Get Updates
Get notified of breaking news, exclusive insights, and must-see stories!

ಜೋಧ್‌ಪುರ: ಭುಗಿಲೆದ್ದ ಹಿಂಸಾಚಾರ ಭುಗಿಲೆದ್ದಿದೆ, ಶಾಂತಿ ಕಾಪಾಡಲು ಸಿಎಂ ಮನವಿ

ಜೋಧಪುರ ಮೇ 3: ಈದ್-ಉಲ್-ಫಿತರ್ ಮತ್ತು ಅಕ್ಷಯ ತೃತೀಯಾ ಹಬ್ಬಕ್ಕೂ ಮುನ್ನ ಸೋಮವಾರ ರಾತ್ರಿ ಜೋಧ್‌ಪುರ ನಗರದಲ್ಲಿ ಎರಡು ಸಮುದಾಯಗಳ ನಡುವೆ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಸಿಎಂ ಅಶೋಕ್ ಗೆಹ್ಲೋಟ್ ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದಾರೆ.

ಪ್ರಾಥಮಿಕ ವರದಿಯಲ್ಲಿ, ಒಂದು ಸಮುದಾಯದ ಕೆಲವು ದುಷ್ಕರ್ಮಿಗಳು ಈದ್‌ಗೆ ಮುನ್ನ ಬಲ್ಮುಕಂದ್ ಬಿಸ್ಸಾ ವೃತ್ತದಲ್ಲಿ ಕೇಸರಿ ಧ್ವಜವನ್ನು ತೆಗೆದು ಇಸ್ಲಾಮಿಕ್ ಧ್ವಜವನ್ನು ಹಾಕಿದ್ದಾರೆ. ಇದರಿಂದ ಹಿಂದೂ ಸಂಘಟನೆಯ ಯುವಕರೂ ಪ್ರಶ್ನೆಸಲು ಮುಂದಾಗಿದ್ದಾರೆ. ವಾದ ವಿಕೋಪಕ್ಕೆ ತಿರುಗಿ ಜಲೋರಿ ಗೇಟ್ ಛೇದಕದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದೆ. ಎರಡು ಸಮುದಾಯಗಳ ನಡುವಿನ ವಾದಗಳು ಹಿಂಸಾಚಾರಕ್ಕೆ ತಿರುಗಿ ಕಲ್ಲು ತೂರಾಟವೂ ನಡೆದಿದೆ ಎಂದು ವರದಿಯಾಗಿದ್ದು, ಗುಂಪನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ. ಹಿಂಸಾಚಾರದ ಕಾರಣ, ಜಲೋರಿ ಗೇಟ್ ಛೇದಕದಲ್ಲಿ ಭಾರೀ ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದೆ.

Jodhpur Violence: Gehlot appeals for peace

ಇದೇ ವೇಳೆ ಶಾಂತಿ ಕಾಪಾಡುವಂತೆ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮನವಿ ಮಾಡಿದ್ದಾರೆ. ಜೋಧ್‌ಪುರ-ಮಾರ್ವಾರ್‌ನ ಪ್ರೀತಿ ಮತ್ತು ಸಹೋದರತ್ವದ ಸಂಪ್ರದಾಯವನ್ನು ಗೌರವಿಸಿ. ಶಾಂತಿಯನ್ನು ಕಾಪಾಡಿ. ಕಾನೂನು ಮತ್ತು ಸುವ್ಯವಸ್ಥೆಗೆ ಸಹಕರಿಸಿ ಎಂದು ಎಲ್ಲಾ ಪಕ್ಷಗಳಿಗೆ ಮನವಿ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಟ್ವೀಟ್ ಮಾಡಿದ್ದಾರೆ.

ಈ ಘಟನೆಯನ್ನು ವರದಿ ಮಾಡುತ್ತಿದ್ದ ಮಾಧ್ಯಮದವರೂ ಪೊಲೀಸರ ಕೋಪಕ್ಕೆ ಗುರಿಯಾಗಿದ್ದಾರೆ ಎಂದು ವರದಿಯಾಗಿದೆ. ಘರ್ಷಣೆಯಲ್ಲಿ ಪೊಲೀಸರು ನಾಲ್ವರು ಪತ್ರಕರ್ತರನ್ನು ಥಳಿಸಿದ್ದಾರೆ ಎನ್ನಲಾಗುತ್ತಿದೆ. ಸದ್ಯ ಇಡೀ ನಗರದಲ್ಲಿ ಬಿಗುವಿನ ವಾತಾವರಣ ಮುಂದುವರಿದಿದ್ದು ಸೌಹಾರ್ದತೆಯಿಂದ ಹಬ್ಬಗಳನ್ನು ಆಚರಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ. ಇತರ ಸಮುದಾಯದ ಜನರು ಈ ಕ್ರಮಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.

Jodhpur Violence: Gehlot appeals for peace

ಇಂಟರ್ನೆಟ್ ಸೇವೆ ಸ್ಥಗಿತ

ಹಿಂಸಾಚಾರದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಮುನ್ನೆಚ್ಚರಿಕೆ ಕ್ರಮವಾಗಿ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಿದೆ. ಜೋಧ್‌ಪುರ ವಿಭಾಗೀಯ ಆಯುಕ್ತ ಹಿಮಾಂಶು ಗುಪ್ತಾ ಹೊರಡಿಸಿದ ಆದೇಶದಲ್ಲಿ, ಇಡೀ ಜೋಧ್‌ಪುರ ಜಿಲ್ಲೆಯಲ್ಲಿ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.

Recommended Video

      CSK ವಿರುದ್ಧ ಸೇಡು ತೀರಿಸಿಕೊಳ್ಳಲು ವಿರಾಟ್ ಹೇಗೆ ರೆಡಿಯಾಗಿದ್ದಾರೆ ಗೊತ್ತಾ? | Oneindia Kannad

      ಕಳೆದ ತಿಂಗಳು ನಡೆದ ಕರೌಲಿಯಲ್ಲಿ ಇಂಥಹದ್ದೇ ಹಿಂಸಾಚಾರದಲ್ಲಿ ಅನೇಕ ಜನ ಗಾಯಗೊಂಡಿದ್ದರು. ಹಿಂದೂ ಹೊಸ ವರ್ಷ ಯುಗಾದಿಯನ್ನು ಆಚರಿಸಲು ಕರೌಲಿಯಲ್ಲಿ ಮೋಟಾರ್ ಸೈಕಲ್ ರ್‍ಯಾಲಿ ಮಾಡುವ ವೇಳೆ ಮುಸ್ಲಿಂ ಗಲ್ಲಿಯಲ್ಲಿ ಈ ಹಿಂಸಾಚಾರ ನಡೆದಿತ್ತು.

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+