ಜೋಧ್‌ಪುರದಲ್ಲಿ ಹಿಂಸಾತ್ಮಕ ಘರ್ಷಣೆ: ಇಂಟರ್ನೆಟ್ ಸ್ಥಗಿತ
ಜೋಧ್‌ಪುರ ಮೇ 03: ಈದ್-ಉಲ್-ಫಿತರ್ ಮತ್ತು ಅಕ್ಷಯ ತೃತೀಯಾ ಹಬ್ಬಕ್ಕೂ ಮುನ್ನ ಸೋಮವಾರ ರಾತ್ರಿ ಜೋಧ್‌ಪುರ ನಗರದಲ್ಲಿ ಎರಡು ಸಮುದಾಯಗಳ ನಡುವೆ ಹಿಂಸಾತ್ಮಕ ಘರ್ಷಣೆಗಳು ನಡೆದಿದೆ. ಒಂದು ಸಮುದಾಯದ ಕೆಲವು ದುಷ್ಕರ್ಮಿಗಳು ಈದ್‌ಗೆ ಮುನ್ನ ಬಲ್ಮುಕಂದ್ ಬಿಸ್ಸಾ ವೃತ್ತದಲ್ಲಿ ಕೇಸರಿ ಧ್ವಜವನ್ನು ತೆಗೆದು ಇಸ್ಲಾಮಿಕ್ ಧ್ವಜವನ್ನು ಹಾಕಿದ್ದಾರೆ. ಇದರಿಂದ ಹಿಂದೂ ಸಂಘಟನೆಯ ಯುವಕರೂ ಪ್ರಶ್ನೆಸಲು ಮುಂದಾಗಿದ್ದಾರೆ. ವಾದ ವಿಕೋಪಕ್ಕೆ ತಿರುಗಿ ಜಲೋರಿ ಗೇಟ್ ಛೇದಕದಲ್ಲಿ ಎಡರು ಗುಂಪುಗಳ ನಡುವೆ ಘರ್ಷಣೆ ನಡೆದಿದೆ. ಎರಡು ಸಮುದಾಯಗಳ ನಡುವಿನ ವಾದಗಳು ಹಿಂಸಾಚಾರಕ್ಕೆ ತಿರುಗಿ ಕಲ್ಲು ತೂರಾಟವೂ ವರದಿಯಾಗಿದ್ದು, ಗುಂಪನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ.
Tension prevails in #Jodhpur in #Rajasthan after #violent clashes between two communities #Congress #Jodhpurclashes pic.twitter.com/EOW0fXXzcV
— Paras Bisht (@ParasBisht15) May 3, 2022
ಮಾತ್ರವಲ್ಲದೇ ಘಟನೆಯನ್ನು ವರದಿ ಮಾಡುತ್ತಿದ್ದ ಮಾಧ್ಯಮದವರೂ ಪೊಲೀಸರ ಕೋಪಕ್ಕೆ ಗುರಿಯಾಗಿದ್ದಾರೆ ಎಂದು ವರದಿಯಾಗಿದೆ. ಘರ್ಷಣೆಯಲ್ಲಿ ಪೊಲೀಸರು ನಾಲ್ವರು ಪತ್ರಕರ್ತರನ್ನು ಥಳಿಸಿದ್ದಾರೆ ಎನ್ನಲಾಗುತ್ತಿದೆ. ಸದ್ಯ ಇಡೀ ನಗರದಲ್ಲಿ ಬಿಗುವಿನ ವಾತಾವರಣ ಮುಂದುವರಿದಿದ್ದು ಸೌಹಾರ್ದತೆಯಿಂದ ಹಬ್ಬಗಳನ್ನು ಆಚರಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ. ಇತರ ಸಮುದಾಯದ ಜನರು ಈ ಕ್ರಮಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.
ಇಂಟರ್ನೆಟ್ ಸೇವೆ ಸ್ಥಗಿತ
ಹಿಂಸಾಚಾರದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಮುನ್ನೆಚ್ಚರಿಕೆ ಕ್ರಮವಾಗಿ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಿದೆ. ಜೋಧ್‌ಪುರ ವಿಭಾಗೀಯ ಆಯುಕ್ತ ಹಿಮಾಂಶು ಗುಪ್ತಾ ಹೊರಡಿಸಿದ ಆದೇಶದಲ್ಲಿ, ಇಡೀ ಜೋಧ್‌ಪುರ ಜಿಲ್ಲೆಯಲ್ಲಿ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.

ಕಳೆದ ತಿಂಗಳು ನಡೆದ ಕರೌಲಿಯಲ್ಲಿ ಇಂಥಹದ್ದೇ ಹಿಂಸಾಚಾರದಲ್ಲಿ ಅನೇಕ ಜನ ಗಾಯಗೊಂಡಿದ್ದರು. ಹಿಂದೂ ಹೊಸ ವರ್ಷ ಯುಗಾದಿಯನ್ನು ಆಚರಿಸಲು ಕರೌಲಿಯಲ್ಲಿ ಮೋಟಾರ್ ಸೈಕಲ್ ರ್‍ಯಾಲಿ ಮಾಡುವ ವೇಳೆ ಮುಸ್ಲಿಂ ಗಲ್ಲಿಯಲ್ಲಿ ಈ ಹಿಂಸಾಚಾರ ನಡೆದಿತ್ತು.
-
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications