ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜಸ್ಥಾನದಲ್ಲಿ ಕೊರೊನಾ ನಿಯಂತ್ರಣಕ್ಕೆ ಹೊಸ ಅಭಿಯಾನ

|
Google Oneindia Kannada News

ಜೈಪುರ್, ಏಪ್ರಿಲ್ 21: ರಾಜಸ್ಥಾನದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ನಿಯಂತ್ರಿಸುವ ಉದ್ದೇಶದಿಂದ "No Mask, No Movement" ಅಭಿಯಾನ ಆರಂಭಿಸುವುದಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ.

ವಿಡಿಯೋ ಕಾನ್ಫರೆನ್ಸ್ ಮೂಲಕ ಸ್ಥಳೀಯ ಮತ್ತು ನಗರ ಪ್ರದೇಶಗಳ ಮೇಯರ್, ಉಪ ಮೇಯರ್, ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಹಾಗೂ ಕಾರ್ಯ ನಿರ್ವಹಣಾ ಅಧಿಕಾರಿಗಳ ಜೊತೆಗೆ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಸಭೆ ನಡೆಸಿದರು.

Infographics: ಕೊರೊನಾ ಎರಡನೇ ಅಲೆಗೂ ಮೊದಲೇ ಎಡವಿತಾ ಸರ್ಕಾರ?Infographics: ಕೊರೊನಾ ಎರಡನೇ ಅಲೆಗೂ ಮೊದಲೇ ಎಡವಿತಾ ಸರ್ಕಾರ?

ಕೊರೊನಾವೈರಸ್ ಸೋಂಕಿನ ಎರಡನೇ ಅಲೆಯು ಮೊದಲಿಗಿಂತ ಹೆಚ್ಚು ಅಪಾಯಕಾರಿಯಾಗಿದೆ ಎಂದಿದ್ದಾರೆ. ರಾಜ್ಯಾದ್ಯಂತ ಹೊಸ ಅಭಿಯಾನದ ಮೂಲಕ ಕೊವಿಡ್-19 ಹರಡುವಿಕೆ ಸರಪಳಿ ಕತ್ತರಿಸುವುದಕ್ಕೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ತಿಳಿಸಿದ್ದಾರೆ.

No Mask No Movement: New Campaign to Break Chain of Coronavirus in Rajasthan

ಕೊರೊನಾ ನಿಯಂತ್ರಿಸಲು ಮಾರ್ಗಸೂಚಿ ಪಾಲಿಸಿ:

ರಾಜಸ್ಥಾನದಲ್ಲಿ ಕೊರೊನಾವೈರಸ್ ಸೋಂಕು ನಿಯಂತ್ರಿಸುವುದಕ್ಕೆ ಕಡ್ಡಾಯವಾಗಿ ಮಾರ್ಗಸೂಚಿಗಳನ್ನು ಪಾಲನೆ ಮಾಡಬೇಕು. "ಮಾಸ್ಕ್ ಇಲ್ಲದಿದ್ದರೆ, ಚಟುವಟಿಕೆಗಳೇ ಇಲ್ಲ" ಎಂಬ ಅಭಿಯಾನದ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕಾರ್ಯ ಮಾಡಲಾಗುತ್ತದೆ. ಸಾರ್ವಜನಿಕರು ಕಡ್ಡಾಯವಾಗಿ ಮನೆಗಳಿಂದ ಹೊರ ಬರುವಾಗ ಮಾಸ್ಕ್ ಧರಿಸಬೇಕು. ಇದರ ಜೊತೆಗೆ ಸಾಮಾಜಿ ಅಂತರವನ್ನು ಕಾಯ್ದುಕೊಳ್ಳಬೇಕು ಎಂದು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮನವಿ ಮಾಡಿಕೊಂಡಿದ್ದಾರೆ.

ರಾಜಸ್ಥಾನದಲ್ಲಿ ಕೊರೊನಾವೈರಸ್ ಕಥೆ:

ರಾಜ್ಯದಲ್ಲಿ ಒಂದೇ ದಿನ 12201 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 4,38,785ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 64 ಮಂದಿ ಮಹಾಮಾರಿಗೆ ಬಲಿಯಾಗಿದ್ದರೆ, 3207 ಸೋಂಕಿತರು ಗುಣಮುಖರಾಗಿದ್ದಾರೆ. ರಾಜಸ್ಥಾನದಲ್ಲಿ ಇದುವರೆಗೂ 3268 ಜನರು ಸೋಂಕಿನಿಂದ ಪ್ರಾಣ ಬಿಟ್ಟಿದ್ದು, 85,571 ಸಕ್ರಿಯ ಪ್ರಕರಣಗಳಿವೆ.

English summary
No Mask No Movement: New Campaign to Break Chain of Coronavirus in Rajasthan.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X