India
  • search
  • Live TV
ಜೈಪುರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಐದು ಕೋಟಿ ಮೌಲ್ಯದ ಅಕ್ರಮ ಡ್ರಗ್ಸ್ ವಶಕ್ಕೆ, ಇಬ್ಬರ ಬಂಧನ

|
Google Oneindia Kannada News

ಜೈಪುರ, ಜೂನ್ 2: ರಾಜಸ್ಥಾನದ ಅಜ್ಮೇರ್‌ನಲ್ಲಿ ಪೊಲೀಸರು 5.52 ಕೋಟಿಗೂ ಅಧಿಕ ಮೌಲ್ಯದ ನಿಷೇಧಿತ ಮಾದಕ ವಸ್ತುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದರಲ್ಲಿ ಮಾತ್ರೆ, ಕ್ಯಾಪ್ಸುಲ್ ಹಾಗೂ ಇಂಜೆಕ್ಷನ್‌ಗಳನ್ನು ಸೇರಿದೆ. ಪ್ರಕರಣಕ್ಕೆ ಸಂಬಂಧಪಟ್ಟ ಇಬ್ಬರನ್ನು ರಾಜಸ್ಥಾನ ಪೊಲೀಸರು ಬಂಧಿಸಿದ್ದಾರೆ. ಅಜ್ಮೇರ್‌ನ ಗೋದಾಮು ಒಂದರಲ್ಲಿ ಇವುಗಳನ್ನು ಸಂಗ್ರಹಿಸಿಡಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಅಜ್ಮೇರ್ ಪೊಲೀಸ್ ಅಧಿಕಾರಿ ಮುಖೇಶ್ ಸೋನಿ ಈ ಪ್ರಕರಣದ ಬಗ್ಗೆ ಮಾಹಿತಿ ನೀಡಿದ್ದಾರೆ. ಪ್ರಕರಣದ ಮುಖ್ಯ ಆರೋಪಿ ತಲೆಮರೆಸಿಕೊಂಡಿದ್ದು ಆತನ ಪತ್ತೆಗಾಗಿ ಬಲೆ ಬೀಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಗ್ರಾಹಕರ ರೂಪದಲ್ಲಿ ಪೊಲೀಸರು ಸ್ಥಳಕ್ಕೆ ತೆರಳಿ ಕಾರ್ಯಾಚರಣೆ ನಡೆಸಿದ್ದಾರೆ.

ಬಿಟ್ ಕಾಯಿನ್ ಮೂಲಕ ಡ್ರಗ್ ವ್ಯವಹಾರ ಮಾಡುತ್ತಿದ್ದ ಗ್ಯಾಂಗ್ ಅಂದರ್ಬಿಟ್ ಕಾಯಿನ್ ಮೂಲಕ ಡ್ರಗ್ ವ್ಯವಹಾರ ಮಾಡುತ್ತಿದ್ದ ಗ್ಯಾಂಗ್ ಅಂದರ್

"ಈ ಪ್ರಕರಣದ ಬಗ್ಗೆ ಸ್ಪಷ್ಟ ಮಾಹಿತಿಯನ್ನು ಪಡೆದುಕೊಂಡ ನಂತರ ಅಲ್ವಾರ್ ಗೇಟ್ ಪೊಲೀಸರು ದಾಳಿಯನ್ನು ನಡೆಸಿದ್ದಾರೆ. ಈ ಸಂದರ್ಭದಲ್ಲಿ ಶೇಕ್ ಸಾಜಿದ್ ಮತ್ತು ಶ್ಯಾಮ್ ಸುಂದರ್ ಮುಂದ್ರಾ ಎಂಬ ಇಬ್ಬರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಅವರಿಂದ ಐದು ಕೋಟಿ ಮೌಲ್ಯದ ನಿಷೇಧಿತ ಮಾದಕ ವಸ್ತುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ" ಎಂದು ಮುಖೇಶ್ ಸೋನಿ ತಿಳಿಸಿದ್ದಾರೆ.

"ಪ್ರಕರಣದ ಆರೋಪಿಗಳಿಂದ ಒಟ್ಟು 5.53 ಕೋಟಿ ರೂಪಾಯಿ ಮೌಲ್ಯದ ಮಾತ್ರೆಗಳು, ಕ್ಯಾಪ್ಸುಲ್ ಮತ್ತು ಇಂಜೆಕ್ಷನ್‌ಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ತನಿಖೆ ಮುಂದುವರಿದಿದೆ. ಪ್ರಕರಣದ ಪ್ರಮುಖ ಆರೋಪಿಯನ್ನು ಇನ್ನು ಕೂಡ ಬಂಧಿಸಲಾಗಿಲ್ಲ. ಆತನ ಪತ್ತೆಗೆ ಕಾರ್ಯಾಚರಣೆ ನಡೆಯುತ್ತಿದೆ. ಶೀಘ್ರದಲ್ಲಿಯೇ ಬಂಧಿಸಲಾಗುತ್ತದೆ" ಎಂದು ಮಾಹಿತಿ ನೀಡಿದ್ದಾರೆ.

English summary
Illegal drugs and injections worth Rs 5 crore seized and 2 arrested in Rajasthan. know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X