ವರದಕ್ಷಿಣೆಗಾಗಿ ಬೇಡಿಕೆ: ಹಸೆಮಣೆ ಏರಬೇಕಿದ್ದ ಸಹೋದರಿಯರು ಪೊಲೀಸ್ ಠಾಣೆಗೆ ದೂರು
ಜೈಪುರ್, ಮೇ 13: ಇಬ್ಬರು ಸಹೋದರಿಯರು ಒಂದೇ ವೇದಿಕೆಯಲ್ಲಿ ಮದುವೆಗಾಗಿ ಹಸೆಮಣೆ ಏರಿದ್ದರು. ಶಾಸ್ತ್ರಗಳು ಎಲ್ಲಾ ಮುಗಿದು ಇನ್ನೇನು ತಾಳಿ ಕಟ್ಟಬೇಕಿತ್ತು. ಆದರೆ ವರದಕ್ಷಿಣೆ ಎಂಬ ಸಾಮಾಜಿಕ ಪಿಡುಗು ಅವರನ್ನು ಗಂಡನ ಮನೆಗೆ ಹೋಗುವ ಬದಲು ಪೊಲೀಸ್ ಠಾಣೆಗೆ ಹೋಗುವಂತೆ ಮಾಡಿತು.
ರಾಜಸ್ಥಾನದ ಭರತ್‌ಪುರ ಜಿಲ್ಲೆಯ ಬಯಾನದಲ್ಲಿ ಈ ಅಮಾನವೀಯ ಘಟನೆ ಜರುಗಿದೆ. ರಾಜಸ್ಥಾನದ ಸಿಕಂದರ್ ಮೂಲದ ಸಹೋದರಿಯರಿಬ್ಬರಿಗೆ ರಾಂಪುರ ಮೂಲದ ಸಹೋದರರ ಜತೆಗೆ ಬುಧವಾರ ಮದುವೆ ನಿಶ್ಚಯವಾಗಿತ್ತು. ಅದರಂತೆ ಮದುವೆ ಮುನ್ನ ಜರುಗಬೇಕಾದ ಎಲ್ಲಾ ಶಾಸ್ತ್ರಗಳು ಪೂರ್ಣಗೊಂಡಿತ್ತು. ಮೊದಲೇ ಇಬ್ಬರು ವರರಿಗೆ ಒಂದು ಬೈಕ್, ಚಿನ್ನಾಭರಣ, ಬೆಳ್ಳಿ ಆಭರಣ, ಬಟ್ಟೆಗಳು ಮತ್ತು ಗೃಹಪಯೋಗಿ ವಸ್ತುಗಳನ್ನು ವರದಕ್ಷಿಣೆಯಾಗಿ ವಧುವಿನ ಕಡೆಯವರು ನೀಡಿದ್ದರು.

ಆದರೆ ವರನ ಕಡೆಯವರು ತಾಳಿ ಕಟ್ಟುವ ಸಂದರ್ಭದಲ್ಲಿ ಇಬ್ಬರು ವರರಿಗೆ ವರದಕ್ಷಿಣೆಯಾಗಿ ಎರಡು ಬೈಕ್, ಎರಡು ಚಿನ್ನದ ಸರ, ಎರಡು ಚಿನ್ನದ ವರ ಹಾಗೂ ಜತೆಗೆ 5 ಲಕ್ಷ ರೂ. ನಗದು ನೀಡಬೇಕೆಂದು ಬೇಡಿಕೆ ಇಟ್ಟರು. ಆದರೆ ಇಷ್ಟೊಂದು ವರದಕ್ಷಿಣೆ ಕೊಡಲು ತಾವು ಅಸಹಾಯಕರಾಗಿದ್ದೇವೆ ಎಂದು ವಧುವಿನ ತಂದೆ, ತಾಯಿ ಅಂಗಲಾಚಿದರು. ಆದರೂ ಮಾನವೀಯತೆ ತೋರದ ವರನ ಕಡೆಯವರು ಮದುವೆಯನ್ನೇ ರದ್ದುಗೊಳಿಸಿ, ತಮ್ಮ ಊರಿಗೆ ಮರಳಿದರು.

ಮದುವೆಗಾಗಿ ಸಕಲ ಸಿದ್ಧತೆ ಮಾಡಿಕೊಂಡು, ಶೃಂಗಾರಗೊಂಡು ತಯಾರಾಗಿದ್ದ ವಧುಗಳು ವರದಕ್ಷಿಣೆ ವಿಷಯವಾಗಿ ಮದುವೆ ಮುರಿದು ಹೋದ ಸುದ್ದಿ ತಿಳಿದು ಆಘಾತಕ್ಕೆ ಒಳಗಾದರು. ಆದರೂ ಧೃತಿಗೆಡದೇ ವರನ ಕಡೆಯವರಿಗೆ ತಕ್ಕ ಪಾಠ ಕಲಿಸಬೇಕೆಂದು ತೀರ್ಮಾನ ತೆಗೆದುಕೊಂಡ ಸಹೋದರಿಯರು, ಬನಿಯಾ ಪೊಲೀಸ್ ಠಾಣೆಗೆ ತೆರಳಿ ಅವರ ವಿರುದ್ಧ ದೂರು ನೀಡಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ವಿಚಾರಣೆ ನಡೆಸುತ್ತಿದ್ದಾರೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications