ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜೋಧ್‌ಪುರದಲ್ಲಿ ಹಿಂಸಾತ್ಮಕ ಘರ್ಷಣೆ: ಇಂಟರ್ನೆಟ್ ಸ್ಥಗಿತ

|
Google Oneindia Kannada News

ಜೋಧ್‌ಪುರ ಮೇ 03: ಈದ್-ಉಲ್-ಫಿತರ್ ಮತ್ತು ಅಕ್ಷಯ ತೃತೀಯಾ ಹಬ್ಬಕ್ಕೂ ಮುನ್ನ ಸೋಮವಾರ ರಾತ್ರಿ ಜೋಧ್‌ಪುರ ನಗರದಲ್ಲಿ ಎರಡು ಸಮುದಾಯಗಳ ನಡುವೆ ಹಿಂಸಾತ್ಮಕ ಘರ್ಷಣೆಗಳು ನಡೆದಿದೆ. ಒಂದು ಸಮುದಾಯದ ಕೆಲವು ದುಷ್ಕರ್ಮಿಗಳು ಈದ್‌ಗೆ ಮುನ್ನ ಬಲ್ಮುಕಂದ್ ಬಿಸ್ಸಾ ವೃತ್ತದಲ್ಲಿ ಕೇಸರಿ ಧ್ವಜವನ್ನು ತೆಗೆದು ಇಸ್ಲಾಮಿಕ್ ಧ್ವಜವನ್ನು ಹಾಕಿದ್ದಾರೆ. ಇದರಿಂದ ಹಿಂದೂ ಸಂಘಟನೆಯ ಯುವಕರೂ ಪ್ರಶ್ನೆಸಲು ಮುಂದಾಗಿದ್ದಾರೆ. ವಾದ ವಿಕೋಪಕ್ಕೆ ತಿರುಗಿ ಜಲೋರಿ ಗೇಟ್ ಛೇದಕದಲ್ಲಿ ಎಡರು ಗುಂಪುಗಳ ನಡುವೆ ಘರ್ಷಣೆ ನಡೆದಿದೆ. ಎರಡು ಸಮುದಾಯಗಳ ನಡುವಿನ ವಾದಗಳು ಹಿಂಸಾಚಾರಕ್ಕೆ ತಿರುಗಿ ಕಲ್ಲು ತೂರಾಟವೂ ವರದಿಯಾಗಿದ್ದು, ಗುಂಪನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ.

ಮಾತ್ರವಲ್ಲದೇ ಘಟನೆಯನ್ನು ವರದಿ ಮಾಡುತ್ತಿದ್ದ ಮಾಧ್ಯಮದವರೂ ಪೊಲೀಸರ ಕೋಪಕ್ಕೆ ಗುರಿಯಾಗಿದ್ದಾರೆ ಎಂದು ವರದಿಯಾಗಿದೆ. ಘರ್ಷಣೆಯಲ್ಲಿ ಪೊಲೀಸರು ನಾಲ್ವರು ಪತ್ರಕರ್ತರನ್ನು ಥಳಿಸಿದ್ದಾರೆ ಎನ್ನಲಾಗುತ್ತಿದೆ. ಸದ್ಯ ಇಡೀ ನಗರದಲ್ಲಿ ಬಿಗುವಿನ ವಾತಾವರಣ ಮುಂದುವರಿದಿದ್ದು ಸೌಹಾರ್ದತೆಯಿಂದ ಹಬ್ಬಗಳನ್ನು ಆಚರಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ. ಇತರ ಸಮುದಾಯದ ಜನರು ಈ ಕ್ರಮಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.

ಕರೌಲಿ ಹಿಂಸಾಚಾರ: ಜೀವದ ಹಂಗು ತೊರೆದು ಮಗುವನ್ನು ರಕ್ಷಿಸಿದ ಪೊಲೀಸ್ ಪೇದೆಕರೌಲಿ ಹಿಂಸಾಚಾರ: ಜೀವದ ಹಂಗು ತೊರೆದು ಮಗುವನ್ನು ರಕ್ಷಿಸಿದ ಪೊಲೀಸ್ ಪೇದೆ

ಇಂಟರ್ನೆಟ್ ಸೇವೆ ಸ್ಥಗಿತ

ಹಿಂಸಾಚಾರದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಮುನ್ನೆಚ್ಚರಿಕೆ ಕ್ರಮವಾಗಿ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಿದೆ. ಜೋಧ್‌ಪುರ ವಿಭಾಗೀಯ ಆಯುಕ್ತ ಹಿಮಾಂಶು ಗುಪ್ತಾ ಹೊರಡಿಸಿದ ಆದೇಶದಲ್ಲಿ, ಇಡೀ ಜೋಧ್‌ಪುರ ಜಿಲ್ಲೆಯಲ್ಲಿ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.

Jodhpur Violent: Internet service shutdown

ಕಳೆದ ತಿಂಗಳು ನಡೆದ ಕರೌಲಿಯಲ್ಲಿ ಇಂಥಹದ್ದೇ ಹಿಂಸಾಚಾರದಲ್ಲಿ ಅನೇಕ ಜನ ಗಾಯಗೊಂಡಿದ್ದರು. ಹಿಂದೂ ಹೊಸ ವರ್ಷ ಯುಗಾದಿಯನ್ನು ಆಚರಿಸಲು ಕರೌಲಿಯಲ್ಲಿ ಮೋಟಾರ್ ಸೈಕಲ್ ರ್‍ಯಾಲಿ ಮಾಡುವ ವೇಳೆ ಮುಸ್ಲಿಂ ಗಲ್ಲಿಯಲ್ಲಿ ಈ ಹಿಂಸಾಚಾರ ನಡೆದಿತ್ತು.

English summary
Rajasthan Violence: Violent clashes broke out between two communities in Jodhpur city on Monday night before the Eid-ul-Fitr and Akshaya Tritiya festival, which has shut down internet service.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X