ, ಡಿಸೆಂಬರ್.05: ಸರ್ಕಾರಗಳು ಅದೆಷ್ಟೇ ಮುಂಜಾಗ್ರತೆ ವಹಿಸಿದರೂ ದುರಂತಗಳು ಕಡಿಮೆ ಆಗುತ್ತಿಲ್ಲ. ಬೋರ್ ವೆಲ್ ಗಳಿಗೆ ಪುಟ್ಟ ಕಂದಮ್ಮಗಳು ಬೀಳುವ ಘಟನೆ ಪದೇ ಪದೆ ಮರುಕಳಿಸುತ್ತಲೇ ಇವೆ.

ರಾಜಸ್ಥಾನದಲ್ಲೂ ಅಂಥದೊಂದು ದುರಂತ ನಡೆದು ಹೋಗಿದೆ. ನಾಲ್ಕು ವರ್ಷದ ಪುಟ್ಟ ಕಂದಮ್ಮ ತೆರೆದ ಬೋರ್ ವೆಲ್ ಗೆ ಬಿದ್ದಿದೆ. ಈ ಸುದ್ದಿ ರಾಷ್ಟ್ರಾದ್ಯಂತ ಸದ್ದು ಮಾಡುತ್ತಿದ್ದು, ಹೆತ್ತವರಲ್ಲಿ ಆತಂಕ ಸೃಷ್ಟಿಯಾಗಿದೆ.

ಬೋರ್‌ವೆಲ್‌ಗೆ ಬಿದ್ದ 2 ವರ್ಷದ ಬಾಲಕ: ಹೊರತೆಗೆಯಲು ಹರಸಾಹಸಬೋರ್‌ವೆಲ್‌ಗೆ ಬಿದ್ದ 2 ವರ್ಷದ ಬಾಲಕ: ಹೊರತೆಗೆಯಲು ಹರಸಾಹಸ

ಇಂದು ಬೆಳಗ್ಗೆ ಆಟವಾಡುತ್ತಿದ್ದ ನಾಲ್ಕು ವರ್ಷದ ಮಗುವೊಂದು ತೆರೆದ ಬೋರ್ ವೆಲ್ ಗೆ ಬಿದ್ದ ಘಟನೆ ರಾಜಸ್ಥಾನದ ಸಿರೋಹಿ ಗ್ರಾಮದಲ್ಲಿ ನಡೆದಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ರಾಜ್ಯ ವಿಪತ್ತು ನಿರ್ವಹಣಾ ಪಡೆ ಸಿಬ್ಬಂದಿ ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ.

ಮಗುವಿನ ರಕ್ಷಣೆಗೆ ಈಗಾಗಲೇ ಕಾರ್ಯಾಚರಣೆ ಆರಂಭಿಸಲಾಗಿದೆ ಎಂದು ಶಿವಗಂಜ್ ಉಪ ವಿಭಾಗ ಅಧಿಕಾರಿ ಭಗೀರಥ ಚೌಧರಿ ಮಾಹಿತಿ ನೀಡಿದ್ದಾರೆ. 15 ಅಡಿ ಆಳದಲ್ಲಿ ಸಿಲುಕಿರುವ ಮಗುವಿಗೆ ಉಸಿರಾಟ ತೊಂದರೆ ಆಗದಂತೆ ಆಮ್ಲಜನಕ ವ್ಯವಸ್ಥೆ ಮಾಡಲಾಗಿದೆ. ಮಗುವಿಗೆ ಸಮಯಕ್ಕೆ ಸರಿಯಾಗಿ ನೀರನ್ನು ಒದಗಿಸಲಾಗುತ್ತಿದೆ. ರಾಜ್ಯ ವಿಪತ್ತು ನಿರ್ವಹಣಾ ಪಡೆ ಅಧಿಕಾರಿಗಳು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದು, ಮಗುವನ್ನು ಸುರಕ್ಷಿತವಾಗಿ ಮೇಲೆತ್ತುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

English summary
Four-Year- Old Child On Thursday Fell Into A Borewell In Rajasthan's Sirohi Village.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X