ಜೋಧ್‌ಪುರದಲ್ಲಿ ಮುಂದುವರೆದ ಘರ್ಷಣೆ: ಪೊಲೀಸರ ಮೇಲೆ ಕಲ್ಲು ತೂರಾಟ
ಜೈಪುರ, ಮೇ 03: ರಾಜಸ್ಥಾನದ ಜೋಧ್‌ಪುರದಲ್ಲಿ ಹಿಂಸಾಚಾರದ ಎರಡನೇ ದಿನವೂ ಘರ್ಷಣೆ ನಡೆದಿದೆ. ಉದ್ರಿಕ್ತರ ಗುಂಪಿನಿಂದ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ ಜೊತೆಗೆ ಬಿಜೆಪಿ ಶಾಸಕನ ಮನೆ ಹೊರಗೆ ಬೈಕ್‌ಗೆ ಬೆಂಕಿ ಹಚ್ಚಲಾಗಿದ್ದು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ವಿರುದ್ಧವೂ ಘೋಷಣೆಗಳನ್ನು ಕೂಗುವ ಮೂಲಕ ಗುಂಪು ಆಕ್ರೋಶ ಹೊರಹಾಕಿದೆ.
ಬಿಜೆಪಿ ಶಾಸಕ ಸೂರ್ಯಕಾಂತ ವ್ಯಾಸ್ ಮನೆಯ ಹೊರಗೆ ಬೈಕ್‌ಗೆ ಬೆಂಕಿ ಹಚ್ಚಿದ್ದಾರೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿ ಪ್ರಹಾರ ಮಾಡಿದ್ದಾರೆ. ಇದಕ್ಕೂ ಮುನ್ನ ಕೇಂದ್ರ ಸಚಿವ ಮತ್ತು ಜೋಧ್‌ಪುರ ಸಂಸದ ಗಜೇಂದ್ರ ಸಿಂಗ್ ಶೇಖಾವತ್ ಗೆಹ್ಲೋಟ್ ವಿರುದ್ಧ ಘೋಷಣೆಗಳನ್ನು ಕೂಗಿದ ಸ್ಥಳಕ್ಕೆ ತಲುಪಿದರು.
ಸೋಮವಾರ ಜಲೋರಿ ಗೇಟ್‌ನಲ್ಲಿ ಹಿಂದೂ ಧ್ವಜ ತೆಗೆದು ಮುಸ್ಲಿಂ ಬಾವುಟ ಹಾರಿಸಿದ ವಿಚಾರದಲ್ಲಿ ವಿವಾದ ಆರಂಭವಾಗಿದೆ. ಜಾಲೋರಿ ವೃತ್ತದ ಬಳಿ ಬ್ಯಾನರ್ ಹಾಕಿ ಧ್ವನಿವರ್ಧಕ ಅಳವಡಿಸಲಾಗಿತ್ತು. ವರದಿಗಳ ಪ್ರಕಾರ ಸ್ವಾತಂತ್ರ್ಯ ಹೋರಾಟಗಾರ ಬಾಲ್ ಮುಕುಂದ್ ಬಿಸ್ಸಾ ಅವರ ಪ್ರತಿಮೆಯ ಮೇಲೆ ಧ್ವಜವನ್ನು ಹಾಕಲಾಗಿದೆ ಎಂದು ಆರೋಪಿಸಲಾಗುತ್ತಿದೆ.
जालौरी गेट, जोधपुर पर दो गुटों में झड़प से तनाव पैदा होना दुर्भाग्यपूर्ण है। प्रशासन को हर कीमत पर शांति एवं व्यवस्था बनाए रखने के निर्देश दिए हैं।
— Ashok Gehlot (@ashokgehlot51) May 3, 2022
ಜಲೋರಿಯ ವೃತ್ತದಲ್ಲಿ ಈದ್‌ಗೆ ಸಂಬಂಧಿಸಿದ ಬ್ಯಾನರ್ ಅನ್ನು ಕಟ್ಟಿದಾಗ ಒಂದು ಸಮುದಾಯದ ಜನರು ಘೋಷಣೆಗಳನ್ನು ಕೂಗಲು ಪ್ರಾರಂಭಿಸಿದರು. ಕೇಸರಿ ಧ್ವಜವನ್ನು ತೆಗೆದ ಬೆನ್ನಲ್ಲೇ ಪ್ರತಿಭಟನಾಕಾರರು ಧ್ವಜ ಮತ್ತು ಬ್ಯಾನರ್ ತೆಗೆಸಿದೆ, ಇದು ಕೋಲಾಹಲಕ್ಕೆ ಕಾರಣವಾಗಿದೆ. ಈ ವೇಳೆ ಇತರೆ ಸಮುದಾಯದವರು ಆಕ್ರೋಶಗೊಂಡು ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದೆ.

ಎರಡೂ ಕಡೆಯಿಂದ ಕಲ್ಲು ತೂರಾಟ, ವಾಹನಗಳಿಗೆ ಹಾನಿ, ಧ್ವನಿವರ್ಧಕವನ್ನು ಕಿತ್ತೊಗೆಯುವ ಘಟನೆ ನಡೆದಿದೆ. ಗುಂಪನ್ನು ನಿಯಂತ್ರಣಕ್ಕೆ ತರಲು ಪೊಲೀಸರು ಅಶ್ರುವಾಯು ಪ್ರಯೋಗಿಸಿದ್ದಾರೆ. ಜನಸಂದಣಿ ಹೆಚ್ಚಾದಂತೆ ಪೊಲೀಸರು ಆ ಪ್ರದೇಶದಿಂದ ಜನರನ್ನು ಚದುರಿಸಿ ಬಿಗಿ ಭದ್ರತೆ ಕೈಗೊಂಡಿದ್ದಾರೆ.

ಇದೇ ವೇಳೆ ಶಾಂತಿ ಕಾಪಾಡುವಂತೆ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮನವಿ ಮಾಡಿದ್ದಾರೆ. ಜೋಧ್‌ಪುರ-ಮಾರ್ವಾರ್‌ನ ಪ್ರೀತಿ ಮತ್ತು ಸಹೋದರತ್ವದ ಸಂಪ್ರದಾಯವನ್ನು ಗೌರವಿಸಿ. ಶಾಂತಿಯನ್ನು ಕಾಪಾಡಿ. ಕಾನೂನು ಮತ್ತು ಸುವ್ಯವಸ್ಥೆಗೆ ಸಹಕರಿಸಿ ಎಂದು ಎಲ್ಲಾ ಪಕ್ಷಗಳಿಗೆ ಮನವಿ ಮಾಡುತ್ತೇನೆ ಎಂದು ಮುಖ್ಯಮಂತ್ರಿಗಳು ಟ್ವೀಟ್ ಮಾಡಿದ್ದಾರೆ.
Recommended Video
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications