ವಾಚ್‌ಟವರ್‌ನಲ್ಲಿ ಸೆಲ್ಫಿ ಕ್ಲಿಕ್ಕಿಸುತ್ತಿರುವಾಗ ಸಿಡಿಲು ಬಡಿದು 11 ಮಂದಿ ಸಾವು

ಜೈಪುರ, ಜುಲೈ 12: ವಾಚ್‌ಟವರ್‌ನಲ್ಲಿ ಸೆಲ್ಫಿ ಕ್ಲಿಕ್ಕಿಸಿಕೊಳ್ಳುತ್ತಿರುವಾಗ ಸಿಡಿಲು ಬಡಿದು 11 ಮಂದಿ ಮೃತಪಟ್ಟು, ಹಲವು ಮಂದಿ ಗಾಯಗೊಂಡಿರುವ ಘಟನೆ ಜೈಪುರದಲ್ಲಿ ನಡೆದಿದೆ.

ಇಲ್ಲಿನ ಪ್ರಸಿದ್ಧ ಅಮರ್ ಅರಮನೆ ಎದುರು ಇರುವ ವಾಚ್‌ಟವರ್‌ಗೆ ಸಿಡಿಲುಬಡಿದಿದೆ. ಕೆಲವರು ಭಯದಿಂದ ಟವರ್‌ನಿಂದ ಕೆಳಗೆ ಹಾರಿದ್ದು, ಗಾಯಗೊಂಡಿದ್ದಾರೆ.

ರಾಜಸ್ಥಾನದಲ್ಲಿ ಭಾನುವಾರ ಭಾರಿ ಮಳೆಯಾಗುತ್ತಿತ್ತು, ಇಂತಹ ಸಂದರ್ಭದಲ್ಲಿ ವಾಚ್ ಟವರ್ ಹತ್ತಿ ಜನರು ಸೆಲ್ಫಿ ತೆಗೆದುಕೊಳ್ಳುವುದರಲ್ಲಿ ಮಗ್ನರಾಗಿದ್ದರು. ಆ ಸಂದರ್ಭದಲ್ಲಿ 27 ಮಂದಿ ವಾಚ್‌ಟವರ್‌ನಲ್ಲಿ ಇದ್ದರು ಎನ್ನಲಾಗಿದೆ.

Lightning Strikes While People Taking Selfies On Tower In Jaipur, 11 Dead

ಸಿಡಿಲು ಬಡಿದು ಮೃತಪಟ್ಟಿರುವ ಕುಟುಂಬಕ್ಕೆ 5 ಲಕ್ಷ ರೂ ಪರಿಹಾರ ನೀಡುವಂತೆ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಆದೇಶ ಹೊರಡಿಸಿದ್ದಾರೆ. ಕೇವಲ ಅಮರ್ ಅರಮನೆ ಮಾತ್ರವಲ್ಲದೆ ರಾಜ್ಯಾದ್ಯಂತ ಸಿಡಿಲು ಬಡಿದು ಮೃತಪಟ್ಟಿರುವ 9 ಘಟನೆಗಳು ನಡೆದಿವೆ.

ಪ್ರಧಾನಿ ನರೇಂದ್ರ ಮೋದಿ ಮೃತರಿಗೆ ಸಂತಾಪ ಸೂಚಿಸಿದ್ದಾರೆ, ಟ್ವೀಟ್‌ನಲ್ಲಿ ರಾಜಸ್ಥಾನದಲ್ಲಿ ಸಿಡಿಲು ಬಡಿದು ಹಲವು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ, ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಬರೆದುಕೊಂಡಿದ್ದಾರೆ.

ರಾಜಸ್ಥಾನದಲ್ಲಿ ಭಾನುವಾರ ಹಲವೆಡೆ ಭಾರಿ ಮಳೆಯಾಗಿದೆ, ಮುಂದಿನ ನಾಲ್ಕು ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+