ಬಿಜೆಪಿಗೆ ವಾಪಸ್ಸಾದ ಅಹುಜಾಗೆ ಉಪಾಧ್ಯಕ್ಷ ಪಟ್ಟದ ಗಿಫ್ಟ್!

ಜೈಪುರ, ನವೆಂಬರ್ 23: ರಾಜಸ್ಥಾನ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ಸಿಗದ ಕಾರಣಕ್ಕೆ ಇತ್ತೀಚೆಗಷ್ಟೇ ಬಿಜೆಪಿಗೆ ರಾಜೀನಾಮೆ ನೀಡಿದ್ದ ಹಾಲಿ ಸಚಿವ ಗ್ಯಾನ್ ದೇವ್ ಅಹುಜಾ, ಬಿಜೆಪಿಗೆ ವಾಪಸ್ಸಾಗಿದ್ದಾರೆ.

ಬಂಡಾಯ ನಾಯಕರಾಗಿ ಸ್ವತಂತ್ರವಾಗಿ ಕಣಕ್ಕಿಳಿದಿದ್ದ ರಾಜಸ್ಥಾನದ ರಾಮಗರ್ ಕ್ಷೇತ್ರದ ಬಿಜೆಪಿ ಶಾಸಕ ಗ್ಯಾನ್ ದೇವ್, ತಮ್ಮ ನಾಮಪತ್ರವನ್ನು ವಾಪಸ್ ಪಡೆದು ಬಿಜೆಪಿಗೆ ಮರಳಿದ್ದಾರೆ.

ಅದಕ್ಕೆ ಪ್ರತಿಯಾಗಿ ಬಿಜೆಪಿ ಅವರನ್ನು ರಾಜ್ಯ ಬಿಜೆಪಿ ಘಟಕದ ಉಪಾಧ್ಯಕ್ಷರನ್ನಾಗಿ ನೇಮಿಸಿದೆ.

Gyandev Ahuja Withdraws Nomination As Independent, Returns To BJP

ಗ್ಯಾನ್ ದೇವ್ ಅವರು ಇತ್ತೀಚೆಗೆ ಹಲವು ಸಮಾರಂಭಗಳಲ್ಲಿ ಪರೋಕ್ಷವಾಗಿ ಬಿಜೆಪಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಗೋಹತ್ಯೆ ತಡೆಯುವ ನಿಟ್ಟಿನಲ್ಲಿ ಬಿಜೆಪಿ ಹೆಚ್ಚಿನ ಶ್ರಮ ವಹಿಸುತ್ತಿಲ್ಲ ಎಂದು ಹೇಳಿದ್ದರು. ಸ್ವತಂತ್ರ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸಿ, ರಾಮಜನ್ಮಭೂಮಿ ಮತ್ತು ಗೋ ರಕ್ಷಣೆಯನ್ನು ತಮ್ಮ ಮುಖ್ಯ ಗುರಿಯನ್ನಾಗಿ ಇರಿಸಿಕೊಳ್ಳುವುದಾಗಿ ಹೇಳಿದ್ದರು. ಆದರೆ ಬದಲಾದ ಸನ್ನಿವೇಶದಲ್ಲಿ ಪಕ್ಷದ ವರಿಷ್ಠರ ರಾಜೀ ಸಂಧಾನ ಕೆಲಸ ಮಾಡಿದೆ. ಪಕ್ಷದ ಉಪಾಧ್ಯಕ್ಷ ಹುದ್ದೆಯೊಂದಿಗೆ ಅವರು ಬಿಜೆಪಿಗೆ ಮರಳಿದ್ದಾರೆ.

ಡಿಸೆಂಬರ್ 7 ರಂದು ರಾಜಸ್ಥಾನದ 200 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಡಿ.11 ರಂದು ಫಲಿತಾಂಶ ಪ್ರಕಟಗೊಳ್ಳಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+