ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

"ಆದಾಯ ಖಾತ್ರಿ ಯೋಜನೆ: ಬಡತನದ ಮೇಲೆ ಸರ್ಜಿಕಲ್ ಸ್ಟ್ರೈಕ್"

|
Google Oneindia Kannada News

ಜೈಪುರ, ಮಾರ್ಚ್ 26: ತಾನು 2019 ರ ಲೋಕಸಭಾ ಚುನಾವಣೆಯ ನಂತರ ಅಧಿಕಾರಕ್ಕೆ ಬಂದರೆ ಕನಿಷ್ಠ ಆದಾಯ ಖಾತ್ರಿ ಯೋಜನೆಯನ್ನು ಜಾರಿಗೊಳಿಸುವುದಾಗಿ ಹೇಳಿದ ಕಾಂಗ್ರೆಸ್ ನಡೆ ಬಡತನದ ಮೇಲಿನ ಸರ್ಜಿಕಲ್ ಸ್ಟ್ರೈಕ್ ಎಂದು ಪಕ್ಷದ ಅಧ್ಯಕ್ಷ ರಾಹುಲ್ ಗಾಂಧಿ ಬಣ್ಣಿಸಿದ್ದಾರೆ.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ರಾಜಸ್ಥಾನದ ರಾಜಧಾನಿ ಜೈಪುರದಲ್ಲಿ ಸಾರ್ವಜನಿಕ ಸಮಾವೇಶವೊಂದರಲ್ಲಿ ಮಾತನಾಡುತ್ತಿದ್ದ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸುವುದಕ್ಕೆ ಮರೆಯಲಿಲ್ಲ.

ಬಡವರ ಬ್ಯಾಂಕ್ ಖಾತೆಗೆ ತಿಂಗಳಿಗೆ 6000 ರೂ.: ರಾಹುಲ್ ಭರವಸೆ

"ಪ್ರಧಾನಿ ನರೇಂದ್ರ ಮೋದಿ ಅವರು ನಾನು ಚೌಕಿದಾರ ಎಂದರು. ಆದರೆ ಯಾರಿಗೆ ಎಂಬುದನ್ನು ಹೇಳಲಿಲ್ಲ. ಎಂದಾದರೂ ರೈತನಿಗೆ ಚೌಕಿದಾರ ಇರುವುದನ್ನು ನೋಡಿದ್ದೀರಾ? ಒಬ್ಬ ನಿರುದ್ಯೋಗಗೆ ಚೌಕಿದಾರ ಇರುವುದನ್ನು ನೋಡಿದ್ದೀರಾ?" ಎಂದು ರಾಹುಲ್ ಗಾಂಧಿ ಲೇವಡಿ ಮಾಡಿದರು.

Income scheme is surgical strike on poverty

"ಕಾಂಗ್ರೆಸ್ ಈ ದೇಶದಲ್ಲಿ ಬಡತನವನ್ನು ನಿರ್ಮೂಲನೆ ಮಾಡುವ ಸಂಕಲ್ಪ ತೊಟ್ಟಿದ್ದು, ಅದಕ್ಕಾಗಿ ಅತೀ ಬಡವರಿಗಾಗಿ ಕನಿಷ್ಠ ಆದಾಯ ಖಾತ್ರಿ ಯೋಜನೆಯನ್ನು ಜಾರಿಗೊಳಿಸಲಿದೆ" ಎಂದು ಅವರು ಹೇಳಿದರು. ಈ ಯೋಜನೆಯಿಂದ 25 ಕೋಟಿಯಷ್ಟು ಜನರು ಬಡತನದಿಂದ ಹೊರಬರಲಿದ್ದಾರೆ ಎಂದು ಅವರು ಹೇಳಿದರು.

3 ಲಕ್ಷ 60 ಸಾವಿರ ಕೋಟಿ ರುಪಾಯಿಯನ್ನು ರಾಹುಲ್ ಎಲ್ಲಿಂದ ತರುತ್ತಾರೆ?3 ಲಕ್ಷ 60 ಸಾವಿರ ಕೋಟಿ ರುಪಾಯಿಯನ್ನು ರಾಹುಲ್ ಎಲ್ಲಿಂದ ತರುತ್ತಾರೆ?

ಆದಾಯ ಖಾತ್ರಿ ಯೋಜನೆಯಡಿಯಲ್ಲಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಆರ್ಥಿಕವಾಗಿ ಹಿಂದುಳಿದ ಶೇ.20 ರಷ್ಟು ಬಡ ಕುಟುಂಬಕ್ಕೆ ತಿಂಗಳಿಗೆ 6000 ರೂ. ಸಹಾಯಧನ ನೀಡುವುದಾಗಿ ರಾಹುಲ್ ಗಾಂಧಿ ಭರವಸೆ ನೀಡಿದ್ದರು.

ಈ ಯೋಜನೆಯಡಿಯಲ್ಲಿ ಭಾರತದ ಶೇ.20 ರಷ್ಟು ಅತೀ ಬಡಕುಟುಂಬದ ಫಲಾನುಭವಿಗಳಿಗೆ ವರ್ಷಕ್ಕೆ 72,000 ರೂ. ನೀಡುವುದಾಗಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಭರವಸೆ ನೀಡಿದ್ದರು.

English summary
Congress chief Rahul Gandhi today said the proposed income scheme of the Congress was the party’s “surgical strike” on poverty. Monday Rahul Gandhi asssures 20 percent of poorest families will get Rs. 72,000 per year as part of Congress's minimum income promise.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X