ರಾಜಸ್ಥಾನ: ವಾಯುಪಡೆ ಯುದ್ಧ ವಿಮಾನ ಪತನ
ಜೈಪುರ, ಆಗಸ್ಟ್ 25: ಭಾರತೀಯ ವಾಯುಸೇನೆಗೆ ಸೇರಿದ ಮಿಗ್ 21 ಬೈಸನ್ ಯುದ್ಧ ವಿಮಾನ ರಾಜಸ್ಥಾನದಲ್ಲಿ ಪತನಗೊಂಡಿದೆ.
ರಾಜಸ್ಥಾನದ ಬರ್ಮರ್‌ನಲ್ಲಿ ವಿಮಾನ ಪತನವಾಗಿದ್ದು, ಪೈಲಟ್‌ನನ್ನು ರಕ್ಷಿಸಲಾಗಿದೆ. ಬರ್ಮರ್‌ನಲ್ಲಿ ಯುದ್ಧ ವಿಮಾನದ ತರಬೇತಿ ವೇಳೆ ಈ ದುರಂತ ಬರ್ಮರ್ನಿಂದ 35 ಕಿ.ಮೀ ದೂರದಲ್ಲಿರುವ ಮತಸರ್ ಗ್ರಾಮದಲ್ಲಿ ಯುದ್ಧ ವಿಮಾನದ ತರಬೇತಿ ನೀಡಲಾಗುತ್ತಿತ್ತು.
ಈ ವೇಳೆ ವಿಮಾನ ಪತನವಾಗಿದೆ. ಪೈಲಟನ್ನು ರಕ್ಷಿಸಲಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಭಾರತೀಯ ವಾಯುಪಡೆ ಟ್ವೀಟ್ ಮಾಡಿದೆ.ಸಂಭವಿಸಿದ್ದು, ಪೈಲಟ್ ಅನ್ನು ಸುರಕ್ಷಿತವಾಗಿ ಹೊರತರಲಾಗಿದೆ.
ವಿಮಾನ ಪತನವಾಗುತ್ತಿದ್ದಂತೆ ಗ್ರಾಮಸ್ಥರು ವಾಟರ್ ಟ್ಯಾಂಕರ್ಗಳನ್ನು ತರಿಸಿ ಬೆಂಕಿ ಆರಿಸಲು ಪ್ರಯತ್ನಿಸಿದ್ದಾರೆ. ಅವರೇ ಪೈಲಟನ್ನು ಹೊರಗೆ ಎಳೆದು, ಆಸ್ಪತ್ರೆಗೆ ಕಳುಹಿಸುವ ವ್ಯವಸ್ಥೆ ಮಾಡಿದ್ದಾರೆ. ಈ ದುರಂತಕ್ಕೆ ಕಾರಣವೇನೆಂದು ಇನ್ನೂ ಪತ್ತೆಯಾಗಿಲ್ಲ.

ವಿಮಾನ ಕೆಳಗೆ ಬೀಳುತ್ತಿದ್ದಂತೆ ಹೊತ್ತಿ ಉರಿದಿದೆ, ಇಂದು ಸಂಜೆ 5.30ರ ವೇಳೆಗೆ ಈ ಘಟನೆ ಸಂಭವಿಸಿದೆ. ಈ ವಿಷಯ ತಿಳಿಯುತ್ತಿದ್ದಂತೆ ಉತ್ತರ್ಲಾಯ್ ವಾಯುಪಡೆಯ ಅಧಿಕಾರಿಗಳು ಹೆಲಿಕಾಪ್ಟರ್ ಮೂಲಕ ಸ್ಥಳಕ್ಕೆ ಆಗಮಿಸಿದ್ದಾರೆ. ಹೆಚ್ಚಿನ ಮಾಹಿತಿ ಇನ್ನೂ ಲಭ್ಯವಾಗಬೇಕಿದೆ.
ಮೇ ತಿಂಗಳಲ್ಲಿ ಪಂಜಾಬ್‌ನ ಮೊಗಾ ಬಳಿ ತಡರಾತ್ರಿ ಭಾರತೀಯ ವಾಯುಪಡೆಯ ಮಿಗ್ -21 ಯುದ್ಧ ವಿಮಾನ ಅಪಘಾತಕ್ಕೀಡಾಗಿದ್ದು, ಪೈಲಟ್ ಸಾವನ್ನಪ್ಪಿದ್ದಾರೆ.
ಅಪಘಾತ ಸಂಭವಿಸಿದಾಗ ವಿಮಾನವು ದಿನನಿತ್ಯದ ತರಬೇತಿ ಹಂತದಲ್ಲಿತ್ತು. ಐಎಎಫ್ ಪ್ರಕಾರ, ಪೈಲಟ್ ಸ್ಕ್ವಾಟನ್ ಲೀಡರ್ ಆರ್.ಅಭಿನವ್ ಚೌಧರಿ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು.
"ಕಳೆದ ರಾತ್ರಿ ಪಶ್ಚಿಮ ವಲಯದಲ್ಲಿ ಐಎಎಫ್‌ನ ಬೈಸನ್ ಯುದ್ಧ ವಿಮಾನ ಅಪಘಾತಕ್ಕೀಡಾಗಿದೆ. ಪೈಲಟ್ ಸ್ಕ್ವಾಟನ್ ಲೀಡರ್ ಆರ್.ಅಭಿನವ್ ಚೌಧರಿ ಅವರಿಗೆ ಗಂಭೀರವಾದ ಗಾಯಗಳಾಗಿವೆ. ದುರಂತಕ್ಕೆ ಐಎಎಫ್ ಶೋಕ ವ್ಯಕ್ತಪಡಿಸುತ್ತದೆ ಮತ್ತು ದುಃಖಿತ ಕುಟುಂಬದೊಂದಿಗೆ ನಿಲ್ಲುತ್ತದೆ" ಎಂದು ಐಎಎಫ್ ಟ್ವೀಟ್ ಮಾಡಿದೆ.
ಇದೇ ವೇಳೆ, ವಿಮಾನ ಅಪಘಾತ ಪ್ರಕರಣವನ್ನು ನ್ಯಾಯಾಲಯ ತನಿಖೆಗೆ ಆದೇಶಿಸಿದೆ. ಈ ವರ್ಷ ಮಿಗ್ -21 ವಿಮಾನದ ಮೂರನೇ ಅಪಘಾತ ಇದಾಗಿದ್ದು, ಮಾರ್ಚ್ನಲ್ಲಿ, ಐಎಎಫ್ ಗ್ರೂಪ್ ಕ್ಯಾಪ್ಟನ್ ಸೆಂಟ್ರಲ್ ಇಂಡಿಯಾದ ಏರ್ ಬೇಸ್ನಲ್ಲಿ ನಡೆದ ಮಿಗ್ -21 ಬೈಸನ್ ವಿಮಾನ ಅಪಘಾತದಲ್ಲಿ ಸಾವನ್ನಪ್ಪಿದ್ದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications